• search
  • Live TV
ವಾಷಿಂಗ್ಟನ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನಿಮಗಿದು ಗೊತ್ತೇ..? ಈಗಾಗಲೇ 40 ಲಕ್ಷ ಅಮೆರಿಕನ್ನರು ವೋಟ್ ಹಾಕಿದ್ದಾರೆ..!

|

1.. 2.. 3.. ಹೀಗೆ ಇನ್ನು 25 ದಿನಗಳು ಕಳೆದು ಹೋದರೆ ಆಯ್ತು, ಅಮೆರಿಕದಲ್ಲಿ ಅಧಿಕೃತವಾಗಿ ಸಾರ್ವತ್ರಿಕ ಮತದಾನ ಆರಂಭವಾಗಲಿದೆ. ಆದರೆ ಈ ಬಾರಿ ಕೊರೊನಾ ಕಂಟಕದ ಹಿನ್ನೆಲೆಯಲ್ಲಿ ಅಮೆರಿಕದ ಬಹುಪಾಲು ರಾಜ್ಯಗಳಲ್ಲಿ ಮುಂಚಿತವಾಗಿ ಮತದಾನ ಆರಂಭಿಸಲಾಗಿದೆ. ಹೀಗಾಗಿ ಸಾರ್ವತ್ರಿಕ ಚುನಾವಣೆಗೆ 25 ದಿನ ಬಾಕಿ ಇರುವಾಗಲೇ 40 ಲಕ್ಷಕ್ಕೂ ಹೆಚ್ಚು ಅಮೆರಿಕನ್ನರು ತಮ್ಮ ಹಕ್ಕು ಪ್ರತಿಪಾದಿಸಿದ್ದಾರೆ.

2016ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಮುಂಚಿತವಾಗಿ ಮತ ಚಲಾಯಿಸಿದವರ ಸಂಖ್ಯೆ 50 ಪಟ್ಟು ಹೆಚ್ಚಾಗಿದೆ. 2016ರಲ್ಲಿ ಈ ಹೊತ್ತಿಗೆ 75 ಸಾವಿರ ಮಂದಿ ಅಂಚೆ ಮತದಾನ ಮೂಲಕ, ಮುಂಚಿತವಾಗಿ ತಮ್ಮ ಹಕ್ಕು ಚಲಾಯಿಸಿದ್ದರು. ಈ ಬಾರಿ ಕೊರೊನಾ ಸೋಂಕು ವಕ್ಕರಿಸಿದ್ದು, ಇಡೀ ಅಮೆರಿಕ ಕೊರೊನಾ ಕೂಪದಲ್ಲಿ ನಲುಗಿದೆ.

ಅಮೆರಿಕ ಚುನಾವಣೆ Poll: ಯಾರಿಗೆ ಸೋಲು, ಯಾರಿಗೆ ಗೆಲುವು..?

ಸದ್ಯಕ್ಕೆ ಚುನಾವಣೆ ನೆಪದಲ್ಲಿ ಮತ್ತೆ ಜನ ಗುಂಪುಗೂಡಿದರೆ ಸೋಂಕು ಇನ್ನಷ್ಟು ಮಂದಿಗೆ ವ್ಯಾಪಿಸುವ ಆತಂಕ ಇರುವ ಹಿನ್ನೆಲೆಯಲ್ಲಿ ಮುಂಚಿತವಾಗಿ ಮತದಾನ ಪ್ರಕ್ರಿಯೆ ಆರಂಭಿಸಲಾಗಿತ್ತು. ಇದಕ್ಕೆ ಅಮೆರಿಕದ ನಾಗರಿಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಮೂಲಕ ಅಮೆರಿಕದಲ್ಲಿ 1908ರ ಚುನಾವಣೆ ತರುವಾಯ ಅಂಚೆ ಮತದಾನ 2020ರಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾಗಿದೆ.

ಅಂಚೆ ಮತದಾನಕ್ಕೆ ಬಹುದೊಡ್ಡ ಇತಿಹಾಸವಿದೆ..!

