ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುಎಸ್ ಚುನಾವಣೆಯಲ್ಲಿ ಜೋ ಬಿಡೆನ್ ಗೆಲುವು ಒಪ್ಪಿಕೊಂಡ ಟ್ರಂಪ್!

|
Google Oneindia Kannada News

ವಾಶಿಂಗ್ಟನ್, ನವೆಂಬರ್.15: ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಮೊದಲ ಬಾರಿಗೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡೆನ್ ಅವರು ಗೆಲುವು ಸಾಧಿಸಿದ್ದಾರೆ ಎಂದು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಒಪ್ಪಿಕೊಂಡಿದ್ದಾರೆ.

ಅಮೆರಿಕಾ ಅಧ್ಯಕ್ಷೀಯ ಚುನಾವಣೆ ಕಠಿಣವಾಗಿದ್ದು ಅವರು ಗೆಲುವು ಸಾಧಿಸಿದ್ದಾರೆ ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಯಾವುದೇ ಮತ ವೀಕ್ಷಕರು ಅವಕಾಶವಿರಲಿಲ್ಲ. ಆಮೂಲಾಗ್ರವಾದ ಎಡಪಂಥೀಯ ಖಾಸಗಿ ಒಡೆತನದ ಕಂಪನಿ ಡೊಮಿನಿಯನ್, ಕೆಟ್ಟ ಹೆಸರು ಮತ್ತು ಬಮ್ ಉಪಕರಣಗಳಿಂದ ಟೆಕ್ಸಾಸ್ ನಲ್ಲಿ ಗೆಲ್ಲುವುದಕ್ಕೆ ಸಾಧ್ಯವಾಗಲಿಲ್ಲ. ಆದರೆ ನಕಲಿ ಮತ್ತು ಮಾಧ್ಯಮಗಳಿಂದ ನಾನು ಸಾಕಷ್ಟು ಗೆದ್ದಿದ್ದೇನೆ ಎಂದು ಟ್ರಂಪ್ ಬರೆದುಕೊಂಡಿದ್ದಾರೆ.

Fact Check: USA ಅಧ್ಯಕ್ಷರ ಪದಗ್ರಹಣದಲ್ಲಿ ಡಾ.ಮನಮೋಹನ್ ಸಿಂಗ್ ಮುಖ್ಯಅತಿಥಿFact Check: USA ಅಧ್ಯಕ್ಷರ ಪದಗ್ರಹಣದಲ್ಲಿ ಡಾ.ಮನಮೋಹನ್ ಸಿಂಗ್ ಮುಖ್ಯಅತಿಥಿ

2020ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಪರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಈ ವೇಳೆ ವಾಷಿಂಗ್ಟನ್‌ನ ಬೀದಿಗಳಲ್ಲಿ ಹಿಂಸಾಚಾರ ಭುಗಿಲೆದ್ದಿತು.

Donald Trump Will Finally Admits Joe Biden Won But Asserts Election Was Rigged

ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ಮತದಾನ ಪ್ರಕ್ರಿಯೆ ಮುಗಿದ ನಂತರದಲ್ಲಿ ಚಲಾವಣೆಯಾದ ಮತಗಳನ್ನು ಯಾವುದೇ ಕಾರಣಕ್ಕೂ ಎಣಿಕೆ ಮಾಡುವಂತಿಲ್ಲ ಎಂದು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಆಗ್ರಹಿಸಿದ್ದರು. ಪೆನ್ಸಿಲ್ವೇನಿಯಾ, ಜಾರ್ಜಿಯಾ, ಅರಿಜೋನಾ, ನೇವಾಡ ಮತ್ತು ಮಿಚಿಗಾನ್ ನಲ್ಲಿ ಮತಎಣಿಕೆಯಲ್ಲಿ ಲೋಪವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಈ ಹಿಂದೆ ದೂಷಿಸಿದ್ದರು. ಅದರ ವಿರುದ್ಧ ದೂರನ್ನು ಕೂಡಾ ದಾಖಲಿಸಿದ್ದರು.

ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದ ಒಟ್ಟು 538 ಮತಗಳ ಪೈಕಿ ಅಧ್ಯಕ್ಷರಾಗಿ ಆಯ್ಕೆಯಾಗುವುದಕ್ಕೆ ಕನಿಷ್ಠ 270 ಮತಗಳ ಅಗತ್ಯವಿದೆ. ಸದ್ಯದ ಅಂಕಿ-ಅಂಶಗಳ ಪ್ರಕಾರ, ಡೆಮಾಕ್ರೆಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡೆನ್ 290 ಮತಗಳನ್ನು ಪಡೆದುಕೊಳ್ಳುವ ಮೂಲಕ ಜಯಭೇರಿ ಬಾರಿಸಿದ್ದಾರೆ. ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡೊನಾಲ್ಡ್ ಟ್ರಂಪ್ 232 ಮತಗಳೊಂದಿಗೆ ಸೋಲು ಕಂಡಿದ್ದಾರೆ.

English summary
Donald Trump Will Finally Admits Joe Biden "Won" But Asserts Election Was Rigged.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X