ನಾನು ಆರೋಗ್ಯವಾಗಿದ್ದೇನೆ, ಆತಂಕ ಪಡುವ ಅಗತ್ಯವಿಲ್ಲ: ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್, ಅಕ್ಟೋಬರ್ 03: ನಾನು ಆರೋಗ್ಯವಾಗಿದ್ದೇನೆ , ನನ್ನ ಕುರಿತು ಆತಂಕ ಪಡುವ ಅಗತ್ಯವಿಲ್ಲ, ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಶುಕ್ರವಾರ ರಾತ್ರಿ ವಾಲ್ಟರ್ ರೀಡ್ ಮಿಲಿಟರಿ ಆಸ್ಪತ್ರೆಗೆ ದಾಖಲಾಗಿರುವ ಟ್ರಂಪ್ ಭಾರೀ ಭದ್ರತೆ ಜೊತೆಗೆ ಅತ್ಯಾಧುನಿಕ ಮೂಲ ಸೌಕರ್ಯ ಹೊಂದಿರುವಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ಪತ್ರೆಗೆ ತೆರಳುವ ಮುನ್ನ ಶ್ವೇತಭವನದಲ್ಲಿ 18 ಸೆಕೆಂಡ್‌ಗಳ ವೀಡಿಯೋ ಹೇಳಿಕೆಯಲ್ಲಿ ಅಪಾರ ಬೆಂಬಲಕ್ಕಾಗಿ ಅಭಿಮಾನಿಗಳು, ಬೆಂಬಲಿಗರು ಮತ್ತು ದೇಶವಾಸಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
— Donald J. Trump (@realDonaldTrump) October 2, 2020
Recommended Video
Trump ದಂಪತಿಗಳಿಗೆ ಅಧ್ಯಕ್ಷೀಯ ಚುನಾವಣೆಗೂ ಮುನ್ನ ಕೊರೊನ | Oneindia Kannada
ಅಮೆರಿಕಾ ಅಧ್ಯಕ್ಷೀಯ ಚುನಾವಣೆ ನವೆಂಬರ್ 3ರಂದು ನಿಗದಿಯಾಗಿದ್ದು, ಕೆಲ ವಾರಗಳು ಬಾಕಿ ಇರುವಾಗ ಟ್ರಂಪ್‌ಗೆ ಕೊರೊನಾ ಪಾಸಿಟಿವ್ ಸೋಂಕಿಗೆ ಒಳಗಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿಶ್ವದ ಅನೇಕ ಗಣ್ಯರು ಟ್ರಂಪ್ ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.












Click it and Unblock the Notifications