ವಿಡಿಯೋ: ಪಾಕಿಸ್ತಾನಿ ಪತ್ರಕರ್ತರಿಗೆ 'ಸ್ನೇಹ ಹಸ್ತ' ನೀಡಿದ ಭಾರತ ರಾಯಭಾರಿ
ನ್ಯೂಯಾರ್ಕ್, ಆಗಸ್ಟ್ 17: ಭಾರತ-ಪಾಕಿಸ್ತಾನಗಳ ನಡುವೆ ಆತಂಕ ಹೆಚ್ಚಾಗುತ್ತಿರುವ ಸಮದಲ್ಲಿಯೇ ಭಾರತದ ರಾಯಭಾರಿ ಪಾಕಿಸ್ತಾನದ ಪತ್ರಕರ್ತರಿಗೆ ಹಸ್ತಲಾಘವ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ನಿನ್ನೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿಶ್ವಸಂಸ್ಥೆಯಲ್ಲಿ ಭಾರತದ ರಾಯಭಾರಿ ಸೈಯದ್ ಅಕ್ಬರುದ್ದೀನ್ ಅವರು, ಪಾಕಿಸ್ತಾನದ ಪತ್ರಕರ್ತರಿಗೆ ವಿಶೇಷವಾಗಿ ಹಸ್ತಲಾಘವ ಮಾಡಿದ್ದಾರೆ.
ಸುದ್ದಿಗೋಷ್ಠಿ ನಡೆವ ಸಂದರ್ಭದಲ್ಲಿ ಹಾಜರಿದ್ದ ಪಾಕಿಸ್ತಾನದ ಪತ್ರಕರ್ತರೊಬ್ಬರು, 'ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಮಾತುಕತೆ ಯಾವಾಗ ಪ್ರಾರಂಭಿಸುತ್ತೀರಿ?' ಎಂದು ಸೈಯದ್ ಅಕ್ಬರುದ್ದೀನ್ ಅವರನ್ನು ಕೇಳಿದ್ದಾರೆ. ಇದಕ್ಕೆ ಉತ್ತರವಾಗಿ ನಮ್ಮ ಸ್ನೇಹದ ಹಸ್ತ ಸದಾ ತೆರೆದಿರುತ್ತದೆ ಎಂದವರೇ ಹಾಲ್‌ನಲ್ಲಿದ್ದ ಮೂವರು ಪತ್ರಕರ್ತರಿಗೆ ಹಸ್ತಲಾಘವ ಮಾಡಿದ್ದಾರೆ.

ಹಸ್ತಲಾಘವ ಮಾಡಿದ ನಂತರ ಮಾತನಾಡಿದ ಅವರು, 'ನಿಮ್ಮೊಂದಿಗೆ ಹಸ್ತಲಾಘವ ಮಾಡುವ ಮೂಲಕ ಮಾತುಕತೆ ಪ್ರಾರಂಭ ಮಾಡಿದ್ದೇವೆ' ಎಂದು ಸೈಯದ್ ಅಕ್ಬರುದ್ದೀನ್ ಹೇಳಿದ್ದಾರೆ. ಮುಂದುವರೆದ ಮಾತನಾಡಿದ ಅಕ್ಬರುದ್ದೀನ್, 'ನಾವು ಶಿಲ್ಮಾ ಒಪ್ಪಂದಕ್ಕೆ ಬದ್ಧರಾಗಿದ್ದೇವೆ ಎನ್ನುವ ಮೂಲಕ ನಾವು ಈಗಾಗಲೇ ಸ್ನೇಹದ ಹಸ್ತ ಮುಂದೆ ಚಾಚಿದ್ದೇವೆ ಪಾಕಿಸ್ತಾನದ ಪ್ರತಿಕ್ರಿಯೆಗೆ ಕಾಯುತ್ತಿದ್ದೇವೆ' ಎಂದು ಹೇಳಿದ್ದಾರೆ.
ಪಾಕಸ್ತಾನದ ಜೊತೆ ಮಾತುಕತೆಗೆ ಭಾರತ ಉತ್ಸಾಹ ತೋರಿಸುತ್ತಿಲ್ಲ ಎಂದ ಮತ್ತೊಬ್ಬ ಪಾಕಿಸ್ತಾನದ ಪತ್ರಕರ್ತನ ಪ್ರಶ್ನೆಗೆ ಉತ್ತರಿಸಿದ ಸೈಯದ್ ಅಕ್ಬರುದ್ದೀನ್, 'ಭಯೋತ್ಪಾದನೆ ನಿಲ್ಲಿಸಿ ಆಮೇಲೆ ಮಾತನಾಡಿ' ಎಂದು ನೇರ ಉತ್ತರ ನೀಡಿದ್ದಾರೆ.
ಶುಕ್ರವಾರ ನಡೆದ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಕಾಶ್ಮೀರಕ್ಕೆ ವಿಶೇಷ ಸ್ಥಾನ-ಮಾನ ರದ್ದು ಮಾಡಿದ ವಿಷಯ ಪ್ರಸ್ತಾಪವಾಗಿದ್ದು, ಚೀನಾ ಮಾತ್ರವೇ ಪಾಕಿಸ್ತಾನಕ್ಕೆ ಬೆಂಬಲ ನೀಡಿದೆ. ಅಮೆರಿಕ, ರಷ್ಯಾಗಳು 'ಇದು ಭಾರತದ ಆಂತರಿಕ ವಿಷಯ' ಎಂದು ಸನ್ನಿವೇಶದಿಂದ ಹೊರಗೆ ಉಳಿದಿವೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications