ಕೊರೊನಾವೈರಸ್ ಪರೀಕ್ಷೆಯಲ್ಲಿ ಭಾರತಕ್ಕೆ ಎರಡನೇ ಸ್ಥಾನ: ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್, ಆಗಸ್ಟ್ 11: ಕೊರೊನಾವೈರಸ್ ಪರೀಕ್ಷೆಯಲ್ಲಿ ಅಮೆರಿಕದ ನಂತರದ ಸ್ಥಾನದಲ್ಲಿ ಭಾರತವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಅಮೆರಿಕ ನಂಬರ್ ಒನ್ ಸ್ಥಾನದಲ್ಲಿದೆ. ಅಮೆರಿಕದಲ್ಲಿ ಇಲ್ಲಿಯವರೆಗೆ 6.5 ಕೋಟಿ ಮಂದಿಗೆ ಕೊರೊನಾ ಸೋಂಕಿನ ಪರೀಕ್ಷೆ ನಡೆಸಲಾಗಿದೆ. ಭಾರತದಲ್ಲಿ 1.1 ಕೋಟಿ ಮಂದಿಗೆ ಕೊರೊನಾ ಸೋಂಕು ಪರೀಕ್ಷೆ ನಡೆಸಿದ್ದಾರೆ.
ಅಮೆರಿಕ-ಭಾರತ ಹೆಗಲಿಗೆ ಹೆಗಲು ಕೊಟ್ಟು ಮಾರಕ ವೈರಸ್ ವಿರುದ್ಧ ಹೋರಾಟ ನಡೆಸುತ್ತಿದ್ದು, ಶೀಘ್ರದಲ್ಲೇ ಇದೆಲ್ಲಕ್ಕೂ ಅಂತ್ಯ ದೊರೆಯಲಿದೆ ಎಂದು ಅವರು ಹೇಳಿದ್ದಾರೆ. ಇಂದು ಶ್ವೇತಭವನದ ಹೊರಗೆ ಶಸ್ತ್ರಧಾರಿಯಾಗಿದ್ದ ವ್ಯಕ್ತಿಯ ಮೇಲೆ ಸೀಕ್ರೇಟ್ ಸರ್ವೀಸ್ ಗಾರ್ಡ್‌ಗಳು ಗುಂಡು ಹಾರಿಸಿದ್ದಾರೆ. ಶಂಕಿತ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದು ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಅಮೆರಿಕದ ಆಸುಪಾಸಿನಲ್ಲಿ ಭಾರತವನ್ನು ಬಿಟ್ಟು ಇನ್ಯಾವುದೇ ದೇಶವಿಲ್ಲ. ಈ ವರ್ಷದ ಅಂತ್ಯದೊಳಗೆ ಕೊರೊನಾ ಸೋಂಕಿಗೆ ಲಸಿಕೆ ಬರಲಿದೆ. ಕಳೆದ ಒಂದು ವಾರದಲ್ಲಿ ಅಮೆರಿಕದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಶೇ.14ರಷ್ಟು ಕಡಿಮೆಯಾಗಿವೆ.
ಮೃತರ ಸಂಖ್ಯೆ ಶೇ.9ರಷ್ಟಿದೆ. ಆಸ್ಪತ್ರೆಯಲ್ಲಿ ದಾಖಲಾಗುವವರ ಸಂಖ್ಯೆ ಶೇ.7ರಷ್ಟು ಕಡಿಮೆಯಾಗಿದೆ. ಜಾನ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯದ ಮಾಹಿತಿ ಪ್ರಕಾರ ಅಮೆರಿಕದಲ್ಲಿ ಸೋಮವಾರದವರೆಗೆ 5,075,678 ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿವೆ.












Click it and Unblock the Notifications