• search
 • Live TV
ವಾಷಿಂಗ್ಟನ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಗಡಿ ವಿವಾದ ಬಗೆಹರಿಸಿಕೊಳ್ಳಲು ಭಾರತ-ಪಾಕ್ ಒಟ್ಟಾಗಿ ಕೆಲಸ ಮಾಡಬೇಕು; ಅಮೆರಿಕ ಸಲಹೆ

|
Google Oneindia Kannada News

ವಾಷಿಂಗ್ಟನ್, ಜುಲೈ 24: "ಭಾರತ ಹಾಗೂ ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆಗಳ ಮೂಲಕ ಗಡಿ ವಿವಾದವನ್ನು ಬಗೆಹರಿಸಿಕೊಳ್ಳುವತ್ತ ಕೆಲಸ ಮಾಡಬೇಕಿದೆ. ಎರಡೂ ದೇಶಗಳು ಈ ನಿಟ್ಟಿನಲ್ಲಿ ಪರಸ್ಪರ ಒಟ್ಟಾಗಿ ಕಾರ್ಯನಿರ್ವಹಿಸಬೇಕಿದೆ" ಎಂದು ಅಮೆರಿಕ ಸಲಹೆ ನೀಡಿದೆ.

"ಭಾರತ ಹಾಗೂ ಪಾಕಿಸ್ತಾನ ನಡುವಿನ ಸಮಸ್ಯೆ ನಿವಾರಣೆಗೆ ಈ ಎರಡೂ ದೇಶಗಳು ಒಟ್ಟಾಗಿ ಕೆಲಸ ನಿರ್ವಹಿಸುವ ಅಗತ್ಯವಿದೆ ಎಂಬುದನ್ನು ನಾವು ನಂಬಿದ್ದೇವೆ" ಎಂದು ದಕ್ಷಿಣ ಹಾಗೂ ಮಧ್ಯ ಏಷ್ಯಾ ವ್ಯವಹಾರಗಳ ಸಹಾಯಕ ಕಾರ್ಯದರ್ಶಿ ತಾಂಪ್ಸನ್ ಹೇಳಿದ್ದಾರೆ.

ಭಾರತಕ್ಕೆ ಯುಎಸ್ ರಾಯಭಾರಿಯಾಗಿ ಎರಿಕ್ ಗಾರ್ಸೆಟಿ ನೇಮಕಭಾರತಕ್ಕೆ ಯುಎಸ್ ರಾಯಭಾರಿಯಾಗಿ ಎರಿಕ್ ಗಾರ್ಸೆಟಿ ನೇಮಕ

"ಈ ವರ್ಷದ ಆರಂಭದಲ್ಲಿ ಜಾರಿಗೆ ಬಂದ ಕದನ ವಿರಾಮ ಹಾಗೇ ಉಳಿದಿರುವುದಕ್ಕೆ ಸಂತೋಷಪಡುತ್ತೇವೆ. ಮುಂದೆ ಎರಡು ದೇಶಗಳು ಸ್ಥಿರವಾದ ಸಂಬಂಧ ಬೆಳೆಸುವ ಮಾರ್ಗಗಳನ್ನು ಕಂಡುಕೊಳ್ಳುವ ಪ್ರಯತ್ನವನ್ನು ಪ್ರೋತ್ಸಾಹಿಸುತ್ತೇವೆ" ಎಂದು ತಿಳಿಸಿದ್ದಾರೆ.

2019ರ ಆಗಸ್ಟ್‌ನಲ್ಲಿ 370ನೇ ವಿಧಿಯನ್ವಯ ಜಮ್ಮು ಹಾಗೂ ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಗೊಂಡ ನಂತರ ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಬಂಧದಲ್ಲಿ ಇನ್ನಷ್ಟು ಬಿರುಕು ಉಂಟಾಗಿತ್ತು.

   Team India ಇಂದು ಕ್ಯಾಚ್ ಬಿಟ್ಟಿದ್ದು ಪಂದ್ಯ ಸೋಲಲು ಕಾರಣವಾಯಿತು | Oneindia Kannada

   ಈ ನಡುವೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಟೋನಿ ಬ್ಲಿಂಕನ್ ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದು, ಈ ಕುರಿತು ಇನ್ನಷ್ಟು ಚರ್ಚೆ ನಡೆಸುವ ನಿರೀಕ್ಷೆಯಿದೆ.

   English summary
   India and Pakistan need to work with each other to resolve their bilateral issues, suggests United States
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X