320 ಕೋಟಿ ನಕಲಿ ಖಾತೆಗಳನ್ನು ಕಿತ್ತುಹಾಕಿದ ಫೇಸ್‌ಬುಕ್
ವಾಷಿಂಗ್ಟನ್, ನವೆಂಬರ್ 16: ಏಪ್ರಿಲ್‌ನಿಂದ ಸೆಪ್ಟೆಂಬರ್ ಅವಧಿಯಲ್ಲಿ ಫೇಸ್‌ಬುಕ್ 320 ಕೋಟಿಗೂ ಅಧಿಕ ನಕಲಿ ಖಾತೆಗಳನ್ನು ಕಿತ್ತುಹಾಕಿದೆ. ಜತೆಗೆ ಇದೇ ಅವಧಿಯಲ್ಲಿ 11.4 ಮಿಲಿಯನ್‌ನಷ್ಟು ದ್ವೇಷ ಕಾರುವ ಪೋಸ್ಟ್‌ಗಳನ್ನು ಸಹ ನಿರ್ಮೂಲನೆ ಮಾಡಿದೆ. ಕಳೆದ ಜನವರಿಯಿಂದ ಇಲ್ಲಿಯವರೆಗೆ ಫೇಸ್‌ಬುಕ್ ಸುಮಾರು 5.4 ಬಿಲಿಯನ್ ನಕಲಿ ಖಾತೆಗಳನ್ನು ಮತ್ತು 15.5 ಮಿಲಿಯನ್ ದ್ವೇಷ ಭಾಷಣದ ಪೋಸ್ಟ್‌ಗಳನ್ನು ತೆಗೆದುಹಾಕಿದೆ.
'ಕಳೆದ ಎರಡು ತ್ರೈಮಾಸಿಕ ಅವಧಿಯಲ್ಲಿ ನಾವು ನಕಲಿ, ನಿಂದನಾತ್ಮಕ ಖಾತೆಗಳನ್ನು ತೆರೆಯುವ ಪ್ರಯತ್ನಗಳನ್ನು ಪತ್ತೆಹಚ್ಚುವ ಮತ್ತು ಅವುಗಳನ್ನು ಬ್ಲಾಕ್ ಮಾಡುವ ಸಾಮರ್ಥ್ಯವನ್ನು ವೃದ್ಧಿಸಿಕೊಂಡಿದ್ದೇವೆ. ಪ್ರತಿದಿನವೂ ನಕಲಿ ಖಾತೆ ಸೃಷ್ಟಿಸುವ ಲಕ್ಷಾಂತರ ಪ್ರಯತ್ನಗಳನ್ನು ಈ ಪತ್ತೆಹಚ್ಚುವ ವ್ಯವಸ್ಥೆ ಮೂಲಕ ತಡೆದದ್ದೇವೆ' ಎಂದು ಸಾಮಾಜಿಕ ಜಾಲತಾಣಗಳ ಮುಂಚೂಣಿಯಲ್ಲಿರುವ ಸಂಸ್ಥೆ ಬುಧವಾರ ತಿಳಿಸಿದೆ.
ನಕಲಿ ಖಾತೆಗಳಲ್ಲಿ ಹೆಚ್ಚಿನವು ಫೇಸ್‌ಬುಕ್‌ನ ಮಾಸಿಕ ಸಕ್ರಿಯ ಬಳಕೆದಾರರ (ಎಂಎಯು) ಪಟ್ಟಿಯಲ್ಲಿ ಸೇರಿಕೊಳ್ಳುವ ಮೊದಲೇ ನೋಂದಣಿಯಾದ ಕೆಲವೇ ನಿಮಿಷಗಳಲ್ಲಿ ಪತ್ತೆಯಾಗಿವೆ.

ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಗಳು ಸಮೀಪಿಸುತ್ತಿದ್ದು, ಸುಳ್ಳು ಸುದ್ದಿಗಳು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಫೇಸ್‌ಬುಕ್ ನಕಲಿ ಖಾತೆಗಳ ಮೇಲೆ ಹೆಚ್ಚಿನ ನಿಗಾವಹಿಸಿವೆ.
ಫೇಸ್‌ಬುಕ್‌ನಲ್ಲಿನ ಮಾಸಿಕ ಸಕ್ರಿಯ ಬಳಕೆದಾರರಲ್ಲಿ ಜಗತ್ತಿನಾದ್ಯಂತ ಸರಿಸುಮಾರು ಶೇ 5ರಷ್ಟು, ಅಂದರೆ ಸುಮಾರು 2.5 ಬಿಲಿಯನ್‌ನಷ್ಟು ನಕಲಿ ಖಾತೆಗಳು ಸೃಷ್ಟಿಯಾಗುವುದು ಮುಂದುವರಿದಿದೆ. ಫೇಸ್‌ಬುಕ್‌ನಿಂದ ದ್ವೇಷಕಾರುವ ಮಾತುಗಳಿರುವ ಪೋಸ್ಟ್‌ಗಳನ್ನು ತೆಗೆದುಹಾಕುವ ಕಾರ್ಯ ಚುರುಕಾಗಿ ನಡೆಯುತ್ತಿದೆ. ಹಲವು ವಿಭಿನ್ನ ಮಾದರಿಗಳ ಮೂಲಕ ದ್ವೇಷ ಸಂದೇಶಗಳನ್ನು ಗುರುತಿಸಿ ಅವುಗಳನ್ನು ತೆಗೆದುಹಾಕಲು ಯಂತ್ರ ಆಧಾರಿತ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತಿದೆ.
2018ರಲ್ಲಿ ಒಟ್ಟಾರೆಯಾಗಿ 3.3 ಬಿಲಿಯನ್ ನಕಲಿ ಖಾತೆಗಳನ್ನು ಫೇಸ್‌ಬುಕ್ ತೆರವುಗೊಳಿಸಿತ್ತು.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications