ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶ್ವ ಆರೋಗ್ಯ ಸಂಸ್ಥೆಗೆ ದಾಖಲೆಗಳನ್ನು ಸಲ್ಲಿಕೆ ಮಾಡಿದ ಭಾರತ್ ಬಯೋಟೆಕ್

|
Google Oneindia Kannada News

ನವದೆಹಲಿ, ಜುಲೈ 13: ವಿಶ್ವ ಆರೋಗ್ಯ ಸಂಸ್ಥೆಯು ಕೇಳಿದ್ದ ಎಲ್ಲಾ ದಾಖಲೆಗಳನ್ನು ಸಲ್ಲಿಕೆ ಮಾಡಿರುವುದಾಗಿ ಭಾರತ್ ಬಯೋಟೆಕ್ ಹೇಳಿದೆ.

ಕೋವ್ಯಾಕ್ಸಿನ್ ತುರ್ತು ಬಳಕೆಗೆ ಅನುಮತಿ ನೀಡುವಂತೆ ಭಾರತ್ ಬಯೋಟೆಕ್‌ ವಿಶ್ವ ಆರೋಗ್ಯ ಸಂಸ್ಥೆಗೆ ಮನವಿ ಮಾಡಿತ್ತು, ಅದರ ಪ್ರಕಾರ ಎಲ್ಲಾ ದಾಖಲೆಗಳನ್ನು ಸಲ್ಲಿಸಿದೆ.

ಒಂದೇ ವ್ಯಕ್ತಿಗೆ ಎರಡು ಭಿನ್ನ ಕೊರೊನಾ ಲಸಿಕೆ; ಅಪಾಯಕಾರಿ ಎಂದ WHOಒಂದೇ ವ್ಯಕ್ತಿಗೆ ಎರಡು ಭಿನ್ನ ಕೊರೊನಾ ಲಸಿಕೆ; ಅಪಾಯಕಾರಿ ಎಂದ WHO

ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಭಾರತ್ ಬಯೋಟೆಕ್ ಸಂಸ್ಥೆ, ತನ್ನ ಕೋವಿಡ್ -19 ಲಸಿಕೆ ಕೋವಾಕ್ಸಿನ್‌ ಅನ್ನು ತುರ್ತು ಬಳಕೆಯ ಪಟ್ಟಿಗೆ(ಇಯುಎಲ್) ಸೇರಿಸಲು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ವಿಶ್ವ ಆರೋಗ್ಯ ಸಂಸ್ಥೆಗೆ ಸಲ್ಲಿಸಲಾಗಿದ್ದು, ಶೀಘ್ರದಲ್ಲಿಯೇ ಅನುಮೋದನೆ ಸಿಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಈ ಕುರಿತಂತೆ ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಭಾರತ್ ಬಯೋಟೆಕ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷ ಮತ್ತು ಎಂಡಿ ಕೃಷ್ಣ ಎಲಾ ಅವರು, 'ಕೋವಾಕ್ಸಿನ್‌ನ ತುರ್ತು ಬಳಕೆ ಪಟ್ಟಿ (ಇಯುಎಲ್) ಗೆ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಜುಲೈ 9 ರವರೆಗೆ ಡಬ್ಲ್ಯುಎಚ್‌ಒಗೆ ಸಲ್ಲಿಸಲಾಗಿದೆ.

ನಾವು ಶೀಘ್ರದಲ್ಲಿಯೇ ಡಬ್ಲ್ಯುಎಚ್‌ಒನಿಂದ ಇಯುಎಲ್ ಸ್ವೀಕರಿಸುತ್ತೇವೆ ಎಂಬ ನಿರೀಕ್ಷೆಯೊಂದಿಗೆ ಪರಿಶೀಲನಾ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

