ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತವಾಗಿ ಹಿಂದೆ ಸರಿದ ಅಮೆರಿಕ

ವಾಷಿಂಗ್ಟನ್, ಜುಲೈ 8: ಕೊರೊನಾ ವೈರಸ್ ವಿಚಾರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಚೀನಾಗೆ ಬೆಂಬಲವಾಗಿ ನಿಂತಿದೆ ಎಂದು ಆರೋಪಿಸಿದ್ದ ಡೊನಾಲ್ಡ್ ಟ್ರಂಪ್ ಇದೀಗ, ಅಧಿಕೃತವಾಗಿ ಡಬ್ಲ್ಯೂ ಎಚ್ ಓ ಸಂಸ್ಥೆಯಿಂದ ಹಿಂದೆ ಸರಿದಿದ್ದಾರೆ.

ಈ ಕುರಿತು ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರಿಗೆ ಅಮೆರಿಕ ಮಾಹಿತಿ ರವಾನೆ ಮಾಡಿದ್ದು, ಜುಲೈ 8, 2021 ರಿಂದ ಅಮೆರಿಕ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತವಾಗಿ ಹೊರಗುಳಿಯಲಿದೆ ಎಂದು ತಿಳಿಸಿದ್ದಾರೆ.

ಚೀನಾ ಉದ್ದೇಶವಪೂರ್ವಕವಾಗಿ ಜಗತ್ತಿಗೆ ಕೊರೊನಾ ವೈರಸ್ ಹರಡಿಸಿದೆ, ಸೂಕ್ತ ಪರಿಶೀಲನೆ ಅಗತ್ಯ ಎಂದು ಡೊನಾಲ್ಡ್ ಟ್ರಂಪ್ ಆರೋಪಿಸಿದ್ದರು. ಆದರೆ, ಟ್ರಂಪ್ ಆರೋಪಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಯಾವುದೇ ಪಾಸಿಟಿವ್ ಪ್ರಿತಿಕ್ರಿಯೆ ನೀಡಿರಲಿಲ್ಲ.

Donald trump administration formally withdraws from WHO

ಇದರಿಂದ ಸಹಜವಾಗಿ ಆಕ್ರೋಶಗೊಂಡ ಡೊನಾಲ್ಡ್ ಟ್ರಂಪ್, ವಿಶ್ವ ಆರೋಗ್ಯ ಸಂಸ್ಥೆ ಚೀನಾ ಪರವಾಗಿ ನಿಂತಿದೆ, ಡಬ್ಲ್ಯೂ ಎಚ್ ಒ ಗೆ ಯುಎಸ್ ನೀಡುವ ಅನುದಾನವನ್ನು ನಾವು ನಿಲ್ಲಿಸುತ್ತೇವೆ ಎಂದು ಮೇ ತಿಂಗಳಲ್ಲಿ ಟ್ರಂಪ್ ಘೋಷಣೆ ಮಾಡಿದ್ದರು.

ವಿಶ್ವ ಆರೋಗ್ಯ ಸಂಸ್ಥೆಗೆ ಅತಿ ಹೆಚ್ಚು ಅನುದಾನ ನೀಡುವ ಅಮೆರಿಕ ಅಧ್ಯಕ್ಷ ತಮ್ಮ ಘೋಷಣೆಯಂತೆ, ಅಧಿಕೃತವಾಗಿ ಹೊರಬಂದಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಗೆ ಚೀನಾ ಪ್ರತಿ ವರ್ಷ 300 ಕೋಟಿ ಅನುದಾನ ನೀಡುತ್ತಿದೆ. ಅಮೆರಿಕ 3 ಸಾವಿರ ಕೋಟಿ ಅನುದಾನ ನೀಡುತ್ತಿದೆ ಎಂಬ ಮಾಹಿತಿ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+