ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಕುರಿತು ತಪ್ಪು ಮಾಹಿತಿ: ಸಾಮಾಜಿಕ ಮಾಧ್ಯಮಗಳ ವಿರುದ್ಧ ಹರಿಹಾಯ್ದ ಬೈಡನ್

|
Google Oneindia Kannada News

ವಾಷಿಂಗ್ಟನ್, ಜುಲೈ 17: ಅಮೆರಿಕ ಅಧ್ಯಕ್ಷ ಜೋ ಬೈಡನ್ ಮಾಧ್ಯಮದ ವಿರುದ್ಧ ಹರಿಹಾಯ್ದಿದ್ದಾರೆ. ಕೊರೊನಾ ಸೋಂಕು ಹಾಗೂ ಲಸಿಕೆ ಕುರಿತು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದೀರ ಎಂದು ತರಾಟೆಗೆ ತೆಗೆದುಕೊಂಡಿದ್ದ ಅವರು, ಸಾಮಾಜಿಕ ಮಾಧ್ಯಮಗಳು ಸುಳ್ಳು ಸುದ್ದಿ ಹರಡುವ ಮೂಲಕ ಜನರನ್ನು ಕೊಲ್ಲುತ್ತಿವೆ ಎಂದರು.

ಕೊರೊನಾವೈರಸ್ ಮತ್ತು ಲಸಿಕೆ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿರುವ ಫೇಸ್ ಬುಕ್ ನಂತಹ ಸಾಮಾಜಿಕ ಮಾಧ್ಯಮಗಳನ್ನು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಟೀಕಿಸಿದ್ದಾರೆ.

ಲಸಿಕೆ ಪಡೆಯದವರಲ್ಲಿ ಮಾತ್ರ ಸಾಂಕ್ರಾಮಿಕ ಇರುವುದಾಗಿ ಹೇಳುವ ಮೂಲಕ ಸಾಮಾಜಿಕ ಮಾಧ್ಯಮಗಳು ಜನರನ್ನು ಕೊಲ್ಲುತ್ತಿವೆ. ಲಸಿಕೆ ಪಡೆಯದ ಜನರು ಅಪಾಯದಲ್ಲಿರುವುದರಿಂದ ಲಸಿಕೆ ವ್ಯಾಪ್ತಿ ಕಡಿಮೆ ಪ್ರಮಾಣದಲ್ಲಿರುವ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳು ಇರುವುದನ್ನು ನಾವು ನೋಡುತ್ತಿದ್ದೇವೆ ಎಂದು ಅವರು ತಿಳಿಸಿದರು.

Biden: Social Media Killing People With COVID Misinformation

ಕೊರೊನಾ ನಾವೈರಸ್ ಬಗ್ಗೆ ಸುಳ್ಳು ಸುದ್ದಿ ಹರಡುವಿಕೆ ನಿಲ್ಲಿಸುವಲ್ಲಿ ಫೇಸ್ ಬುಕ್ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಶ್ವೇತ ಭವನದ ಮಾಧ್ಯಮ ಕಾರ್ಯದರ್ಶಿ ಜೆನ್ ಸಾಕಿ ಆರೋಪಿಸಿದರು.

ಕೊರೊನಾವೈರಸ್ ಮತ್ತು ಅದನ್ನು ತಡೆಗಟ್ಟುವ ಲಸಿಕೆಗಳ ಸುರಕ್ಷತೆ ಬಗ್ಗೆ ಫೇಸ್ ಬುಕ್ ನಂತಹ ಸಾಮಾಜಿಕ ಮಾಧ್ಯಮಗಳು ಸುಳ್ಳು ಸುದ್ದಿ ಹರಡುವ ಮೂಲಕ ಜನರನ್ನು ಕೊಲ್ಲುತ್ತಿವೆ ಎಂದರು.

ಈ ಹಿಂದೆ ಲಸಿಕೆ ಪಡೆಯದವರಲ್ಲಿ ಕೋವಿಡ್-19 ಸಾಂಕ್ರಾಮಿಕವಾಗಿ ಹೊರಹೊಮ್ಮುತ್ತಿರುವುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ವರದಿಯಾಗಿತ್ತು.

English summary
President Joe Biden has said that social media companies are “killing people” by failing to police misinformation on their platforms about COVID-19 vaccines.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X