• search
  • Live TV
ವಾಷಿಂಗ್ಟನ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೋವಿಡ್ 19: ಭಾರತದ ಪರಿಸ್ಥಿತಿ ಮತ್ತಷ್ಟು ಭಯಾನಕವಾಗಲಿದೆ ಎಂದ ಅಮೆರಿಕ

|

ವಾಷಿಂಗ್ಟನ್, ಮೇ 1: ಕೋವಿಡ್‌ನಿಂದಾಗಿ ಭಾರತದ ಪರಿಸ್ಥಿತಿ ಮತ್ತಷ್ಟು ಭಯಾನಕವಾಗಲಿದೆ ಎಂದು ಅಮೆರಿಕದ ಬೈಡನ್ ಸರ್ಕಾರ ಹೇಳಿದೆ.

ಭಾರತದಲ್ಲಿ ಈಗಾಗಲೇ 3 ಲಕ್ಷಕ್ಕೂ ಅಧಿಕ ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ ಇನ್ನೂ ಅಂತಿಮ ಹಂತವನ್ನು ತಲುಪಿಲ್ಲ, ಅಂತಿಮ ಘಟ್ಟ ತುಂಬಾ ಭೀಕರವಾಗಿರಲಿದೆ ಎಂದಿದ್ದಾರೆ.

ಕೋವಿಡ್ 19: ಭಾರತದಿಂದ ಪ್ರಯಾಣಿಸುವವರಿಗೆ ಅಮೆರಿಕ ನಿರ್ಬಂಧಕೋವಿಡ್ 19: ಭಾರತದಿಂದ ಪ್ರಯಾಣಿಸುವವರಿಗೆ ಅಮೆರಿಕ ನಿರ್ಬಂಧ

ಭಾರತದ ಪರಿಸ್ಥಿತಿ ನೋಡಿ ಭಯವಾಗುತ್ತಿದೆ, ನಿತ್ಯ 50 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಹೆಚ್ಚಾಗುತ್ತಿವೆ. ಅಮೆರಿಕವು ಆಕ್ಸಿಜನ್, ವೆಂಟಿಲೇಟರ್, ಲಸಿಕೆ ತಯಾರಿಕಾ ಕಚ್ಚಾವಸ್ತುಗಳು ಸೇರಿದಂತೆ ಹಲವು ವೈದ್ಯಕೀಯ ಸಾಮಗ್ರಿಗಳನ್ನು ತುರ್ತಾಗಿ ಕಳುಹಿಸಿಕೊಡುತ್ತೇವೆ ಎಂದು ಆರೋಗ್ಯ ಭದ್ರತಾ ಅಧಿಕಾರಿ ಗೇಲ್ ಸ್ಮಿತ್ ತಿಳಿಸಿದ್ದಾರೆ.

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರುತ್ತಿರುವ ಹಿನ್ನೆಲೆಯಲ್ಲಿ ಭಾರತದಿಂದ ಪ್ರಯಾಣಿಸುವವರಿಗೆ ಅಮೆರಿಕ ನಿರ್ಬಂಧ ಹೇರಿದೆ. ಈ ನಿಯಮ ಅಮೆರಿಕನ್ ನಾಗರಿಕರು, ಶಾಶ್ವತ ನಿವಾಸಿಗಳು ಅಥವಾ ಇತರ ವಿನಾಯಿತಿ ಪಡೆದವರಿಗೆ ಅನ್ವಯಿಸುವುದಿಲ್ಲ. ಈ ನಿಯಮ ಮೇ.4 ರಿಂದ ಜಾರಿಯಾಗಲಿದೆ ಎಂದು ಜೆನ್ ಸಾಕಿ ಮಾಹಿತಿ ನೀಡಿದ್ದಾರೆ.

ಸರ್ಕಾರಿ ರೋಗ ನಿಯಂತ್ರಣ ಸಂಸ್ಥೆಗಳ ಸಲಹೆಯ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಸಾಕಿ ತಿಳಿಸಿದ್ದಾರೆ. ಸೋಂಕು ತೀವ್ರವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಕೆನಡಾ, ಯುಎಇ ಸೇರಿದಂತೆ ಹಲವು ದೇಶಗಳು ಭಾರತದ ಪ್ರಯಾಣವನ್ನು ತಾತ್ಕಾಲಿಕವಾಗಿ ನಿಷೇಧಿಸಿವೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4 ಲಕ್ಷ ದಾಟಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. ಕಳೆದ ಒಂದು ದಿನದಲ್ಲಿ 4,01,993, ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 3523 ಮಂದಿ ಸಾವನ್ನಪ್ಪಿದ್ದು, 2,99,988 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಒಟ್ಟು 1,91,64,969 ಪ್ರಕರಣಗಳಿವೆ, 32,68,710 ಸಕ್ರಿಯ ಪ್ರಕರಣಗಳಿವೆ, ಇದುವರೆಗೆ 2,11,853 ಮಂದಿ ಮೃತಪಟ್ಟಿದ್ದಾರೆ. ಆಸ್ಪತ್ರೆಯಿಂದ ಒಟ್ಟು 1,56,84,406 ಮಂದಿ ಬಿಡುಗಡೆಗೊಂಡಿದ್ದಾರೆ.

English summary
The COVID-19 crisis in India is indeed very serious, the Biden Administration said on Friday, noting that the cases have not peaked yet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X