• search
  • Live TV
ವಾಷಿಂಗ್ಟನ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪ್ರಕೃತಿ ಜೊತೆ ಮಾನವರೂ ಸರ್ವನಾಶ! ವರ್ಷಕ್ಕೆ ಕೋಟಿ ಕೋಟಿ ಮರ ಉಡೀಸ್!

|
Google Oneindia Kannada News

ಪರಿಸರ ದಿನಾಚರಣೆ ಹೆಸರಲ್ಲಿ ದೊಡ್ಡ ದೊಡ್ಡ ಪೋಸ್ಟ್‌ ಹಾಕಿ, ಊರಿಗೆಲ್ಲಾ ನೀತಿ ಹೇಳುವ 'ವಿಶ್ವದ ದೊಡ್ಡಣ್ಣ' ಅಮೆರಿಕ ನಿರಂತರವಾಗಿ ಪ್ರಕೃತಿ ನಾಶಮಾಡುತ್ತಿದೆ. ದಿನದಿನಕ್ಕೆ ಕಾಡು ಕಡಮೆಯಾಗಿ, ಅಲ್ಲಿ ಸಸ್ಯ ಸಂತತಿಯೇ ನಾಶವಾಗುತ್ತಿವೆ. ಅದ್ರಲ್ಲೂ ಅಮೆರಿಕದ ಸಿಟಿಗಳಲ್ಲಿ ಪ್ರತಿವರ್ಷವೂ ಸುಮಾರು 3 ಕೋಟಿ 60 ಲಕ್ಷ ಮರಗಳನ್ನ ಕಡಿಯಲಾಗುತ್ತಿದೆ.

ಬಹುತೇಕ ನಗರ ಭಾಗಗಳಲ್ಲಿ ಮರಗಳೇ ನಾಶವಾಗುತ್ತಿವೆ, ಮುಂದಿನ ದಿನಗಳಲ್ಲಿ ಇದೆಲ್ಲಾ ದೊಡ್ಡ ಪರಿಣಾಮ ಬೀರುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅಭಿವೃದ್ಧಿಯ ಹೆಸರಲ್ಲಿ ಅಮೆರಿಕ ನಿರಂತರವಾಗಿ ಪ್ರಕೃತಿ ಮೇಲೆ ಶೋಷಣೆ ಮಾಡುತ್ತಿದೆ ಎಂಬ ಆರೋಪವಿದೆ. ಇದಕ್ಕೆ ಪುಷ್ಟಿ ನೀಡುವಂತೆ ತಜ್ಞರ ವರದಿಯೂ ಅಮೆರಿಕದ ಮೇಲೆ ಆರೋಪ ಮಾಡಿದೆ. ಪ್ರತಿವರ್ಷ ಇಷ್ಟೊಂದು ಪ್ರಮಾಣದಲ್ಲಿ ಮರ ಕಡಿದರೆ, ಮುಂದೇನು ಕಥೆ ಎನ್ನುತ್ತಿದ್ದಾರೆ ಪರಿಸರ ಪ್ರೇಮಿಗಳು.

ಭೂಮಿ ಮೇಲೆ ಪ್ರಳಯದ ಮುನ್ಸೂಚನೆ, ಭೂಮಿಗೆ 'ಬೋರ್‌ವೆಲ್' ಕಂಟಕ..!ಭೂಮಿ ಮೇಲೆ ಪ್ರಳಯದ ಮುನ್ಸೂಚನೆ, ಭೂಮಿಗೆ 'ಬೋರ್‌ವೆಲ್' ಕಂಟಕ..!

ಅಮೆರಿಕ ಹೀಗೆ ತನ್ನ ದೇಶದಲ್ಲೇ ಮರ-ಗಿಡ ನಾಶ ಮಾಡುತ್ತಿದ್ದರೂ, ಬೇರೆ ರಾಷ್ಟ್ರಗಳಿಗೆ ಜಾಗತಿಕ ತಾಪಮಾನದ ವಿರುದ್ಧ ಹೋರಾಡಲು ನೀತಿ ಪಾಠ ಮಾಡುತ್ತಿದೆ. ಜೋ ಬೈಡನ್ ಆಡಳಿತ ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂಬುದು ಪರಿಸರ ಪ್ರೇಮಿಗಳ ಆಗ್ರಹ.

