• search
  • Live TV
ವಾಷಿಂಗ್ಟನ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾಲಭೈರವೇಶ್ವರ ಸನ್ನಿಧಿ ಕನ್ನಡಿಗರನ್ನು ಒಂದಾಗಿಸುವ ವೇದಿಕೆಯಾಗಲಿದೆ : ಎಚ್ಡಿಕೆ

|

ನ್ಯೂಜೆರ್ಸಿ, ಜುಲೈ 01: ಅಮೆರಿಕ ಪ್ರವಾಸದಲ್ಲಿರುವ ಕರ್ನಾಟಕದ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ನ್ಯೂಜೆರ್ಸಿಯಲ್ಲಿರುವ ಸಾಮರ್ಸೇಟ್ ನಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ವತಿಯಿಂದ ನಿರ್ಮಿಸಲಾಗುತ್ತಿರುವ ಶ್ರೀ ಕಾಲಭೈರವೇಶ್ವರ ದೇವಾಲಯದ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿದ್ದರು.

ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಗುಜರಾತಿನ ಅರ್ಷ ವಿದ್ಯಾಮಂದಿರದ ಪರಮಾತ್ಮಾನಂದ ಸ್ವಾಮೀಜಿ ಹಾಗೂ ಮೈಸೂರಿನ ಸಚ್ಚಿದಾನಂದ ಗಣಪತಿ ಸ್ವಾಮೀಜಿ ಉಪಸ್ಥಿತರಿದ್ದರು

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಜೂನ್ 30 ರಂದು ಬೆಳಿಗ್ಗೆ(ಅಲ್ಲಿನ ಕಾಲಮಾನ) ಕಾಲಭೈರವೇಶ್ವರ ದೇವಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ನ್ಯೂಜೆರ್ಸಿಯ ಸಾಂಸ್ಕೃತಿಕ ಕೇಂದ್ರದ ಬಗ್ಗೆ ಕುಮಾರಸ್ವಾಮಿ ಮೆಚ್ಚುಗೆ

ಈ ಸಂದರ್ಭದಲ್ಲಿ ಮಾತನಾಡಿದ ಅವರು, 125 ವರ್ಷಗಳ ಹಿಂದೆ ಸ್ವಾಮಿ ವಿವೇಕಾನಂದರು ವಿಶ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಿ, ಧರ್ಮ ಜಾಗೃತಿ ಮೂಡಿಸಿದ್ದರು. ಧರ್ಮ ಜೀವನ ಪಥ. ಜಾತಿ-ಪಂಥದ ಎಲ್ಲೆ ಮೀರಿದ್ದು ಎಂಬ ವಿಶಾಲ ತತ್ವವನ್ನು ಸಾರಿದರು. ಈಗ ಇಲ್ಲಿ ನಿರ್ಮಾಣವಾಗುತ್ತಿರುವ ಕಾಲಭೈರವೇಶ್ವರ ದೇವಾಲಯವೂ ಸಹ ಕನ್ನಡಿಗರಿಗೆ ಒಂದು ಶ್ರದ್ಧಾ ಕೇಂದ್ರವಾಗಿ, ಸಾಂಸ್ಕೃತಿಕ ಕೇಂದ್ರವಾಗಿ ರೂಪುಗೊಳ್ಳಲಿದೆ ಎಂದು ತಿಳಿಸಿದರು.

ಬಾಲಗಂಗಾಧರನಾಥ ಸ್ವಾಮೀಜಿ ಕನಸು

ಬಾಲಗಂಗಾಧರನಾಥ ಸ್ವಾಮೀಜಿ ಕನಸು

ಹಿಂದಿನ ಪೀಠಾಧ್ಯಕ್ಷರಾದ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರು ಆದಿಚುಂಚನಗಿರಿ ಮಹಾಸಂಸ್ಥಾನಕ್ಕೆ ವಿಶ್ವಮಾನ್ಯತೆ ದೊರಕಿಸಲು 50 ವರ್ಷಗಳ ಕಾಲ ಶ್ರಮಿಸಿದ್ದರು. ಈ ದೇವಾಲಯ ನಿರ್ಮಾಣ ಅವರ ಕನಸಾಗಿತ್ತು. ಅದು ಇಂದು ನನಸಾಗುತ್ತಿರುವುದು ಸಂತೋಷದ ಸಂಗತಿ ಎಂದು ಮುಖ್ಯಮಂತ್ರಿಗಳು ನುಡಿದರು. ಈಗ ಇಲ್ಲಿ ನಿರ್ಮಾಣವಾಗುತ್ತಿರುವ ಕಾಲಭೈರವೇಶ್ವರ ದೇವಾಲಯವೂ ಸಹ ಕನ್ನಡಿಗರಿಗೆ ಒಂದು ಶ್ರದ್ಧಾ ಕೇಂದ್ರವಾಗಿ, ಸಾಂಸ್ಕೃತಿಕ ಕೇಂದ್ರವಾಗಿ ರೂಪುಗೊಳ್ಳಲಿದೆ ಎಂದು ತಿಳಿಸಿದರು.

ಕನ್ನಡಿಗರನ್ನು ಒಂದಾಗಿಸಲು ವೇದಿಕೆಯಾಗಲಿದೆ

ಕನ್ನಡಿಗರನ್ನು ಒಂದಾಗಿಸಲು ವೇದಿಕೆಯಾಗಲಿದೆ

ಆದಿಚುಂಚನಗಿರಿಯಲ್ಲಿ ದೇವಸ್ಥಾನದ ಗೋಪುರ ನಿರ್ಮಾಣಕ್ಕೆ ನನ್ನ ಕೈಯಿಂದ ಚಾಲನೆ ನೀಡಬೇಕೆನ್ನುವುದು ಅವರ ಅಭಿಲಾಷೆಯಾಗಿತ್ತು. ಈಗ ಈ ದೇವಾಲಯದ ಶಂಕುಸ್ಥಾಪನೆ ನೆರವೇರಿಸುವ ಅವಕಾಶ ದೊರೆತಿರುವುದು ಗೌರವದ ವಿಷಯ ಎಂದು ಹೇಳಿದರು.

ಈ ದೇವಾಲಯವು ಕನ್ನಡಿಗರು ಒಂದಾಗಲು, ತಮ್ಮ ಸಂಸ್ಕೃತಿ, ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು, ಆಚರಿಸಲು ಒಂದು ವೇದಿಕೆಯನ್ನು ಒದಗಿಸಲಿದೆ ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.

ನಿರ್ಮಲಾನಂದನಾಥ ಸ್ವಾಮೀಜಿಯವರು ಮಾತನಾಡಿ

ನಿರ್ಮಲಾನಂದನಾಥ ಸ್ವಾಮೀಜಿಯವರು ಮಾತನಾಡಿ

ಸಮಾರಂಭದಲ್ಲಿ ಮಾತನಾಡಿದ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು, ಮುಖ್ಯಮಂತ್ರಿಯವರು ತಮ್ಮ ಎಲ್ಲ ಕೆಲಸದ ಒತ್ತಡದ ನಡುವೆಯೂ ಒಂದು ಒಳ್ಳೆಯ ಕಾರ್ಯಕ್ಕಾಗಿ ಅಮೆರಿಕಾಕ್ಕೆ ಆಗಮಿಸಿದ್ದಾರೆ. ಯಾರೇ ಕುಹಕವಾಡಿದರೂ ಅದನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಸ್ಥಳೀಯ ಅನಿವಾಸಿ ಕನ್ನಡಿಗರಿಂದ ಧನ್ಯವಾದ

ಸ್ಥಳೀಯ ಅನಿವಾಸಿ ಕನ್ನಡಿಗರಿಂದ ಧನ್ಯವಾದ

ಸಮಾರಂಭದಲ್ಲಿ ಉಪಸ್ಥಿತರಿದ್ದ, ಮೈಸೂರಿನ ಸಚ್ಚಿದಾನಂದ ಗಣಪತಿ ಸ್ವಾಮೀಜಿಯವರು ಮುಖ್ಯಮಂತ್ರಿಯವರ ಸರಳತೆ, ಅಂತಃಕರಣವನ್ನು ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಸಣ್ಣ ನೀರಾವರಿ ಸಚಿವ ಪುಟ್ಟರಾಜು, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಮತ್ತು, ಅಮೆರಿಕಾದ ಕನ್ನಡಿಗರು ಭಾಗವಹಿಸಿದ್ದರು. ಸ್ಥಳೀಯ ಕನ್ನಡಿಗರ ಸಂಘಟನೆಗಳ ಪದಾಧಿಕಾರಿಗಳು ಸಹ ಪಾಲ್ಗೊಂಡಿದ್ದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka Chief Minister H.D.Kumaraswamy laid stone for construction of Kalabhairaveshwara temple, Somerset in New Jersey, USA. CM Kumaraswamy on a private visit to the US from June 28 to July 6, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more