ಜಗತ್ತಿನ ನಂ. 1 ರಾಷ್ಟ್ರಕ್ಕೆ ‘ಕೊರೊನಾ’ 4ನೇ ಅಲೆ ಆತಂಕ!

ಹಳೇ ಗಾಯವೇ ಹಸಿಯಾಗಿರುವಾಗ ಜಗತ್ತಿನ ನಂಬರ್ 1 ರಾಷ್ಟ್ರಕ್ಕೆ ಮತ್ತೊಂದು ಆಘಾತ ಎದುರಾಗಿದೆ. 3ನೇ ಅಲೆಗೆ ತತ್ತರಿಸಿ ಹೋಗಿದ್ದ ಅಮೆರಿಕದಲ್ಲಿ ಕೊರೊನಾ 4ನೇ ಅಲೆಯ ಆತಂಕ ಎದುರಾಗಿದೆ. ಕೆಲ ವಾರಗಳಿಂದ ಅಮೆರಿಕದಲ್ಲಿ ಹೊಸ ಸೋಂಕಿತರ ಸಂಖ್ಯೆ ಇಳಿಮುಖವಾಗಿತ್ತು. ಹಲವು ತಿಂಗಳುಗಳ ಬಳಿಕ 50 ಸಾವಿರ ಒಳಗೆ ಹೊಸ ಸೋಂಕಿತರ ಸಂಖ್ಯೆ ಕುಸಿದಿತ್ತು.

ಆದರೆ ಇದೀಗ ಮತ್ತೆ ನಿತ್ಯ 50 ಸಾವಿರಕ್ಕೂ ಹೆಚ್ಚು ಸೋಂಕಿತರು ಪತ್ತೆ ಆಗುತ್ತಿದ್ದು ನಿನ್ನೆ ಒಂದೇ ದಿನ 77 ಸಾವಿರ ಕೇಸ್ ಕನ್ಫರ್ಮ್ ಆಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 20 ಲಕ್ಷ ತಲುಪಿದೆ. ಅಷ್ಟಕ್ಕೂ ಕೊರೊನಾ ಕಾರಣಕ್ಕೆ ಅಮೆರಿಕದಲ್ಲಿ ಎಲ್ಲಾ ಅಯೋಮಯವಾಗಿದೆ.

ಕೊರೊನಾ ಬಂದಪ್ಪಳಿಸಿದ ಬಳಿಕ ವಿಶ್ವದ ದೊಡ್ಡಣ್ಣನ ಬುಡ ಅಲುಗಾಡುತ್ತಿದೆ. ನಂ. 1 ರಾಷ್ಟ್ರ ಎಂಬ ಪಟ್ಟಕ್ಕೂ ಕುತ್ತು ಬಂದಿದೆ. ಇಂತಹ ಸ್ಥಿತಿಯಲ್ಲೇ ಕೊರೊನಾ 4ನೇ ಅಲೆಯ ಆತಂಕ ಎದುರಾಗಿರುವುದು ಚಿಂತೆ ಹೆಚ್ಚಿಸಿದೆ. ಇನ್ನೊಂದು ವಾರದಲ್ಲಿ ಅಮೆರಿಕದ ಹಣೆಬರಹ ನಿರ್ಧಾರವಾಗಲಿದೆ.

