ಅಮೆರಿಕಾದಲ್ಲಿ ಒಂದೇ ದಿನ 76570 ಮಂದಿಗೆ ಕೊರೊನಾವೈರಸ್ ಪಾಸಿಟಿವ್!

ವಾಶಿಂಗ್ಟನ್, ಜುಲೈ.24: ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ನೊವೆಲ್ ಕೊರೊನಾವೈರಸ್ ಸೋಂಕು ಹರಡುವಿಕೆಯ ಪ್ರಮಾಣ ದಿನದಿಂದ ದಿನಕ್ಕೆ ಇಂದಿಗೂ ಏರಿಕೆಯಾಗುತ್ತಲೇ ಸಾಗಿದೆ. ಕಳೆದ 24 ಗಂಟೆಗಳಲ್ಲಿ ದಾಖಲಾದ ಸೋಂಕಿತ ಪ್ರಕರಣಗಳ ಸಂಖ್ಯೆ ಆಘಾತವನ್ನು ಉಂಟು ಮಾಡಿದೆ.

ಕಳೆದ 24 ಗಂಟೆಗಳಲ್ಲೇ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ 76570 ಮಂದಿಗೆ ನೊವೆಲ್ ಕೊರೊನಾವೈರಸ್ ಸೋಂಕು ಪತ್ತೆಯಾಗಿದೆ. ಒಂದೇ ದಿನ ದೇಶದಲ್ಲಿ 1225 ಜನರು ಮಹಾಮಾರಿಗೆ ಸಿಕ್ಕು ಪ್ರಾಣ ಬಿಟ್ಟಿದ್ದಾರೆ.

ಕೊರೊನಾವೈರಸ್ ಸೋಂಕಿನಿಂದಾಗಿ ಯುಎಸ್ಎನಲ್ಲಿ ಇದುವರೆಗೂ 1,47,333 ಜನರು ಉಸಿರು ಚೆಲ್ಲಿದ್ದಾರೆ ಎಂದು ಅಮೆರಿಕಾದ ಜಾನ್ಸ್ ಹಾಪ್ ಕಾನ್ಸ್ ವಿಶ್ವವಿದ್ಯಾಲಯ ನೀಡಿದ ದತ್ತಾಂಶಗಳಿಂದ ತಿಳಿದು ಬಂದಿದೆ.

76570 COVID19 Cases And 1,225 Deaths Reported In The United States In The Last 24 hours

ಯುಎಸ್ಎನಲ್ಲಿ ಒಟ್ಟು ಸೋಂಕಿತರ ಪ್ರಮಾಣ:

ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ಇದುವರೆಗೂ 41,69,991 ಜನರಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಈ ಪೈಕಿ 19,79,617 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಬಾಕಿ ಉಳಿದಿರುವ 20,43,041 ಜನ ಕೊರೊನಾವೈರಸ್ ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಇರಿಸಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ದೇಶದಲ್ಲಿ ಇದುವರೆಗೂ 33,11,24,024 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಅಂಕಿ-ಅಂಶಗಳ ಮೂಲಕ ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+