ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾವೈರಸ್ ಪರೀಕ್ಷೆಯಲ್ಲಿ ಭಾರತಕ್ಕೆ ಎರಡನೇ ಸ್ಥಾನ: ಡೊನಾಲ್ಡ್ ಟ್ರಂಪ್

|
Google Oneindia Kannada News

ವಾಷಿಂಗ್ಟನ್, ಆಗಸ್ಟ್ 11: ಕೊರೊನಾವೈರಸ್ ಪರೀಕ್ಷೆಯಲ್ಲಿ ಅಮೆರಿಕದ ನಂತರದ ಸ್ಥಾನದಲ್ಲಿ ಭಾರತವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಅಮೆರಿಕ ನಂಬರ್ ಒನ್ ಸ್ಥಾನದಲ್ಲಿದೆ. ಅಮೆರಿಕದಲ್ಲಿ ಇಲ್ಲಿಯವರೆಗೆ 6.5 ಕೋಟಿ ಮಂದಿಗೆ ಕೊರೊನಾ ಸೋಂಕಿನ ಪರೀಕ್ಷೆ ನಡೆಸಲಾಗಿದೆ. ಭಾರತದಲ್ಲಿ 1.1 ಕೋಟಿ ಮಂದಿಗೆ ಕೊರೊನಾ ಸೋಂಕು ಪರೀಕ್ಷೆ ನಡೆಸಿದ್ದಾರೆ.

ಟ್ರಂಪ್ ಸುದ್ದಿಗೋಷ್ಠಿ ವೇಳೆ ಶ್ವೇತ ಭವನದ ಎದುರಿನಲ್ಲೇ ಗುಂಡಿನ ದಾಳಿಟ್ರಂಪ್ ಸುದ್ದಿಗೋಷ್ಠಿ ವೇಳೆ ಶ್ವೇತ ಭವನದ ಎದುರಿನಲ್ಲೇ ಗುಂಡಿನ ದಾಳಿ

ಅಮೆರಿಕ-ಭಾರತ ಹೆಗಲಿಗೆ ಹೆಗಲು ಕೊಟ್ಟು ಮಾರಕ ವೈರಸ್ ವಿರುದ್ಧ ಹೋರಾಟ ನಡೆಸುತ್ತಿದ್ದು, ಶೀಘ್ರದಲ್ಲೇ ಇದೆಲ್ಲಕ್ಕೂ ಅಂತ್ಯ ದೊರೆಯಲಿದೆ ಎಂದು ಅವರು ಹೇಳಿದ್ದಾರೆ. ಇಂದು ಶ್ವೇತಭವನದ ಹೊರಗೆ ಶಸ್ತ್ರಧಾರಿಯಾಗಿದ್ದ ವ್ಯಕ್ತಿಯ ಮೇಲೆ ಸೀಕ್ರೇಟ್ ಸರ್ವೀಸ್ ಗಾರ್ಡ್‌ಗಳು ಗುಂಡು ಹಾರಿಸಿದ್ದಾರೆ. ಶಂಕಿತ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದು ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Donald Trump Says India Stands Second After US In Coronavirus Testing

ಅಮೆರಿಕದ ಆಸುಪಾಸಿನಲ್ಲಿ ಭಾರತವನ್ನು ಬಿಟ್ಟು ಇನ್ಯಾವುದೇ ದೇಶವಿಲ್ಲ. ಈ ವರ್ಷದ ಅಂತ್ಯದೊಳಗೆ ಕೊರೊನಾ ಸೋಂಕಿಗೆ ಲಸಿಕೆ ಬರಲಿದೆ. ಕಳೆದ ಒಂದು ವಾರದಲ್ಲಿ ಅಮೆರಿಕದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಶೇ.14ರಷ್ಟು ಕಡಿಮೆಯಾಗಿವೆ.

ಮೃತರ ಸಂಖ್ಯೆ ಶೇ.9ರಷ್ಟಿದೆ. ಆಸ್ಪತ್ರೆಯಲ್ಲಿ ದಾಖಲಾಗುವವರ ಸಂಖ್ಯೆ ಶೇ.7ರಷ್ಟು ಕಡಿಮೆಯಾಗಿದೆ. ಜಾನ್ ಹಾಪ್‌ಕಿನ್ಸ್‌ ವಿಶ್ವವಿದ್ಯಾಲಯದ ಮಾಹಿತಿ ಪ್ರಕಾರ ಅಮೆರಿಕದಲ್ಲಿ ಸೋಮವಾರದವರೆಗೆ 5,075,678 ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿವೆ.

English summary
US President Donald Trump today that India stands second in terms of coronavirus testing while no other country comes close to the United States.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X