ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

30 ದಿನಗಳಲ್ಲೇ ಕೊರೊನಾವೈರಸ್ ಸೋಂಕಿಗೆ ಲಸಿಕೆ ರೆಡಿ!

|
Google Oneindia Kannada News

ವಾಶಿಂಗ್ಟನ್, ಸಪ್ಟೆಂಬರ್.08: ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಲಸಿಕೆ ಯಾವಾಗ ಸಿಗುತ್ತದೆಯೋ ಎಂದು ವಿಶ್ವವೇ ಎದುರು ನೋಡುತ್ತಿದೆ. ಜಗತ್ತಿನ ನಿರೀಕ್ಷೆಯ ನಡುವೆ ವಿಶ್ವದ ದೊಡ್ಡಣ್ಣ ಅಮೆರಿಕಾದ ಸಿಹಿಸುದ್ದಿಯೊಂದನ್ನು ನೀಡಿದೆ.

Recommended Video

Corona ಅಂಕಿ ಅಂಶಗಳಲ್ಲಿ ಕಂಡ ಏಕೈಕ ಪಾಸಿಟಿವ್ ಸುದ್ದಿ | Oneindia Kannada

ಇನ್ನು 30 ದಿನಗಳಲ್ಲೇ ಕೊರೊನಾವೈರಸ್ ಸೋಂಕಿನ ಲಸಿಕೆಯು ಮಾರುಕಟ್ಟೆಗೆ ಬರಲಿವೆ. 2020ರ ಅಕ್ಟೋಬರ್ ತಿಂಗಳಿನಲ್ಲೇ ಕೊರೊನಾವೈರಸ್ ಸೋಂಕಿಗೆ ಔಷಧಿಯನ್ನು ಕಂಡು ಹಿಡಿಯಲಾಗುತ್ತದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಮೆರಿಕದಲ್ಲಿ ವರ್ಷಾಂತ್ಯಕ್ಕೆ ಕೊರೊನಾ ಲಸಿಕೆ ಸಿದ್ಧ: ಡೊನಾಲ್ಡ್ ಟ್ರಂಪ್ಅಮೆರಿಕದಲ್ಲಿ ವರ್ಷಾಂತ್ಯಕ್ಕೆ ಕೊರೊನಾ ಲಸಿಕೆ ಸಿದ್ಧ: ಡೊನಾಲ್ಡ್ ಟ್ರಂಪ್

ಸಾಮಾನ್ಯವಾಗಿ ಇಂಥ ಗಂಭೀರ ರೋಗಗಳಿಗೆ ಔಷಧಿ ಅಥವಾ ಲಸಿಕೆ ಕಂಡು ಹಿಡಿಯುವುದಕ್ಕೆ ಕನಿಷ್ಠ ಎರಡರಿಂದ ಮೂರು ವರ್ಷಗಳೇ ತೆಗೆದುಕೊಳ್ಳಲಾಗುತ್ತದೆ. ಆದರೆ ಕೊರೊನಾವೈರಸ್ ಸೋಂಕಿಗೆ ತುರ್ತು ಲಸಿಕೆಗೆ ಅಗತ್ಯವಿದ್ದು, ಈ ನಿಟ್ಟಿನಲ್ಲಿ ತುರ್ತಾಗಿ ಲಸಿಕೆ ಕಂಡು ಹಿಡಿಯಲು ಸಂಶೋಧಕರು ಶ್ರಮಿಸಿದ್ದಾರೆ ಎಂದು ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

30 ದಿನಗಳಲ್ಲೇ ಕೊರೊನಾವೈರಸ್ ಸೋಂಕಿಗೆ ಲಸಿಕೆ ರೆಡಿ

30 ದಿನಗಳಲ್ಲೇ ಕೊರೊನಾವೈರಸ್ ಸೋಂಕಿಗೆ ಲಸಿಕೆ ರೆಡಿ

ವಿಶ್ವವನ್ನು ಕಾಡುತ್ತಿರುವ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹೋಗಲಾಡಿಸಲು ಲಸಿಕೆಯ ತುರ್ತು ಅಗತ್ಯವಿದೆ. ಈ ನಿಟ್ಟಿನಲ್ಲಿ ಇನ್ನು 30 ದಿನಗಳಲ್ಲೇ ಕೊವಿಡ್-19 ಸೋಂಕಿಗೆ ಲಸಿಕೆಯನ್ನು ಸಿದ್ಧಪಡಿಸಿ ಮಾರುಕಟ್ಟೆಗೆ ತರುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ. ಅಕ್ಟೋಬರ್ ತಿಂಗಳಾಂತ್ಯದ ವೇಳೆಗೆ ಕೊವಿಡ್-19 ಲಸಿಕೆಯು ಲಭ್ಯವಾಗುವ ವಿಶ್ವಾಸವಿದೆ ಎಂದು ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ಸರ್ ಪ್ರೈಸ್ ಕೊಡುವುದಾಗಿ ತಿಳಿಸಿದ ಟ್ರಂಪ್

