• search
  • Live TV
ವಾಷಿಂಗ್ಟನ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿಡಿಯೋ; ಅಭಿಮಾನಿಗಳ ಭೇಟಿಗೆ ಆಸ್ಪತ್ರೆಯಿಂದ ಹೊರ ಬಂದ ಟ್ರಂಪ್

|

ವಾಷಿಂಗ್ಟನ್, ಅಕ್ಟೋಬರ್ 05 : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಕೋವಿಡ್ ಸೋಂಕು ದೃಢಪಟ್ಟ ಕಾರಣ 74 ವರ್ಷದ ಡೊನಾಲ್ಡ್‌ ಟ್ರಂಪ್ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಾಲ್ಟರ್ ರೀಡ್ ರಾಷ್ಟ್ರೀಯ ಸೇನಾ ವೈದ್ಯಕೀಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಟ್ರಂಪ್ ಅಭಿಮಾನಿಗಳಿಗೆ ಅಚ್ಚರಿ ನೀಡುವುದಾಗಿ ಟ್ವೀಟರ್‌ನಲ್ಲಿ ವಿಡಿಯೋ ಹಾಕಿದ್ದರು. ಆಸ್ಪತ್ರೆ ಬಳಿ ಜಮಾವಣೆಗೊಂಡಿದ್ದ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದ್ದರು.

ಡೊನಾಲ್ಡ್ ಟ್ರಂಪ್ ಆಸ್ಪತ್ರೆಯಿಂದ ಹೊರಗೆ ಬಂದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದರು. ಕಾರಿನಲ್ಲಿ ಆಸ್ಪತ್ರೆ ಮುಂಭಾಗ ಸೇರಿದ್ದ ಜನರತ್ತ ಕೈ ಬೀಸಿ, ಚಪ್ಪಾಳೆ ತಟ್ಟುತ್ತಾ ಅವರು ಮುಂದೆ ಸಾಗಿದರು. ಈ ಮೂಲಕ ವಿಡಿಯೋದಲ್ಲಿ ಹೇಳಿದಂತೆಯೇ ನಡೆದುಕೊಂಡರು.

ಕೋವಿಡ್ ಸೋಂಕು ದೃಢಪಟ್ಟ ಕಾರಣ ಡೊನಾಲ್ಡ್ ಟ್ರಂಪ್‌ರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಾನು ಆರೋಗ್ಯವಾಗಿದ್ದೇನೆ, ಆತಂಕ ಬೇಡ ಎಂದು ಅವರು ಟ್ವೀಟ್ ಮಾಡಿದ್ದರು. ಕೋವಿಡ್ ಸೋಂಕು ತಗುಲಿದ ಕಾರಣ ಟ್ರಂಪ್ ಚುನಾವಣಾ ಪ್ರಚಾರಗಳನ್ನು ರದ್ದು ಮಾಡಲಾಗಿತ್ತು.

ಕೋವಿಡ್ ಸೋಂಕು ತಗುಲಿದ್ದ ಡೊನಾಲ್ಡ್ ಟ್ರಂಪ್‌ಗೆ ಸ್ವಲ್ಪ ಆಯಾಸ, ಸೋಂಕಿನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದ್ದವು. ಅವರಿಗೆ ವೈರಾಣಿ ನಿಗ್ರಹ ಔಷಧಿಯನ್ನು ನೀಡಲಾಗುತ್ತಿದೆ ಎಂದು ಪ್ರಕಟಿಸಲಾಗಿತ್ತು. ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಸೋಮವಾರ ಅವರು ಡಿಸ್ಚಾರ್ಜ್ ಆಗಲಿದ್ದಾರೆ.

English summary
America president Donald Trump waves at supporters from his car outside Walter Reed National Military Medical Center where he is being treated for COVID-19. Trump may discharged on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X