ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಕೊವಿಡ್-19 ಲಸಿಕೆ ಉತ್ಪಾದಿಸಲು ಪ್ರಧಾನಿ ಮೋದಿ ಆಹ್ವಾನ

|
Google Oneindia Kannada News

ನ್ಯೂಯಾರ್ಕ್, ಸೆಪ್ಟೆಂಬರ್ 25: ವಿಶ್ವಸಂಸ್ಥೆಯ 76ನೇ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಕೊವಿಡ್-19 ಲಸಿಕೆ ಉತ್ಪಾದನೆ ಮಾಡುವುದಕ್ಕೆ ಭಾರತಕ್ಕೆ ಬನ್ನಿ ಎಂದು ಅಂತಾರಾಷ್ಟ್ರೀಯ ಲಸಿಕೆ ಉತ್ಪಾದನಾ ಕಂಪನಿಗಳಿಗೆ ಆಹ್ವಾನ ನೀಡಿದ್ದಾರೆ.

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿ ನಿಯಂತ್ರಿಸುವ ನಿಟ್ಟಿನಲ್ಲಿ ಭಾರತವು ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತ ಅಭಿವೃದ್ಧಿಯಾದರೆ, ವಿಶ್ವ ಅಭಿವೃದ್ಧಿಯಾಗುತ್ತದೆ. ಭಾರತ ಸುಧಾರಣೆಯಾದ್ರೆ ಇಡೀ ಜಗತ್ತು ಸುಧಾರಣೆಯಾಗುತ್ತದೆ. ಭಾರತದ ಅಭಿವೃದ್ಧಿಯಿಂದ ಪ್ರಪಂಚದ ಅಭಿವೃದ್ಧಿ ವೇಗ ಹೆಚ್ಚಾಗುತ್ತದೆ ಎಂದು ಹೇಳಿದ್ದಾರೆ.

76th UNGA: PM Modi Invite International Compnies to india for manufacture Covid-19 vaccines

ಕಳೆದ 1.5 ವರ್ಷಗಳಲ್ಲಿ ಇಡೀ ಜಗತ್ತು ಎದುರಿಸಿದ ಸಾಂಕ್ರಾಮಿಕ ಪಿಡುಗು 100 ವರ್ಷಗಳಲ್ಲೇ ಅತ್ಯಂತ ಕೆಟ್ಟದಾಗಿತ್ತು. ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ಪ್ರಾಣ ಕಳೆದುಕೊಂಡ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.

ಅಂತಾರಾಷ್ಟ್ರೀಯ ಕಂಪನಿಗಳಿಗೆ ಪ್ರಧಾನಿ ಆಹ್ವಾನ:
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಜಾಗತಿಕ ಆರ್ಥಿಕತೆಯನ್ನು ಮತ್ತಷ್ಟು ವೈವಿಧ್ಯಗೊಳಿಸುವುದನ್ನು ಕಲಿಸಿದೆ. ಜಾಗತಿಕ ಮೌಲ್ಯ ಸರಪಳಿಗಳ ವಿಸ್ತರಣೆ ಬಹಳ ಮುಖ್ಯವಾಗಿದೆ. ನಮ್ಮ ಆತ್ಮನಿರ್ಭರ ಭಾರತ ಅಭಿಯಾನವು ಈ ಭಾವನೆಯಿಂದ ಪ್ರೇರಿತವಾಗಿದೆ. ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಇಡೀ ಜಗತ್ತು ಒಂದಾಗಿ ಹೋರಾಡಬೇಕಿದೆ. ಪ್ರಪಂಚದಾದ್ಯಂತ ಇರುವ ಕೊವಿಡ್-19 ಲಸಿಕೆ ಉತ್ಪಾದಿಸುವ ಎಲ್ಲ ಅಂತಾರಾಷ್ಟ್ರೀಯ ಕಂಪನಿಗಳಿಗೆ ನಾನು ಆಹ್ವಾನ ನೀಡುತ್ತಿದ್ದೇನೆ. ಭಾರತಕ್ಕೆ ಬನ್ನಿ ಅಲ್ಲಿ ನಿಮ್ಮ ಲಸಿಕೆಯನ್ನು ಉತ್ಪಾದಿಸಿ ಎಂದು ಮೋದಿ ಕರೆ ನೀಡಿದ್ದಾರೆ.

12 ವರ್ಷ ಮೇಲ್ಪಟ್ಟವರಿಗೆ ಕೊರೊನಾವೈರಸ್ ಲಸಿಕೆ:
ಭಾರತವು ವಿಶ್ವದ ಮೊದಲ ಡಿಎನ್ಎ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಗೆ ತಿಳಿಸಲು ನಾನು ಬಯಸುತ್ತೇನೆ. ಇದನ್ನು 12 ವರ್ಷಕ್ಕಿಂತ ಮೇಲ್ಪಟ್ಟ ಯಾರಿಗಾದರೂ ನೀಡಬಹುದು. ಒಂದು ಎಂಆರ್‌ಎನ್‌ಎ ಲಸಿಕೆ ಅಭಿವೃದ್ಧಿಯು ಅಂತಿಮ ಹಂತದಲ್ಲಿದೆ. ಭಾರತೀಯ ವಿಜ್ಞಾನಿಗಳು ಸಹ COVID19 ವಿರುದ್ಧ ಲಸಿಕೆಯನ್ನು ಅಭಿವೃದ್ಧಿಪಡಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.84.89 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿಯಲ್ಲಿ ಲಸಿಕೆ ವಿತರಣೆ ಅಭಿಯಾನವನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ದೇಶದಲ್ಲಿ 84.89 ಕೋಟಿಗೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 252 ದಿನಗಳಾಗಿದೆ. ಕಳೆದ 24 ಗಂಟೆಗಳಲ್ಲಿ 71,04,051 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದ್ದು, ಈವರೆಗೂ 84,89,29,160 ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 82,57,88,115 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
76th UN General Assembly: PM Modi Invite International Compnies to india for manufacture Covid-19 vaccines.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X