ಸರ್ ಪ್ರೈಸ್ ಕೊಡುವುದಾಗಿ ತಿಳಿಸಿದ ಟ್ರಂಪ್

ಅಮೆರಿಕಾದ ಪ್ರಜೆಗಳಿಗೆ ಬಿಗ್ ಸರ್ ಪ್ರೈಸ್ ವೊಂದು ಕಾದಿದೆ. ಸಾಂಕ್ರಾಮಿಕ ಪಿಡುಗು ಕೊರೊನಾವೈರಸ್ ವಿರುದ್ಧ ಹೋರಾಡುವ ಪರಿಣಾಮಕಾರಿ ಮತ್ತು ಹೆಚ್ಚು ಸುರಕ್ಷಿತವಾದ ಲಸಿಕೆಯೊಂದನ್ನು ನೀಡುವುದಕ್ಕೆ ಎಲ್ಲ ಸಿದ್ಧತೆಗಳು ನಡೆಯುತ್ತಿವೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಕೊವಿಡ್-19 ಲಸಿಕೆ ಬರುವ ವಿಶ್ವಾಸವಿಲ್ಲ ಎಂದ ಹ್ಯಾರಿಸ್

ಕೊವಿಡ್-19 ಲಸಿಕೆ ಬರುವ ವಿಶ್ವಾಸವಿಲ್ಲ ಎಂದ ಹ್ಯಾರಿಸ್

ಅಮೆರಿಕಾದಲ್ಲಿ ಕೊರೊನಾವೈರಸ್ ಸೋಂಕಿನಿಂದ ಜನರು ಪ್ರಾಣ ಬಿಡುತ್ತಿದ್ದರೂ, ಕೊವಿಡ್-19 ಸೋಂಕಿಗೆ ಲಸಿಕೆ ಬರುವ ವಿಶ್ವಾಸವೇ ಕಂಡು ಬರುತ್ತಿಲ್ಲ ಎಂದು ಡೆಮಾಕ್ರಟಿಕ್ ಪಕ್ಷದ ವೈಸ್ ಪ್ರೆಸಿಡೆಂಟಲ್ ಅಭ್ಯರ್ಥಿ ಕಮಲಾ ಹ್ಯಾರಿಸ್ ಕಿಡಿ ಕಾರಿದ್ದರು. ಡೊನಾಲ್ಡ್ ಟ್ರಂಪ್ ಆಡಳಿತದ ಮೇಲೆ ನಮಗೆ ವಿಶ್ವಾಸವಿಲ್ಲ. ಪರಿಣಾಮಕಾರಿ ಮತ್ತು ವಿಶ್ವಾಸಾರ್ಹ ಆಡಳಿತ ನೀಡುವಲ್ಲಿ ಡೊನಾಲ್ಡ್ ಟ್ರಂಪ್ ವಿಫಲರಾಗಿದ್ದಾರೆ ಎಂದು ಕಮಲಾ ಹ್ಯಾರಿಸ್ ವಾಗ್ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಅಕ್ಟೋಬರ್ ನಲ್ಲಿ ಕೊವಿಡ್-19 ಸೋಂಕಿಗೆ ಲಸಿಕೆ ಸಿದ್ಧವಾಗಲಿದೆ ಎಂದು ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ಕೊರೊನಾವೈರಸ್ ಸೋಂಕಿಗೆ ತತ್ತರಿಸಿರುವ ಯುಎಸ್ಎ

ಕೊರೊನಾವೈರಸ್ ಸೋಂಕಿಗೆ ತತ್ತರಿಸಿರುವ ಯುಎಸ್ಎ

ಚೀನಾದಲ್ಲಿ ಮೊದಲು ಕಾಣಿಸಿಕೊಂಡ ಕೊರೊನಾವೈರಸ್ ಸೋಂಕು ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾವನ್ನು ತತ್ತರಿಸಿ ಹೋಗುವಂತೆ ಮಾಡಿದೆ. ದೇಶದಲ್ಲಿ 64,85,575 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ 1,93,534 ಮಂದಿ ಬಲಿಯಾಗಿದ್ದಾರೆ. 37,58,629 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 25,33,412 ಸಕ್ರಿಯ ಪ್ರಕರಣಗಳಿರುವುದು ವರದಿಯಾಗಿದೆ.

English summary
Coronavirus Vaccine Could Be Ready By October 2020: US President Donald Trump.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X