ವಿಶ್ವಯದ್ಧದ ನಂತರ ಅತಿಹೆಚ್ಚು ಸಾವು

ವಿಶ್ವಯದ್ಧದ ನಂತರ ಅತಿಹೆಚ್ಚು ಸಾವು

ಮಿತ್ರಪಡೆಗಳ ಪರ 2ನೇ ಮಹಾಯುದ್ಧದಲ್ಲಿ ಅಖಾಡ ಪ್ರವೇಶಿಸಿದ್ದ ದೊಡ್ಡಣ್ಣ ಅಮೆರಿಕ ಭಾರಿ ಸಾವು, ನೋವು ಅನುಭವಿಸಿತ್ತು. ಅಂದಾಜು 4 ಲಕ್ಷಕ್ಕೂ ಹೆಚ್ಚು ಅಮೆರಿಕನ್ನರು 2ನೇ ವಿಶ್ವಯುದ್ಧದಲ್ಲಿ ಮೃತಪಟ್ಟಿದ್ದರು. ಆದರೆ ಕೊರೊನಾ ಇದಕ್ಕಿಂತಲೂ ಹೆಚ್ಚಿನ ಸಾವು ನೋವು ಉಂಟುಮಾಡಿದೆ. ಈಗಾಗಲೇ 5 ಲಕ್ಷ 77 ಸಾವಿರ ಜನ ಅಮೆರಿಕದಲ್ಲಿ ಕೊರೊನಾಗೆ ಬಲಿಯಾಗಿದ್ದು, ಈ ಸಂಖ್ಯೆ 6 ಲಕ್ಷ ತಲುಪುವ ಆತಂಕವಿದೆ. ಕೆಲ ಪ್ರದೇಶಗಳಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರನ್ನು ಮಣ್ಣು ಮಾಡುವುದಕ್ಕೂ ಜಾಗದ ಕೊರತೆ ಎದುರಾಗಿದೆ.

ಕೊರೊನಾ ಕೂಪದಲ್ಲಿ ಅಮೆರಿಕ

ಕೊರೊನಾ ಕೂಪದಲ್ಲಿ ಅಮೆರಿಕ

ಬೈಡನ್ ಅಧಿಕಾರ ಸ್ವೀಕರಿಸಿ ಸುಮಾರು 3 ತಿಂಗಳಾಗಿದೆ ಅಷ್ಟೇ. ಜೋ ಬೈಡನ್ ಅಧಿಕಾರ ಸ್ವೀಕರಿಸಿದ ತಕ್ಷಣ ಅಮೆರಿಕನ್ನರ ಸಮಸ್ಯೆಗಳು ಸರಿಯಾಗುವುದಿಲ್ಲ. ಏಕೆಂದರೆ ಅಮೆರಿಕ ಶತಮಾನದಲ್ಲೇ ಎದುರಿಸದಷ್ಟು ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಇದನ್ನೆಲ್ಲಾ ಬಗೆಹರಿಸಲು ಹಲವು ವರ್ಷಗಳೇ ಬೇಕು. ಅದರಲ್ಲೂ ಟ್ರಂಪ್ ಅಮೆರಿಕದ ಘನತೆಗೆ ಹಾಗೂ ಅಮೆರಿಕ ಅರ್ಥ ವ್ಯವಸ್ಥೆಗೆ ಮಾಡಿದ ಘಾಸಿಗೆ ಮುಲಾಮು ಹಚ್ಚಬೇಕು. ಹೀಗಾಗಿ ಬೈಡನ್‌ಗೆ ಅಮೆರಿಕ ಅಧ್ಯಕ್ಷರ ಖುರ್ಚಿ ಹೂವಿನ ಹಾಸಿಗೆ ಆಗಿಲ್ಲ, ಮುಳ್ಳಿನ ಹಾದಿಯಾಗಿದೆ ಎನ್ನುತ್ತಾರೆ ಅರ್ಥಶಾಸ್ತ್ರಜ್ಞರು. ಇದನ್ನೆಲ್ಲಾ ಎದುರಿಸಿ, ಅಮೆರಿಕ ಹಾಗೂ ಅಮೆರಿಕನ್ನರನ್ನು ರಕ್ಷಿಸುವ ಹೊಣೆ ಜೋ ಬೈಡನ್ ಹೆಗಲ ಮೇಲಿದೆ.

3 ಕೋಟಿ ಕೊರೊನಾ ಸೋಂಕಿತರು..!

3 ಕೋಟಿ ಕೊರೊನಾ ಸೋಂಕಿತರು..!

