• search
  • Live TV
ವಾಷಿಂಗ್ಟನ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

Breaking news: ದಕ್ಷಿಣ ಕ್ಯಾಲಿಫೋರ್ನಿಯಾದ ಚರ್ಚ್‌ನಲ್ಲಿ ಗುಂಡಿನ ದಾಳಿ, ಓರ್ವ ಸಾವು

|
Google Oneindia Kannada News

ಕ್ಯಾಲಿಫೋರ್ನಿಯಾ, ಮೇ 16: ದಕ್ಷಿಣ ಕ್ಯಾಲಿಫೋರ್ನಿಯಾದ ಲಗುನಾ ವುಡ್ಸ್‌ನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಆರೆಂಜ್ ಕೌಂಟಿ ಶೆರಿಫ್ ಇಲಾಖೆ ತಿಳಿಸಿದೆ. ಚರ್ಚ್‌ನಲ್ಲಿ ದಾಳಿ ನಡೆದಿದೆ. ಗಾಯಗೊಂಡವರ ಪೈಕಿ ಒಬ್ಬರ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಸ್ಥಳೀಯ ಕಾಲಮಾನ 2100 GMT ಸುಮಾರಿಗೆ ಘಟನೆ ನಡೆದಿದ್ದು, ಘಟನೆಗೆ ಕಾರಣಾವಾದ ಶಂಕಿತ ವ್ಯಕ್ತಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

"ಚರ್ಚ್‌ನಲ್ಲಿ ಗುಂಡಿನ ದಾಳಿಯ ಬಗ್ಗೆ ವಿವರಗಳನ್ನು ಪಡೆದುಕೊಂಡು ಪ್ರತಿಕ್ರಿಯಿಸಲಾಗುತ್ತಿದೆ" ಎಂದು ಆರೆಂಜ್ ಕೌಂಟಿ ಶೆರಿಫ್ ಇಲಾಖೆ ಟ್ವೀಟ್ ಮಾಡಿದೆ.

"ಹಲವು ಮಂದಿ ಅಮಾಯಕರ ಮೇಲೆ ಗುಂಡು ಹಾರಿಸಲಾಗಿದೆ," ಎಂದು ಅಧಿಕೃತ ಮಾಹಿತಿ ನೀಡಲಾಗಿದೆ.

ಎರಡನೇ ಟ್ವೀಟ್ ಹೀಗಿದೆ: "ನಾವು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದೇವೆ ಮತ್ತು ಒಳಗೊಂಡಿರುವ ಶಸ್ತ್ರಾಸ್ತ್ರವನ್ನು ವಶಪಡಿಸಿಕೊಂಡಿದ್ದೇವೆ."

ಪೊಲೀಸರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಗವರ್ನರ್ ಗೇವಿನ್ ನ್ಯೂಸಮ್ ಅವರ ಕಚೇರಿ ಟ್ವಿಟರ್‌ನಲ್ಲಿ ತಿಳಿಸಿದೆ. "ಯಾರೂ ತಮ್ಮ ಆರಾಧನಾ ಸ್ಥಳಕ್ಕೆ ಹೋಗಲು ಭಯಪಡಬೇಕಾಗಿಲ್ಲ. ನಮ್ಮ ಆಲೋಚನೆಗಳು ಸಂತ್ರಸ್ತರು, ಸಮುದಾಯ ಮತ್ತು ಈ ದುರಂತ ಘಟನೆಯಿಂದ ಪ್ರಭಾವಿತರಾದ ಎಲ್ಲರೊಂದಿಗೂ ಇವೆ" ಎಂದು ರಾಜ್ಯಪಾಲರು ಪೋಸ್ಟ್ ಮಾಡಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಬಂದೂಕು ಹಿಂಸಾಚಾರದಿಂದ ಪೀಡಿತವಾಗಿರುವ ಯುನೈಟೆಡ್ ಸ್ಟೇಟ್ಸ್‌ನಲ್ಲಿ ವಾರಾಂತ್ಯದ ಎರಡನೇ ಸಾಮೂಹಿಕ ಗುಂಡಿನ ದಾಳಿ ಇದಾಗಿದೆ.(AFP, AP, Reuters)

English summary
One person has been killed and five wounded in Laguna Woods, Southern California, the Orange County Sheriff's Department said. The attack occurred at a church.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X