ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಜೋ ಬಿಡೆನ್ ಬೆಂಬಲಿಸಿದ ಒಬಾಮ

|
Google Oneindia Kannada News

ವಾಷಿಂಗ್ಟನ್, ಏಪ್ರಿಲ್ 14: ಇಡೀ ವಿಶ್ವವನ್ನು ಕೊರೊನಾ ವೈರಸ್‌ ಕಿತ್ತು ತಿನ್ನುತ್ತಿರುವ ವೇಳೆಯೂ ಅಮೆರಿಕದಲ್ಲಿ ಚುನಾವಣೆ ವಿಚಾರ ಸದ್ದು ಮಾಡುತ್ತಿದೆ. ನವೆಂಬರ್‌ ತಿಂಗಳಲ್ಲಿ ನಡೆಯಬೇಕಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರನ್ನ ಮಣಿಸಲು ಡೆಮಾಕ್ರಟಿಕ್ ಪಕ್ಷ ಸಜ್ಜಾಗುತ್ತಿದೆ.

ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದಿಂದ ಆಕಾಂಕ್ಷಿಯಾಗಿದ್ದ 78 ವರ್ಷದ ಬೆರ್ನಿ ಸ್ಯಾಂಡರ್ಸ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಬೆರ್ನಿ ಸ್ಯಾಂಡರ್ಸ್ ನಂತರ ಜೋ ಬಿಡೆನ್ ಸ್ಪರ್ಧಿ ಆಗಲಿದ್ದಾರೆ ಎಂಬ ಮಾತುಗಳು ಬಲವಾಗಿದೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದ ಬೆರ್ನಿ ಸ್ಯಾಂಡರ್ಸ್ಅಮೆರಿಕ ಅಧ್ಯಕ್ಷೀಯ ಚುನಾವಣೆಯಿಂದ ಹಿಂದೆ ಸರಿದ ಬೆರ್ನಿ ಸ್ಯಾಂಡರ್ಸ್

ಇದೀಗ, ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಮಾ ಮುಂಬರುವ ಚುನಾವಣೆಯಲ್ಲಿ ಜೋ ಬಿಡೆನ್ ಅವರನ್ನು ನಾಮನಿರ್ದೇಶನ ಮಾಡುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೋ ಬಿಡೆನ್ ಗೆ ತನ್ನ ಬೆಂಬಲ ಸೂಚಿಸಿದ್ದಾರೆ. ಈ ಮೂಲಕ ಡೆಮಾಕ್ರಟಿಕ್ ಪಕ್ಷದಿಂದ ಜೋ ಬಿಡೆನ್ ಸ್ಪರ್ಧೆ ಮಾಡುವುದು ಬಹುತೇಕ ಖಚಿತ ಎನ್ನಲಾಗಿದೆ.

Barack Obama Support To Joe Biden For President Election

ಅಂದ್ಹಾಗೆ, ಜೋ ಬಿಡೆನ್ ಡೆಮಾಕ್ರಟಿಕ್ ಪಕ್ಷದಲ್ಲಿ ಹಲವು ವರ್ಷದಿಂದ ಗುರುತಿಸಿಕೊಂಡಿದ್ದಾರೆ. 2009 ರಿಂದ 2017ರವರೆಗೂ ಬರಾಕ್ ಒಬಾಮ ಅಧ್ಯಕ್ಷರಾಗಿದ್ದ ಸಮಯದಲ್ಲಿ ಅಮೆರಿಕ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಅನುಭವ ಇದೆ.

ಸದ್ಯದ ಬೆಳವಣಿಗೆ ಗಮನಿಸಿದರೆ, ನವೆಂಬರ್ ನಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ನಡೆಯಲಿದ್ದು, ರಿಪಬ್ಲಿಕನ್ ಪಕ್ಷದ, ಹಾಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಡೆಮಾಕ್ರೆಟಿಕ್ ಪಕ್ಷದ ಜೋಯ್ ಬಿಡೆನ್ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

English summary
America Former president Barack Obama announced his support to Joe Biden for coming President Election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X