 ಸೌಮ್ಯ ಸ್ವಾಮಿನಾಥನ್ ಮಾತು

ಸೌಮ್ಯ ಸ್ವಾಮಿನಾಥನ್ ಮಾತು

" ನಾವು ಕೋವಾಕ್ಸಿನ್ ದತ್ತಾಂಶಗಳ ಮೇಲೂ ಗಮನ ಹರಿಸಿದ್ದು, ಭಾರತ್ ಬಯೋಟೆಕ್ ಈಗ ತಮ್ಮ ಡೇಟಾವನ್ನು ನಮ್ಮ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲು ಪ್ರಾರಂಭಿಸಿದೆ. ನಾವು ಪ್ರಸ್ತುತ ಇಯುಎಲ್‌ನೊಂದಿಗೆ ಆರು ಲಸಿಕೆಗಳನ್ನು ಅನುಮೋದಿಸಿದ್ದೇವೆ ಮತ್ತು ನಮ್ಮ ಸ್ಟ್ರಾಟೆಜಿಕ್ ಅಡ್ವೈಸರಿ ಗ್ರೂಪ್ ಆಫ್ ಎಕ್ಸ್‌ಪರ್ಟ್ಸ್ (ಎಸ್‌ಎಜಿಇ) ಯಿಂದ ಹಲವು ಲಸಿಕೆಗಳ ಶಿಫಾರಸುಗಳನ್ನು ಹೊಂದಿದ್ದೇವೆ.ದತ್ತಾಂಶ ನಮಗೆ ದೊರೆತ ಕೂಡಲೇ ಸಮಿತಿಯಿಂದ ಪರಿಶೀಲನಾ ಕಾರ್ಯ ಪ್ರಾರಂಭಿಸುತ್ತೇವೆ" ಎಂದು ಸೌಮ್ಯ ಸ್ವಾಮಿನಾಥನ್ ಹೇಳಿದ್ದಾರೆ.

 ಪ್ರಕ್ರಿಯೆ ಸುಗಮ

ಪ್ರಕ್ರಿಯೆ ಸುಗಮ

ಡಬ್ಲ್ಯುಎಚ್‌ಒ ಮಾರ್ಗಸೂಚಿಗಳ ಪ್ರಕಾರ, ಇಯುಎಲ್ ಎನ್ನುವುದು ಸಾರ್ವಜನಿಕ ಆರೋಗ್ಯ ತುರ್ತು ಸಂದರ್ಭಗಳಲ್ಲಿ ಹೊಸ ಅಥವಾ ಪರವಾನಗಿ ಪಡೆಯದ ಉತ್ಪನ್ನಗಳನ್ನು ಬಳಸುವ ಪ್ರಕ್ರಿಯೆಯನ್ನು ಸುಗಮಗೊಳಿಸುವ ಕಾರ್ಯವಿಧಾನವಾಗಿದೆ.

 ಕೋವ್ಯಾಕ್ಸಿನ್ ಕುರಿತು ವಿಶ್ವ ಆರೋಗ್ಯ ಸಂಸ್ಥೆ ನಿರ್ಧಾರ

ಕೋವ್ಯಾಕ್ಸಿನ್ ಕುರಿತು ವಿಶ್ವ ಆರೋಗ್ಯ ಸಂಸ್ಥೆ ನಿರ್ಧಾರ

ಇನ್ನು ಕಳೆದ ವಾರ, ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಅವರು ನಾಲ್ಕರಿಂದ ಆರು ವಾರಗಳಲ್ಲಿ ತುರ್ತು ಬಳಕೆಯ ಪಟ್ಟಿಯಲ್ಲಿ ಭಾರತ್ ಬಯೋಟೆಕ್‌ನ ಕೋವಿಡ್ -19 ಲಸಿಕೆ ಕೋವಾಕ್ಸಿನ್ ಬಗ್ಗೆ ಜಾಗತಿಕ ಆರೋಗ್ಯ ಸಂಸ್ಥೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದ್ದರು.

 ಭಾರತದಲ್ಲಿ ಎಷ್ಟು ಮಂದಿಗೆ ಕೊರೊನಾ ಲಸಿಕೆ

ಭಾರತದಲ್ಲಿ ಎಷ್ಟು ಮಂದಿಗೆ ಕೊರೊನಾ ಲಸಿಕೆ

ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ವಿರುದ್ಧ ಹೋರಾಟಕ್ಕೆ ಲಸಿಕೆ ಅಭಿಯಾನ ಆರಂಭಿಸಿ 178 ದಿನಗಳಾಗಿವೆ. ದೇಶದಲ್ಲಿ ಈವರೆಗೂ 38 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಣೆ ಮಾಡಲಾಗಿದೆ.

ದೇಶದಲ್ಲಿ ಸೋಮವಾರ ರಾತ್ರಿ 7 ಗಂಟೆ ವೇಳೆಗೆ 37,03,423 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಒಟ್ಟು 38,11,04,836 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

18 ರಿಂದ 44 ವಯೋಮಾನದ 16,61,804 ಜನರಿಗೆ ಮೊದಲ ಡೋಸ್ ಹಾಗೂ 1,40,806 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 11,41,34,915 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 38,88,828 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

English summary
Bharat Biotech on Monday said that all documents required for Emergency Use Listing (EUL) of Covaxin have been submitted to the World Health Organisation (WHO).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X