ಕೋವಿಡ್ 19: ಭಾರತದಿಂದ ಪ್ರಯಾಣಿಸುವವರಿಗೆ ಅಮೆರಿಕ ನಿರ್ಬಂಧ

ವಾಷಿಂಗ್ಟನ್, ಮೇ 1: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರುತ್ತಿರುವ ಹಿನ್ನೆಲೆಯಲ್ಲಿ ಭಾರತದಿಂದ ಪ್ರಯಾಣಿಸುವವರಿಗೆ ಅಮೆರಿಕ ನಿರ್ಬಂಧ ಹೇರಿದೆ.

ಈ ನಿಯಮ ಅಮೆರಿಕನ್ ನಾಗರಿಕರು, ಶಾಶ್ವತ ನಿವಾಸಿಗಳು ಅಥವಾ ಇತರ ವಿನಾಯಿತಿ ಪಡೆದವರಿಗೆ ಅನ್ವಯಿಸುವುದಿಲ್ಲ. ಈ ನಿಯಮ ಮೇ.4 ರಿಂದ ಜಾರಿಯಾಗಲಿದೆ ಎಂದು ಜೆನ್ ಸಾಕಿ ಮಾಹಿತಿ ನೀಡಿದ್ದಾರೆ.

ಸರ್ಕಾರಿ ರೋಗ ನಿಯಂತ್ರಣ ಸಂಸ್ಥೆಗಳ ಸಲಹೆಯ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಸಾಕಿ ತಿಳಿಸಿದ್ದಾರೆ. ಸೋಂಕು ತೀವ್ರವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಕೆನಡಾ, ಯುಎಇ ಸೇರಿದಂತೆ ಹಲವು ದೇಶಗಳು ಭಾರತದ ಪ್ರಯಾಣವನ್ನು ತಾತ್ಕಾಲಿಕವಾಗಿ ನಿಷೇಧಿಸಿವೆ.

America To Restrict Travel From India Starting May 4

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4 ಲಕ್ಷ ದಾಟಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. ಕಳೆದ ಒಂದು ದಿನದಲ್ಲಿ 4,01,993, ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 3523 ಮಂದಿ ಸಾವನ್ನಪ್ಪಿದ್ದು, 2,99,988 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಒಟ್ಟು 1,91,64,969 ಪ್ರಕರಣಗಳಿವೆ, 32,68,710 ಸಕ್ರಿಯ ಪ್ರಕರಣಗಳಿವೆ, ಇದುವರೆಗೆ 2,11,853 ಮಂದಿ ಮೃತಪಟ್ಟಿದ್ದಾರೆ. ಆಸ್ಪತ್ರೆಯಿಂದ ಒಟ್ಟು 1,56,84,406 ಮಂದಿ ಬಿಡುಗಡೆಗೊಂಡಿದ್ದಾರೆ.

ಇದುವರೆಗೂ 15,49,89,635 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ, ಏಪ್ರಿಲ್ 30ರವರೆಗೆ 28,83,37,385 ಮಾದರಿಗಳನ್ನು ಪರೀಕ್ಷಿಸಲಾಗಿದೆ ಏಪ್ರಿಲ್ 30 ರಂದು 19,45,299 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+