ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ವಿರುದ್ಧ ಹೋರಾಟ: ಭಾರತಕ್ಕೆ ಕಮಲಾ ಹ್ಯಾರಿಸ್ ಸಂದೇಶ

|
Google Oneindia Kannada News

ವಾಷಿಂಗ್ಟನ್, ಮೇ 06: ಕೊರೊನಾ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿದಂತೆ ಅಮೆರಿಕ ಉಪಾಧ್ಯಕ್ಷ ಕಮಲಾ ಹ್ಯಾರಿಸ್ ಸಂದೇಶ ರವಾನಿಸಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಭಾರತದೊಂದಿಗೆ ಒಗ್ಗಟ್ಟು ಪ್ರದರ್ಶಿಸಲು ಅಮೆರಿಕ ಸಿದ್ಧವಿದೆ ಎಂದಿದ್ದಾರೆ.

ಅಮೆರಿಕ ಸರ್ಕಾರ ಆಯೋಜಿಸಿರುವ ಬೊಲ್ಸ್ಟರಿಂಗ್ ಯುಎಸ್ ಕೋವಿಡ್ ರಿಲೀಫ್ ಎಫರ್ಟ್ಸ್ ಇನ್ ಇಂಡಿಯಾ: ಪರ್ಸ್ಪೆಕ್ಟಿವ್ ಡಯಾಸ್ಪೋರಾ ಎಂಬ ಆನ್‌ಲೈನ್ ಕಾರ್ಯಕ್ರಮದಲ್ಲಿ ಕಮಲಾ ಹ್ಯಾರಿಸ್ ಭಾಷಣ ಮಾಡಿದ್ದಾರೆ.

ಭಾರತದಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡುವಂತೆ ಅಮೆರಿಕ ಸಲಹೆಭಾರತದಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡುವಂತೆ ಅಮೆರಿಕ ಸಲಹೆ

ಹಲವು ವಿಭಾಗಗಳಲ್ಲಿ ಭಾರತದ ಪಾಲುದಾರರಾಗಿರುವ ಅಮೆರಿಕ, ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಜನರ ಜೀವ ಉಳಿಸುವ ನಿಟ್ಟಿನಲ್ಲಿ ನಾವೂ ಜತೆಯಾಗಿದ್ದೇವೆ ಎಂಬ ಸಂದೇಶ ನೀಡಿದ್ದಾರೆ.

Kamala Harris To Deliver Message Of Solidarity With People Of India

ಕೋವಿಡ್ 19 ಎರಡನೇ ಅಲೆ ತೀವ್ರವಾಗಿರುವ ಈ ಸಂದರ್ಭದಲ್ಲಿ ಸಹಾಯ ಮಾಡಲು ಸಿದ್ಧ ಎಂದು ಈಗಾಗಲೇ ಅಮರಿಕ ಹೇಳಿದೆ, ಆಮ್ಲಜನಕ ಸೇರಿದಂತೆ ಕೆಲವು ವೈದ್ಯಕೀಯ ಉಪಕರಣಗಳನ್ನು ಕಳುಹಿಸಿದೆ. ಕೊರೊನಾ ಮೊದಲ ಅಲೆಯಲ್ಲಿ ಭಾರತವು ಅಮೆರಿಕಕ್ಕೆ ಸಹಾಯ ಮಾಡಿತ್ತು.

ಭಾರತದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಿಸಲು ನಮ್ಮ ಸಹಕಾರ ಸಂಪೂರ್ಣವಾಗಿ ಇರಲಿದೆ. ನಿಮ್ಮೊಂದಿಗೆ ಒಗ್ಗಟ್ಟಾಗಿ ನಾವಿರುತ್ತೇವೆ ಎಂದು ಅಮೆರಿಕ ಹೇಳಿದೆ.

English summary
Vice President Kamala Harris on Friday will deliver a message of solidarity with the people of India, as the US partners with the country to save lives and hasten the end of the coronavirus pandemic, the State Department has said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X