• search
  • Live TV
ವಾಷಿಂಗ್ಟನ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಭಾರತಕ್ಕೆ 135 ಕೋಟಿ ನೆರವು ಘೋಷಿಸಿದ ಗೂಗಲ್ ಸಿಇಒ ಸುಂದರ್ ಪಿಚೈ

|
Google Oneindia Kannada News

ವಾಷಿಂಗ್ಟನ್, ಏಪ್ರಿಲ್ 26: ಭಾರತದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತಕ್ಕೆ 135 ಕೋಟಿ ರೂ. ನೆರವು ನೀಡಲು ಗೂಗಲ್ ಸಿಇಒ ಸುಂದರ್ ಪಿಚೈ ನಿರ್ಧರಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸುಂದರ್ ಪಿಚೈ ಅವರು, ಭಾರತದಲ್ಲಿನ ಕೋವಿಡ್-19 ಸಾಂಕ್ರಾಮಿಕದ ಪರಿಸ್ಥಿತಿ ನೋಡಿ ಮನಸ್ಸು ಒಡೆದುಹೋದಂತಾಗಿದೆ.

ಏಪ್ರಿಲ್ 26; ಭಾರತದಲ್ಲಿ ಮೂರೂವರೆ ಲಕ್ಷ ಮೀರಿದ ಕೊರೊನಾ ಪ್ರಕರಣಏಪ್ರಿಲ್ 26; ಭಾರತದಲ್ಲಿ ಮೂರೂವರೆ ಲಕ್ಷ ಮೀರಿದ ಕೊರೊನಾ ಪ್ರಕರಣ

ಗೂಗಲ್ ಈ ಕೂಡಲೇ ಭಾರತಕ್ಕೆ ವೈದ್ಯಕೀಯ ಸರಬರಾಜು, ಹೆಚ್ಚಿನ ಅಪಾಯದಲ್ಲಿರುವ ಸಮುದಾಯಗಳನ್ನು ಬೆಂಬಲಿಸುವ ಉದ್ದೇಶದಿಂದ ಮತ್ತು ನಿರ್ಣಾಯಕ ಮಾಹಿತಿಯನ್ನು ಹರಡಲು ಸಹಾಯ ಮಾಡುವ ಉದ್ದೇಶದಿಂದ 135 ಕೋಟಿ ರೂ ಅನುದಾನ ನೀಡಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ಕೋವಿಡ್-19 2ನೇ ಅಲೆಯಿಂದಾಗಿ ತತ್ತರಿಸಿ ಹೋಗಿರುವ ಭಾರತದಲ್ಲಿನ ಪರಿಸ್ಥಿತಿ ಕುರಿತು ಮೈಕ್ರೋಸಾಫ್ಟ್ ಮುಖ್ಯಸ್ಥ ಸತ್ಯ ನಾಡೆಲ್ಲ ಟ್ವೀಟ್ ಮಾಡಿದ ಬೆನ್ನಲ್ಲೇ ಗೂಗಲ್ ಸಿಇಒ ಭಾರತ ಮೂಲದ ಸುಂದರ್ ಪಿಚೈ ಅವರೂ ಕೂಡ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ.

ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ ಕೂಡ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಶವಸಂಸ್ಕಾರಕ್ಕಾಗಿ ಶವಾಗಾರಗಳ ಮುಂದೆ ಮೃತರ ಸಂಬಂಧಿಕರು ಗಂಟೆಗಟ್ಟಲೇ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಇದಕ್ಕೂ ಮೊದಲು ಇದೇ ವಿಚಾರವಾಗಿ ಟ್ವೀಟ್ ಮಾಡಿದ್ದ ಮೈಕ್ರೋಸಾಫ್ಟ್ ಮುಖ್ಯಸ್ಥ ಸತ್ಯ ನಾಡೆಲ್ಲ, 'ಭಾರತದ ಪ್ರಸ್ತುತ ಪರಿಸ್ಥಿತಿ ಹೃದಯ ವಿದ್ರಾವಕವಾಗಿದೆ. ಈ ಸಂಕಷ್ಟದ ಪರಿಸ್ಥಿಯಿಲ್ಲಿ ಅಮೆರಿಕ ಸರ್ಕಾರವು ಭಾರತಕ್ಕೆ ನೆರವು ನೀಡಲು ಮುಂದಾಗಿದೆ. ಇದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ.

ಮೈಕ್ರೋಸಾಫ್ಟ್ ಸಂಸ್ಥೆ ತನ್ನ ಧ್ವನಿ, ಸಂಪನ್ಮೂಲ, ಮತ್ತು ತಂತ್ರಜ್ಞಾನವನ್ನು ಭಾರತದಲ್ಲಿನ ಪ್ರಸ್ತುತ ಪರಿಸ್ಥಿತಿಯಲ್ಲಿ ಪರಿಹಾರ ಕಾರ್ಯಗಳಿಗೆ ಸಹಾಯ ಮಾಡಲು ಮತ್ತು ನಿರ್ಣಾಯಕ ಆಮ್ಲಜನಕ ಸಾಂದ್ರತೆಯ ಸಾಧನಗಳ ಖರೀದಿಯನ್ನು ಬೆಂಬಲಿಸಲು ಬಳಸುವುದನ್ನು ಮುಂದುವರಿಸುತ್ತದೆ ಎಂದು ಭರವಸೆ ನೀಡಿದ್ದರು.

ಇನ್ನು ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಪ್ರತಿನಿತ್ಯ 3.50ಕ್ಕೂ ಹೆಚ್ಚು ಹೊಸ ಸೋಂಕು ಪ್ರಕರಣಗಳು ದಾಖಲಾಗುತ್ತಿವೆ.

ದೇಶಾದ್ಯಂತ ಚಿಕಿತ್ಸೆಗಾಗಿ ಸೋಂಕಿತರು ಪರದಾಡುತ್ತಿದ್ದು, ಆಸ್ಪತ್ರೆಗಳ ಬೆಡ್ ಗಳು ಸಂಪೂರ್ಣ ಭರ್ತಿಯಾಗಿದ್ದು, ಬೆಡ್ ಗಳಿಲ್ಲದೆ ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡುತ್ತಿದ್ದಾರೆ. ಅಂತೆಯೇ ಇತ್ತ ಅಸ್ಪತ್ರೆಗೆ ದಾಖಲಾದ ಸೋಂಕಿತರೂ ಕೂಡ ಆಮ್ಲಜನಕ ಕೊರತೆಯಿಂದಾಗಿ ಸಂಕಷ್ಟ ಅನುಭವಿಸುತ್ತಿದ್ದು, ಸಾಕಷ್ಟು ರೋಗಿಗಳು ಆಮ್ಲಜನಕ ಇಲ್ಲದೇ ಸಾವನ್ನಪ್ಪುತ್ತಿದ್ದಾರೆ.

English summary
Google and Alphabet CEO Sundar Pichai has pledged support in India's battle against second wave of Covid-19, which Prime Minister Narendra Modi had referred to as a 'toofan' (storm) while addressing his radio programme 'Mann Ki Baat' on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X