ಅಂಚೆ ಮತದಾನಕ್ಕೆ ಬಹುದೊಡ್ಡ ಇತಿಹಾಸವಿದೆ..!

ಭಾರತದಲ್ಲೂ ಅಂಚೆ ಮತದಾನ ವ್ಯವಸ್ಥೆ ಇದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಂಚೆ ಮತದಾನ ವಿಶಿಷ್ಟ ಸ್ಥಾನ ಪಡೆದಿದೆ. ಏಕೆಂದರೆ ಯಾವುದೋ ಕೆಲಸದ ನಿಮಿತ್ತ, ಇನ್ಯಾವುದೋ ಊರಲ್ಲಿ ಇರುವವರು ಇಲ್ಲ ಸಕಾಲಕ್ಕೆ ಸ್ವಕ್ಷೇತ್ರಕ್ಕೆ ಬಂದು ಮತಹಾಕಲು ಸಾಧ್ಯವಾಗದಿರುವ ಸರ್ಕಾರಿ ನೌಕರರು (or) ಸೈನಿಕರಿಗೆ ಅಂಚೆ ಮತದಾನ ಸಹಕಾರಿ. ಆದರೆ ಟ್ರಂಪ್ ಇದನ್ನೇ ಚುನಾವಣಾ ಅಸ್ತ್ರ ಮಾಡಿಕೊಂಡು, ಅಂಚೆ ಮತದಾನ ಪದ್ಧತಿಯ ಕುರಿತು ನೂರಾರು ಆರೋಪ ಮಾಡಿದ್ದರು. ಇದಕ್ಕೆ ಸ್ವತಃ ಟ್ರಂಪ್ ಪಕ್ಷದವರು ಕೂಡ ವಿರೋಧ ವ್ಯಕ್ತಪಡಿಸಿದ್ದರು.

ಸುಮ್ಮನೆ ಖುರ್ಚಿ ಬಿಡಲ್ಲ ಎಂದಿದ್ದರು ಟ್ರಂಪ್..!

ಸುಮ್ಮನೆ ಖುರ್ಚಿ ಬಿಡಲ್ಲ ಎಂದಿದ್ದರು ಟ್ರಂಪ್..!

ಕೆಲ ದಿನಗಳ ಹಿಂದೆ ಟ್ರಂಪ್ ನೀಡಿದ್ದ ಹೇಳಿಕೆ ಭಾರಿ ವಿವಾದ ಸೃಷ್ಟಿ ಮಾಡಿತ್ತು. ನವೆಂಬರ್ ಚುನಾವಣೆಯಲ್ಲಿ ಸೋತರೆ ಶಾಂತಿಯುತವಾಗಿ ಅಧಿಕಾರ ಹಸ್ತಾಂತರ ಮಾಡುವ ಗ್ಯಾರಂಟಿ ಕೊಡಲ್ಲ ಎಂದಿದ್ದ ಟ್ರಂಪ್ ವಿರುದ್ಧ ಅಮೆರಿಕದ ರಾಜಕೀಯ ನಾಯಕರು ಪಕ್ಷಾತೀತವಾಗಿ ತಿರುಗಿಬಿದ್ದಿದ್ದರು. ನೇರವಾಗಿ ಅಂಚೆ ಮತದಾನವನ್ನೇ ಟಾರ್ಗೆಟ್ ಮಾಡಿದ್ದ ಟ್ರಂಪ್ ಹೀಗೆ ಹೇಳಿಕೆ ನೀಡಿದ್ದರು. ಈ ಬಾರಿ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮ ನಡೆಯಬಹುದು ಎಂದಿದ್ದ ಅವರು, ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ವಿದೇಶಿ ಹಸ್ತಕ್ಷೇಪಕ್ಕಿಂತಲೂ ಅಂಚೆ ಮತದಾನವೇ ಬಹುದೊಡ್ಡ ಬೆದರಿಕೆಯಾಗಿದೆ ಎಂದು ಊಹಿಸಿದ್ದರು.

ಅಮೆರಿಕ ಅಧ್ಯಕ್ಷರ ಆಯ್ಕೆಗೆ ದಿನಗಣನೆ, 244 ವರ್ಷಗಳ ಮಹಾನ್ ಇತಿಹಾಸ

ಟ್ರಂಪ್ ವಿರುದ್ಧ ತಿರುಗಿಬಿದ್ದಿದ್ದ ಸ್ವಪಕ್ಷೀಯರು..!

ಟ್ರಂಪ್ ವಿರುದ್ಧ ತಿರುಗಿಬಿದ್ದಿದ್ದ ಸ್ವಪಕ್ಷೀಯರು..!

ಅಮೆರಿಕ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟಿರುವ ದೇಶ. ಅಲ್ಲಿ ಪಕ್ಷಕ್ಕಿಂತ ಪ್ರಜಾಪ್ರಭುತ್ವದ ಮೌಲ್ಯ, ಸಿದ್ಧಾಂತ ಮುಖ್ಯ. ಹೀಗಾಗಿ ಟ್ರಂಪ್ ನೀಡಿರುವ ಹೇಳಿಕೆ ಪ್ರಜಾಪ್ರಭುತ್ವ ವಿರೋಧಿ ಎಂದು ಸ್ವತಃ ಟ್ರಂಪ್ ಪಕ್ಷದವರೇ ಟೀಕಿಸಿದ್ದರು. ರಿಪಬ್ಲಿಕನ್ ಪಕ್ಷದ ಮಿಟ್ ರೊಮ್ನಿ ಟ್ರಂಪ್‌ ನೀಡಿರುವ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದರು. ಟ್ರಂಪ್‌ ಹೇಳಿಕೆ ಊಹಿಸಲು ಕೂಡ ಸಾಧ್ಯವಿಲ್ಲ, ಇದನ್ನ ಒಪ್ಪಲು ಆಗಲ್ಲ ಎಂದಿದ್ದಾರೆ. ಶಾಂತಿಯುತ ಅಧಿಕಾರ ಹಸ್ತಾಂತರ ಪ್ರಜಾಪ್ರಭುತ್ವದ ಮೂಲ ತತ್ವ ಎಂದು ಮಿಟ್ ರೊಮ್ನಿ ಟ್ರಂಪ್‌ಗೆ ಡೆಮಾಕ್ರಸಿ ಪಾಠ ಮಾಡಿದ್ದರು.

‘ಯಾರದ್ದೋ ವೋಟ್ ಇನ್ಯಾರೋ ಹಾಕ್ತಾರೆ’

‘ಯಾರದ್ದೋ ವೋಟ್ ಇನ್ಯಾರೋ ಹಾಕ್ತಾರೆ’

ಟ್ರಂಪ್ ಹೇಳುವ ಪ್ರಕಾರ ಅಂಚೆ ಮತದಾನದಿಂದ ನಕಲಿ ಮತದಾನಕ್ಕೆ ಅವಕಾಶ ನೀಡಿದಂತಾಗುತ್ತೆ. ಇಲ್ಲಿ ಯಾರದ್ದೋ ಮತವನ್ನು ಮತ್ತೊಬ್ಬರು ಚಲಾಯಿಸುತ್ತಾರೆ. ಸಾವಿರಾರು ಮತಪತ್ರಗಳು ನಾಪತ್ತೆಯಾಗಬಹುದು ಅನ್ನೋದು ಟ್ರಂಪ್‌ಗೆ ಕಾಡುತ್ತಿರುವ ಅನುಮಾನ. ಇಷ್ಟೆಲ್ಲದರ ನಡುವೆಯೂ ಡೆಮಾಕ್ರಟಿಕ್ ಲೀಡರ್ಸ್ ಅಂಚೆ ಮತದಾನದ ಪರವಾಗಿ ಗಟ್ಟಿ ನಿಲುವು ತಾಳಿದ್ದಾರೆ. ಮೊದಲಿನಿಂದ ಅಂಚೆ ಮತದಾನ ಪ್ರಕ್ರಿಯೆ ನಡೆದುಕೊಂಡು ಬಂದಿದೆ. ಕೊರೊನಾ ಭೀತಿಯಿರುವ ಸಂದರ್ಭ ಅಂಚೆ ಮತದಾನ ಪ್ರಕ್ರಿಯೆ ಆದ್ಯತೆಯಾಗಿದೆ ಎನ್ನುತ್ತಿದ್ದಾರೆ. ಆದರೆ ಟ್ರಂಪ್‌ಗೆ ಮಾತ್ರ ಅಂಚೆ ಮತದಾನ ಬಿಲ್‌ಕುಲ್ ಇಷ್ಟವಿಲ್ಲ, ಹೀಗಾಗಿ ನಾನು ಸೋತರೆ ನೇರವಾಗಿ ಸುಪ್ರೀಂಕೋರ್ಟ್‌ಗೆ ಹೋಗಲಿದ್ದೇನೆ ಎಂಬ ಸಂದೇಶವನ್ನು ಚುನಾವಣೆಗೂ ಮೊದಲೇ ರವಾನಿಸಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಟ್ರಂಪ್‌ಗೆ ಭಾರಿ ಮುಖಭಂಗ

