ಮೋದಿಯನ್ನು ಹಾಡಿಹೊಗಳಿ ಅಭಿನಂದಿಸಿದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್, ಮೇ 25: ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಭರ್ಜರಿ ವಿಜಯ ಸಾಧಿಸಿದ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿ, ಹಾಡಿಹೊಗಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ ನಂತರ ಪ್ರತಿಕ್ರಿಯೆ ನೀಡಿದ ಟ್ರಂಪ್, 'ಈಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರೆ ಮಾಡಿ ಅವರ ಮಹಾನ್ ವಿಜಯಕ್ಕೆ ಅಭಿನಂದನೆ ಸಲ್ಲಿಸಿದ್ದೇನೆ. ಅವರು ಭಾರತೀಯರಿಗೆ ಮಹಾನ್ ವ್ಯಕ್ತಿ ಮತ್ತು ಮುಖಂಡ. ಅಂಥ ನಾಯಕರನ್ನು ಪಡೆಯಲು ಭಾರತೀಯರು ಅದೃಷ್ಟ ಮಾಡಿದ್ದರು' ಎಂದು ಟ್ರಂಪ್ ಹೇಳಿದ್ದಾರೆ.

Donald Trump Congratulates Narendra Modi, says Indians are lucky to have him

ಏಪ್ರಿಲ್ 11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆಯ ಫಲಿತಾಂಶ ಮೇ 23 ರಂದು ಬಿಡುಗಡೆಯಾಗಿದ್ದು, ಮೋದಿ ನೇತೃತ್ವದ ಬಿಜೆಪಿ ಮೊದಲ ಬಾರಿಗೆ 300 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಿತ್ತು. ಎನ್ ಡಿಎ ಮೈತ್ರಿಕೂಟ 352 ಸ್ಥಾನ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿತ್ತು.

ಈ ಹಿನ್ನೆಲೆಯಲ್ಲಿ ವಿಶ್ವದ ನಾನಾ ದೇಶದ ನಾಯಕರು ಪ್ರಧಾನಿ ಮೋದಿ ಅವರಿಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದು, ಮುಂಬರುವ ದೇಶದಲ್ಲಿ ವಿಶ್ವದ ಎಲ್ಲಾ ರಾಷ್ಟ್ರಗಳೊಂದಿಗೆ ಭಾರತ ಸೌಹಾರ್ದ ಸಂಬಂಧ ನಿಭಾಯಯಿಸಿಕೊಂಡು ಹೋಗುವ ಭರವಸೆಯನ್ನು ಈ ಎಲ್ಲಾ ನಾಯಕರೂ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+