ಅಮೆರಿಕದ ಸ್ಥಿತಿ ಭೀಕರವಾಗಿದ್ದು, ಸೋಂಕಿತರ ಸಾವಿನ ಸಂಖ್ಯೆಯ ವಿಚಾರದಲ್ಲಿ ಹೊಸ ಹೊಸ ದಾಖಲೆಗಳನ್ನ ಬರೆಯುತ್ತಿದೆ. ಜಗತ್ತಿನಾದ್ಯಂತ 13 ಕೋಟಿ 82 ಲಕ್ಷ ಸೋಂಕಿತರು ಪತ್ತೆಯಾಗಿದ್ರೆ, ಕೇವಲ ಅಮೆರಿಕದಲ್ಲೇ ಈ ಸಂಖ್ಯೆ 3 ಕೋಟಿಯನ್ನೂ ಮೀರಿದೆ. ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ ಜೊತೆ ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ ಭಯ ಹುಟ್ಟಿಸುತ್ತಿದೆ. ಸುಮಾರು 69 ಲಕ್ಷ ಆಕ್ಟಿವ್ ಕೇಸ್‌ಗಳು ಅಮೆರಿಕದ ಆಸ್ಪತ್ರೆಗಳನ್ನ ತುಂಬುವಂತೆ ಮಾಡಿದೆ. ಇಷ್ಟೇ ಆಗಿದ್ದರೆ ಪರಿಸ್ಥಿತಿ ನಿಭಾಯಿಸಬಹುದಿತ್ತೋ ಏನೋ, ಆದರೆ ಈವರೆಗೂ 5 ಲಕ್ಷ 77 ಸಾವಿರ ಅಮೆರಿಕನ್ನರು ಡೆಡ್ಲಿ ಕೊರೊನಾಗೆ ಉಸಿರು ಚೆಲ್ಲಿದ್ದಾರೆ. ಇದು ಪರಿಸ್ಥಿತಿಯ ಭಯಾನಕತೆಯನ್ನು ಬಿಡಿಸಿಡುತ್ತಿದೆ.

ನಂ. 2 ಆಗತ್ತಾ ಅಮೆರಿಕ..?

ನಂ. 2 ಆಗತ್ತಾ ಅಮೆರಿಕ..?

ಅಮೆರಿಕದ ಸದ್ಯದ ಪರಿಸ್ಥಿತಿಯನ್ನು ಗಮನಿಸುತ್ತಿದ್ದರೆ, ಅಮೆರಿಕದ ಆರ್ಥಿಕತೆಗೆ ಬಲವಾದ ಪೆಟ್ಟು ಬಿದ್ದಿರುವುದು ಖಚಿತವಾಗುತ್ತಿದೆ. ಹೀಗಾಗಿ ಅಮೆರಿಕದ ಪರಮ ಶತ್ರು ಚೀನಾ ಅಮೆರಿಕದ ನಂಬರ್ 1 ಸ್ಥಾನವನ್ನು ಆಕ್ರಮಿಸಲು ತುದಿಗಾಗಲಲ್ಲಿ ನಿಂತಿದೆ. ಇದು ಕೂಡ ಅಮೆರಿಕದ ನಾಯಕರನ್ನ ಹಾಗೂ ಉದ್ಯಮಿಗಳನ್ನ ಕಂಗೆಡಿಸಿದೆ. ಹಾಗೇ ಕೊರೊನಾ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ಜಗತ್ತು ಆರ್ಥಿಕ ಹಿಂಜರಿತ ಕಾಣುತ್ತಿದ್ದರೆ ಚೀನಾದ ಜಿಡಿಪಿ ಮಾತ್ರ ಗಮನಾರ್ಹ ಬೆಳವಣಿಗೆ ಕಾಣುತ್ತಿರುವುದು ಆತಂಕ ಹೆಚ್ಚಾಗುವಂತೆ ಮಾಡಿದೆ. ಇದು ಅಮೆರಿಕದ ನಂಬರ್ 1 ಸ್ಥಾನ ಅಲುಗಾಡಿಸುವ ಜೊತೆಗೆ, ಜಗತ್ತಿನಲ್ಲಿ ಹೊಸ ಆರ್ಥಿಕ ಶಕ್ತಿಯ ಉಗಮಕ್ಕೂ ಕಾರಣವಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+