ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡೆಡ್ಲಿ ಕೊರೊನಾಕ್ಕೆ ಅಮೆರಿಕದಲ್ಲಿಯೂ ನಿಲ್ಲುತ್ತಿಲ್ಲ ಸಾವಿನ ಸರಣಿ

|
Google Oneindia Kannada News

ವಾಷಿಂಗ್ಟನ್, ಮಾರ್ಚ್ 22: ಡೆಡ್ಲಿ ಕೊರೊನಾಕ್ಕೆ ಅಮೆರಿಕದಲ್ಲಿ ಸಾವಿನ ಸರಣಿ ನಿಲ್ಲುತ್ತಿಲ್ಲ. ಅಮೆರಿಕದಲ್ಲಿ ಕೊರೊನಾ ವೈರಸ್ (ಕೋವಿಡ್ 19) ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 323 ಕ್ಕೆ ಏರಿಕೆಯಾಗಿದೆ. 20388 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ನ್ಯೂಯಾರ್ಕ್ ಒಂದರಲ್ಲೇ 124 ಜನ ಮೃತಪಟ್ಟಿದ್ದಾರೆ. ಇದರೊಂದಿಗೆ ಸೋಂಕಿನಿಂದ ಬಳಲುತ್ತಿರುವ ಐದನೇ ಅತಿದೊಡ್ಡ ರಾಷ್ಟ್ರ ಅಮೆರಿಕ ಎಂದು ಎನಿಸಿಕೊಂಡಿದೆ. ಇದರಿಂದಾಗಿ ಅಲ್ಲಿನ ಸರಕಾರ ಮತ್ತು ರಾಜಕೀಯ ನಾಯಕರನ್ನು ಮತ್ತಷ್ಟು ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವ ಬಗ್ಗೆ ಗಮನ ಹರಿಸುವಂತೆ ಮಾಡಿದೆ.

ಕೊರೊನಾ; ಆತಂಕಕಾರಿ ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕಕೊರೊನಾ; ಆತಂಕಕಾರಿ ಟ್ವೀಟ್ ಮಾಡಿದ ಕಾಂಗ್ರೆಸ್ ನಾಯಕ

ಇದೇ ವೇಳೆ, ಕ್ಯಾಲಿಫೋರ್ನಿಯಾದ ನಾಗರಿಕರು ಮನೆಯ ಒಳಗೇ ಇರುವಂತೆ ಪ್ರಾಂತೀಯ ಸರಕಾರ ಮನವಿ ಮಾಡಿಕೊಂಡಿದೆ. 2.5 ಕೋಟಿ ಮಂದಿಗೆ ಸೋಂಕು ತಗುಲಬಹುದು ಎಂಬ ಎಚ್ಚರಿಕೆಯನ್ನು ಅಲ್ಲಿನ ಸ್ಥಳೀಯ ಸರ್ಕಾರ ಎಚ್ಚರಿಕೆ ನೀಡಿದೆ.

Coronavirus In America: 300 Crossed Death Number

ಮತ್ತೊಂದು ಮಹತ್ವದ ಕ್ರಮದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌, ಮಲೇರಿಯಾ ನಿರೋಧಕ ಲಸಿಕೆಯನ್ನು ಕೊರೊನಾ ಚಿಕಿತ್ಸೆಗೆ ಬಳಕೆ ಮಾಡಲು ಅನುಮತಿ ನೀಡಿದ್ದಾರೆ. ಈ ಬೆಳವಣಿಗೆಗಳಿಗೆ ಪೂರಕವಾಗಿ ಅಮೆರಿಕದ ಪ್ರಜೆಗಳು ಸದ್ಯದ ಮಟ್ಟಿಗೆ ಅಂತಾರಾಷ್ಟ್ರೀಯ ಪ್ರವಾಸ ಕೈಗೊಳ್ಳುವುದು ಬೇಡ ಎಂಬ ಸಲಹೆಯನ್ನೂ ನೀಡಿದ್ದಾರೆ.

English summary
Coronavirus In America: 300 Crossed Death Number. In Newyork City Maximum Deaths. 124 people deid by coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X