ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ಮೋದಿ ಪ್ರಜಾಪ್ರಭುತ್ವದ ಪಾಠ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 25: ಭಾರತ ಅಭಿವೃದ್ಧಿಯಾದರೆ, ವಿಶ್ವ ಅಭಿವೃದ್ಧಿಯಾಗುತ್ತದೆ. ಭಾರತ ಸುಧಾರಣೆಯಾದ್ರೆ ಇಡೀ ಜಗತ್ತು ಸುಧಾರಣೆಯಾಗುತ್ತದೆ. ಭಾರತದ ಅಭಿವೃದ್ಧಿಯಿಂದ ಪ್ರಪಂಚದ ಅಭಿವೃದ್ಧಿ ವೇಗ ಹೆಚ್ಚಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಯಾವುದೇ ದೇಶದಲ್ಲಿ ಉತ್ತಮ ಆಳ್ವಿಕೆ ನೀಡಬೇಕಾದರೆ ಪ್ರಜಾಪ್ರಭುತ್ವ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ಸಾರಿ ಹೇಳಿದರು.

PM Modi UNGA Speech LIVE Updates:ವಿಶ್ವಸಂಸ್ಥೆ ಸಾಮಾನ್ಯ ಸಭೆ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣPM Modi UNGA Speech LIVE Updates:ವಿಶ್ವಸಂಸ್ಥೆ ಸಾಮಾನ್ಯ ಸಭೆ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಬಗ್ಗೆ ಉಲ್ಲೇಖಿಸಿ ಹೆಮ್ಮೆಯಿಂದ ಮಾತನಾಡಿದರು. ನಾವು ಸಾವಿರಾರು ವರ್ಷಗಳಷ್ಟು ಹಿಂದಕ್ಕೆ ಹೋಗುವ ಪ್ರಜಾಪ್ರಭುತ್ವದ ಶ್ರೇಷ್ಠ ಸಂಪ್ರದಾಯ ಹೊಂದಿದ್ದೇವೆ ಎಂದರು. ಪ್ರಜಾಪ್ರಭುತ್ವದ ಪ್ರಾಮುಖ್ಯತೆ ಮತ್ತು ದೇಶದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉಲ್ಲೇಖಿಸಿದ ಪ್ರಮುಖ ಅಂಶಗಳನ್ನು ಮುಂದೆ ಪಟ್ಟಿ ಮಾಡಲಾಗಿದೆ.

76th UN General Assembly: PM Narendra Modi Top Quotes about Democracy

ಪ್ರಜಾಪ್ರಭುತ್ವದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಉಲ್ಲೇಖ:
* ನಾನು ಪ್ರಜಾಪ್ರಭುತ್ವದ ತಾಯಿ ಎಂದು ಹೆಮ್ಮೆಪಡುವ ದೇಶವನ್ನು ಪ್ರತಿನಿಧಿಸುತ್ತೇನೆ. ಈ ವರ್ಷ ಆಗಸ್ಟ್ 15ರಂದು ಭಾರತವು ಸ್ವಾತಂತ್ರ್ಯದ 75 ನೇ ವರ್ಷಕ್ಕೆ ಕಾಲಿಟ್ಟಿದೆ ಎಂದು ಹೇಳಿದರು.
* ನಮ್ಮ ವೈವಿಧ್ಯತೆಯೇ ನಮ್ಮ ಪ್ರಬಲ ಪ್ರಜಾಪ್ರಭುತ್ವದ ಗುರುತಾಗಿದೆ. ಭಾರತವು ಹತ್ತಾರು ಭಾಷೆಗಳು, ನೂರಾರು ಉಪಭಾಷೆಗಳು, ವಿಭಿನ್ನ ಜೀವನಶೈಲಿ ಮತ್ತು ಪಾಕಪದ್ಧತಿಗಳನ್ನು ಹೊಂದಿರುವ ದೇಶವಾಗಿದೆ. ಇದು ರೋಮಾಂಚಕ ಪ್ರಜಾಪ್ರಭುತ್ವದ ಅತ್ಯುತ್ತಮ ಉದಾಹರಣೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.
* ಒಂದು ಕಾಲದಲ್ಲಿ ತನ್ನ ತಂದೆಗೆ ರೈಲ್ವೆ ನಿಲ್ದಾಣದಲ್ಲಿ ತನ್ನ ಚಹಾ ಅಂಗಡಿಯಲ್ಲಿ ಸಹಾಯ ಮಾಡುತ್ತಿದ್ದ ಚಿಕ್ಕ ಹುಡುಗ ಇಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ಪ್ರಧಾನಿಯಾಗಿ ನಾಲ್ಕನೇ ಬಾರಿಗೆ ಭಾಷಣ ಮಾಡುತ್ತಿರುವುದು ನಮ್ಮ ಪ್ರಜಾಪ್ರಭುತ್ವದ ಬಲವನ್ನು ಪ್ರದರ್ಶಿಸುತ್ತದೆ.
* ದೇಶದ ಸರ್ಕಾರದ ಮುಖ್ಯಸ್ಥನಾಗಿ ಸೇವೆ ಆರಂಭಿಸಿದ ನನ್ನ ಸೇವೆಗೆ ಶೀಘ್ರದಲ್ಲೇ 20 ವರ್ಷ ಪೂರೈಸಲಿದ್ದೇನೆ. ಮೊದಲು, ಗುಜರಾತ್‌ನ ಸುದೀರ್ಘ ಅವಧಿಯ ಮುಖ್ಯಮಂತ್ರಿಯಾಗಿ ಮತ್ತು ನಂತರ ಕಳೆದ ಏಳು ವರ್ಷಗಳ ಕಾಲ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿದ್ದೇವೆ ಎಂದು ಹೇಳಿದರು.
* ಹೌದು, ಪ್ರಜಾಪ್ರಭುತ್ವವು ತಲುಪಿಸಬಹುದು. ಹೌದು, ಪ್ರಜಾಪ್ರಭುತ್ವ ತಲುಪಿದೆ, ಗುಜರಾತ್ ಮುಖ್ಯಮಂತ್ರಿಯಾಗಿ ಮತ್ತು ಭಾರತೀಯ ಪ್ರಧಾನಿಯಾಗಿ ತನ್ನದೇ 20 ವರ್ಷಗಳ ಸರ್ಕಾರದ ಮುಖ್ಯಸ್ಥರಾಗಿ ಪ್ರಧಾನಿ ಮೋದಿ ಒತ್ತು ನೀಡಿದರು.

English summary
76th UN General Assembly: PM Narendra Modi Top Quotes about Democracy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X