 ತಾಪಮಾನಕ್ಕೆ ನಲುಗಿದ ಅಮೆರಿಕ

ತಾಪಮಾನಕ್ಕೆ ನಲುಗಿದ ಅಮೆರಿಕ

ಮಳೆಗಾಲದಲ್ಲಿ ವಿಪರೀತ ಬಿಸಿಲು, ಚಳಿಗಾಲದಲ್ಲಿ ಮಳೆ, ಇನ್ನು ಬೇಸಿಗೆಯಲ್ಲೂ ವರುಣನ ಅಬ್ಬರ. ಹೀಗೆ ಭೂ ವಾತಾವರಣ ವಿಪರೀತ ಬದಲಾಗುತ್ತಿದೆ. ಮಾನವನ ದುರಾಸೆಯಿಂದಾಗಿ ಮಾಲಿನ್ಯ ಸೃಷ್ಟಿಯಾಗಿದೆ. ಮಾಲಿನ್ಯದ ಪರಿಣಾಮ ಭೂಮಿ ಮೇಲಿನ ವಾತಾವರಣ ನಾಶವಾಗುತ್ತಿದೆ. ಯಾವ ಸಮಯದಲ್ಲಿ ಏನಾಗಬೇಕೋ ಅದೆಲ್ಲಾ ಉಲ್ಟಾ ಆಗುತ್ತಿದೆ. ಇದು ಪರಿಸ್ಥಿತಿಯನ್ನು ಮತ್ತಷ್ಟು ಕಠಿಣಗೊಳಿಸಿದೆ. ರೈತರ ಬೆಳೆ ನಾಶವಾಗುವ ಜೊತೆಗೆ ಇದು ಆಹಾರ ಭದ್ರತೆಗೂ ಕಂಟಕ ಎದುರಾಗುವಂತೆ ಮಾಡಿದೆ. ಅಕಾಲಿಕ ಮಳೆ ನೂರಾರು ಅವಾಂತರ ಸೃಷ್ಟಿಸುತ್ತಿದೆ. ಅದರಲ್ಲೂ ಅಮೆರಿಕ ಈ ಜಾಗತಿಕ ತಾಪಮಾನ ಏರಿಕೆಯ ಪರಿಣಾಮ ಅಕ್ಷರಶಃ ನಲಗಿ ಹೋಗಿದೆ.

 ತುರ್ತಾಗಿ ಕ್ರಮ ಕೈಗೊಳ್ಳಬೇಕಿದೆ..!

ತುರ್ತಾಗಿ ಕ್ರಮ ಕೈಗೊಳ್ಳಬೇಕಿದೆ..!

ಬೈಡನ್ ಅಧಿಕಾರಕ್ಕೆ ಬಂದ ಬಳಿಕ ಅಮೆರಿಕದಲ್ಲಿ ಪರಿಸ್ಥಿತಿ ಸುಧಾರಿಸುತ್ತಿದೆ. ಅದರಲ್ಲೂ ಜಾಗತಿಕ ತಾಪಮಾನ ಏರಿಕೆ ನಿಯಂತ್ರಣಕ್ಕೆ ಅಮೆರಿಕ ತನ್ನ ಬದ್ಧ ಶತ್ರು ಚೀನಾ ಜೊತೆಗೂ ಕೈಜೋಡಿಸಿದೆ. ಇದೆಲ್ಲಾ ಸಾಧ್ಯವಾಗಿದ್ದು ಬೈಡನ್ ದೂರದೃಷ್ಟಿಯಿಂದ ಎನ್ನುತ್ತಾರೆ ಪರಿಸರ ತಜ್ಞರು. ಅಲ್ಲದೆ ಈ ಒಪ್ಪಂದ ಸಾಕಷ್ಟು ಮಹತ್ವ ಪಡೆದಿದೆ. ಭೂಮಿ ಮೇಲೆ ತಾಪಮಾನ ಏರಿಕೆ ಹಾಗೂ ವಾತಾವರಣ ಬದಲಾವಣೆ ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿದೆ. ವಿಜ್ಞಾನಿಗಳು ಅದೆಷ್ಟು ಬಾರಿ ಎಚ್ಚರಿಕೆ ನೀಡಿದರೂ ಪ್ರಯೋಜನ ಆಗುತ್ತಿಲ್ಲ. ಪರಿಸ್ಥಿತಿ ಹೀಗಿರುವಾಗ ನಾಯಕನ ಸ್ಥಾನದಲ್ಲಿ ನಿಂತು, ಈ ಸಮಸ್ಯೆ ಬಗೆಹರಿಸಲು ಬಲಾಢ್ಯ ರಾಷ್ಟ್ರಗಳು ಮುಂದಾಗಬೇಕಿದೆ. ಅದರಲ್ಲೂ ಜಾಗತಿಕ ಶಕ್ತಿಗಳು ಎಂದೇ ಗುರುತಿಸಿಕೊಂಡಿರುವ ಅಮೆರಿಕ-ಚೀನಾ ಭೂಮಿ ತಾಪಮಾನ ನಿಯಂತ್ರಣಕ್ಕೆ ತರುವ ಬಗ್ಗೆ ಸಾಕಷ್ಟು ಮುಂಜಾಗ್ರತೆ ವಹಿಸಬೇಕಿದೆ. ಆದರೆ ಇಷ್ಟು ದಿನ ಅದು ಸಾಧ್ಯವಾಗಿರಲಿಲ್ಲ. ಈಗ ಕಾರ್ಯರೂಪಕ್ಕೆ ಬರುವ ಲಕ್ಷಣಗಳು ಗೋಚರಿಸುತ್ತಿವೆ.

