ಡೊನಾಲ್ಡ್‌ ಟ್ರಂಪ್‌ಗೆ ಪ್ರತಿ ದಿನ ಕೊರೊನಾ ಪರೀಕ್ಷೆ

ವಾಷಿಂಗ್ಟನ್, ಮೇ 8: ಮಿಲಿಟರಿ ಸಹಾಯಕರಿಗೆ ಕೊರೊನಾ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಪ್ರತಿ ದಿನ ಕೊರೊನಾ ಪರೀಕ್ಷೆಗೆ ಒಳಗಾಗುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ನಿನ್ನೆ ಮತ್ತು ಇಂದು ನಾನು ಮತ್ತು ಮೈಕ್ ಪೆನ್ಸ್ ಕೊರೊನಾ ಪರೀಕ್ಷೆ ಮಾಡಿಸಿಕೊಂಡೆವು. ಎರಡು ಬಾರಿ ಕೂಡ ನೆಗೆಟಿವ್ ಬಂದಿದೆ. ವಾರಕ್ಕೊಮ್ಮೆ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ ಸೋಂಕು ಬಂದಿದ್ದರೆ ಕೂಡಲೇ ಪತ್ತೆಯಾಗಲಿಕ್ಕಿಲ್ಲ ಎಂದು ಪ್ರತಿದಿನ ಮಾಡಿಸಿಕೊಳ್ಳುತ್ತೇವೆ ಎಂದರು.

ಅಮೆರಿಕ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಖಾಸಗಿ ಭದ್ರತಾ ಸಹಾಯಕನಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು ಆತನೊಂದಿಗೆ ಅಧ್ಯಕ್ಷರು ತೀರಾ ಹತ್ತಿರದ ಸಂಪರ್ಕ ಹೊಂದಿರಲಿಲ್ಲ ಎಂದು ತಿಳಿದುಬಂದಿದೆ.

 Donald Trump Says Will Be Tested For Coronavirus Daily

''ಆತನೊಂದಿಗೆ ನಾನು ಹತ್ತಿರದ ಸಂಪರ್ಕ ಹೊಂದಿರಲಿಲ್ಲ. ವ್ಯಕ್ತಿ ಯಾರು ಎಂಬುದು ನನಗೆ ಗೊತ್ತಿದೆ. ಆದರೂ ಸುರಕ್ಷತೆ ದೃಷ್ಟಿಯಿಂದ ನಾನು, ಉಪಾಧ್ಯಕ್ಷ ಮೈಕ್ ಪೆನ್ಸ್ ಮತ್ತು ಶ್ವೇತಭವನದ ಇತರ ಸಿಬ್ಬಂದಿಗಳು ಪ್ರತಿದಿನ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳುತ್ತೇವೆ ಎಂದು ಡೊನಾಲ್ಡ್ ಟ್ರಂಪ್ ನಿನ್ನೆ ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಅಮೆರಿಕದಲ್ಲಿ ಕೊರೊನಾ ರಣಕೇಕೆ ಮುಂದುವರೆದಿದ್ದು ಒಂದೇ ದಿನ 2448 ಮಂದಿ ಮೃತಪಟ್ಟಿದ್ದಾರೆ. ಈ ನಡುವೆ ಅಮೆರಿಕಾದಲ್ಲಿ 1,254,750 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ವೈರಸ್ ಮಟ್ಟಹಾಕಲು ಅಲ್ಲಿನ ಅಧಿಕಾರಿಗಳು ಕಷ್ಟಪಡುತ್ತಿದ್ದಾರೆ.

1,254,750 ಮಂದಿ ಸೋಂಕಿತರ ಪೈಕಿ 217,250 ಮಂದಿ ವೈರಸ್ ನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆಂದು ವರದಿಗಳು ತಿಳಿಸಿವೆ. ಇದರೊಂದಿಗೆ ಸಾವಿನ ಸಂಖ್ಯೆ 75,543ಕ್ಕೆ ಏರಿಕೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+