ಸಮೀಕ್ಷೆಗಳಲ್ಲಿ ಸೋಲು ಕಂಡಿರುವ ಟ್ರಂಪ್

ಸಮೀಕ್ಷೆಗಳಲ್ಲಿ ಸೋಲು ಕಂಡಿರುವ ಟ್ರಂಪ್

ಈಗಾಗಲೇ ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಡೊನಾಲ್ಡ್ ಟ್ರಂಪ್ ಸೋಲು ಕಂಡಿದ್ದಾರೆ. ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡೆನ್ ಟ್ರಂಪ್‌ಗಿಂತ ಮುನ್ನಡೆ ಕಾಯ್ದುಕೊಂಡಿದ್ದಾರೆ. ಹೀಗಾಗಿಯೇ ಟ್ರಂಪ್ ಈ ರೀತಿ ಮತದಾನ ಪ್ರಕ್ರಿಯೆ ಮೇಲೆಯೇ ಆರೋಪ ಮಾಡುತ್ತಿದ್ದಾರೆ ಅನ್ನೋದು ಡೆಮಾಕ್ರಟಿಕ್ ಪಕ್ಷದವರ ಆರೋಪ. ಜಾರ್ಜ್ ಫ್ಲಾಯ್ಡ್ ಹತ್ಯೆ ನಂತರ ಭುಗಿಲೆದ್ದಿರುವ ಜನಾಂಗೀಯ ಸಂಘರ್ಷ ಟ್ರಂಪ್‌ಗೆ ಸಾಕಷ್ಟು ಹಿನ್ನಡೆ ಉಂಟಾಗಿದೆ. ಜೊತೆಗೆ ಕೊರೊನಾ ಸಂಕಷ್ಟ ಹಾಗೂ ಕ್ಯಾಲಿಫೋರ್ನಿಯ ಕಾಡ್ಗಿಚ್ಚು ಕೂಡ ಟ್ರಂಪ್‌ ಮರು ಆಯ್ಕೆಗೆ ದೊಡ್ಡ ಅಡ್ಡಿಯಾಗಿದೆ. ಹೀಗಾಗಿಯೇ ಟ್ರಂಪ್ ಅಂಚೆ ಮತದಾನದ ವಿರುದ್ಧ ಮಾತನಾಡುವ ಮೂಲಕ ಹೊಸ ಕ್ಯಾತೆ ತೆಗೆದಿದ್ದರು ಎಂಬುದು ವಿಪಕ್ಷ ನಾಯಕರ ಆರೋಪವಾಗಿತ್ತು. ಈ ವಾದ, ವಿವಾದ ಹಾಗೂ ಬೇಕು-ಬೇಡಗಳ ನಡುವೆಯೂ ಅಂಚೆ ಮತದಾನ ಮುನ್ನಡೆದಿದ್ದು, ಅಮೆರಿಕ ಅಧ್ಯಕ್ಷರ ಆಯ್ಕೆಗೆ ಕೌಂಟ್‌ಡೌನ್ ಶುರುವಾಗಿದೆ.

English summary
Already more than 4 million American voters cast their votes for presidential election. Because of corona pandemic several states in US started early voting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X