ಚೀನಾ ಸಾಧನೆ ಜಗತ್ತಿಗೆ ಮಾದರಿ

ಚೀನಾ ಸಾಧನೆ ಜಗತ್ತಿಗೆ ಮಾದರಿ

10-15 ವರ್ಷದ ಹಿಂದೆ ಚೀನಾ ಎಂದರೆ ಮಾಲಿನ್ಯ, ಮಾಲಿನ್ಯ ಅಂದ್ರೆ ಚೀನಾ ಎಂದು ಜಗತ್ತು ಜರಿಯುತ್ತಿತ್ತು. ಆದರೆ ಈಗ ಇದೇ ಚೀನಾ ಪ್ರಕೃತಿ ಸೊಬಗಿನ ತವರಾಗಿದೆ. ಅದರಲ್ಲೂ ಚೀನಾ ರಾಜಧಾನಿ ಬೀಜಿಂಗ್ ಎಷ್ಟು ಸುಧಾರಿಸಿದೆ ಎಂದರೆ, ಕೆಲವೇ ವರ್ಷಗಳಲ್ಲಿ ಸಂಪೂರ್ಣ ವಾಯು ಮಾಲಿನ್ಯವನ್ನ ಸರ್ಕಾರ ಕಂಟ್ರೋಲ್‌ಗೆ ತಂದಿದೆ. ಮಾಲಿನ್ಯ ನಿಯಂತ್ರಣದ ಹಿಂದೆ ಹಲವು ಕಠಿಣ ಕ್ರಮಗಳು ಕೂಡ ಪ್ರಭಾವ ಬೀರಿವೆ. ಅದರಲ್ಲೂ ಕಾರ್ಬನ್ ಮತ್ತು ಸಿಎಫ್‌ಸಿ ಅನಿಲ ಹೊರಸೂಸುವ ಯಂತ್ರ, ಮತ್ತಿತರ ವಸ್ತುಗಳಿಗೆ ನಿಷೇಧ ಹೇರಿದ್ದು ಫಲ ನೀಡಿದೆ. ಇನ್ನು ಕೈಗಾರಿಕೆಗಳಿಗೆ ನೀಡಿದ ಖಡಕ್ ವಾರ್ನಿಂಗ್ ಕೂಡ ಚೀನಾದ ಮಾಲಿನ್ಯ ನಿಯಂತ್ರಿಸಿದೆ.

 ಹಿಮ ಪದರ ಕರಗುವ ಆತಂಕ

ಹಿಮ ಪದರ ಕರಗುವ ಆತಂಕ

2020ರ ಬಗ್ಗೆ ಬೆಚ್ಚಿಬೀಳುವ ಸಂಗತಿಯೊಂದನ್ನ ವಿಜ್ಞಾನಿಗಳು ಬಿಚ್ಚಿಟ್ಟಿದ್ದಾರೆ. ಮಾನವ ಬದುಕಿನ ಇತಿಹಾಸದಲ್ಲಿ 2020 3ನೇ ಅತಿಹೆಚ್ಚು ತಾಪಮಾನ ತೋರಿದ ವರ್ಷವಾಗಿದೆ. 2016, 2019ರ ನಂತರ 2020 ಅತಿ ಹೆಚ್ಚಾದ ತಾಪಮಾನ ಹೊಂದಿರುವ ವರ್ಷವಾಗಿದೆ. ತಾಪಮಾನ ಏರಿಕೆ ಕಡಿವಾಣಕ್ಕೆ ಎಷ್ಟೇ ಮುತುವರ್ಜಿ ವಹಿಸಿದರೂ ಪ್ರಯೋಜನವಾಗುತ್ತಿಲ್ಲ. ತಾಪಮಾನ ಏರಿಕೆ ತಡೆಯಲು ಪ್ಯಾರಿಸ್ ಒಪ್ಪಂದಂಥ ಪ್ರಯತ್ನ ವಿಫಲವಾಗಿದೆ. 2020ರಲ್ಲಿ ತಾಪಮಾನ 1.2 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಿದ್ರೆ ರಷ್ಯಾದ ಸೈಬೀರಿಯಾ ಪ್ರಾಂತ್ಯದಲ್ಲಿ ಅತಿಹೆಚ್ಚು ತಾಪಮಾನ ಏರಿಕೆಯಾಗಿದೆ. ಇದೆಲ್ಲವನ್ನೂ ನೋಡುತ್ತಿದ್ದರೆ ಭೂಮಿ ಮೇಲೆ ತಾಪಮಾನ ನಿಯಂತ್ರಣ ತುರ್ತು ಅಗತ್ಯವಾಗಿದೆ. ಇಲ್ಲವಾದರೆ ಭವಿಷ್ಯವೇ ಬರಡಾಗುವ ಅಪಾಯವಿದೆ.

English summary
American cities facing deforestation problem & annually 3 crore trees cutting down in US cities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
Desktop Bottom Promotion