ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಮತ್ತೊಂದು ಲೈಂಗಿಕ ದೌರ್ಜನ್ಯ ಆರೋಪ

|
Google Oneindia Kannada News

ವಾಷಿಂಗ್ಟನ್, ಜೂನ್ 22: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಮತ್ತೊಂದು ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ.

ಅಮೆರಿಕದ ಅಧ್ಯಕ್ಷೀಯ ಚುನಾವಣೆಗೂ ಮುನ್ನ ಅವರ ವಿರುದ್ಧ ಅನೇಕ ಆರೋಪಗಳು ಕೇಳಿಬಂದಿದ್ದವು. ಈಗ ನ್ಯೂಯಾರ್ಕ್ ಮೂಲದ ಬರಹಗಾರ್ತಿ, ಮಹಿಳಾ ಸಲಹಾ ಅಂಕಣಕಾರ್ತಿ ಇ. ಜೀನ್ ಕಾರೊಲ್ ಎಂಬುವವರು ಎರಡು ದಶಕಕ್ಕೂ ಹೆಚ್ಚು ಸಮಯದ ಹಿಂದೆ ಡೊನಾಲ್ಡ್ ಟ್ರಂಪ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ಆರೋಪಿಸಿದ್ದಾರೆ.

ಟ್ರಂಪ್ ಪ್ರತಿಮೆ ನಿರ್ಮಿಸಿ ಪೂಜಿಸುತ್ತಿರುವ ತೆಲಂಗಾಣದ ಯುವಕ! ಟ್ರಂಪ್ ಪ್ರತಿಮೆ ನಿರ್ಮಿಸಿ ಪೂಜಿಸುತ್ತಿರುವ ತೆಲಂಗಾಣದ ಯುವಕ!

ಮ್ಯಾನ್‌ಹಟ್ಟನ್ ಡಿಪಾರ್ಟ್‌ಮೆಂಟ್ ಸ್ಟೋರ್‌ನ ಡ್ರೆಸ್ಸಿಂಗ್ ರೂಮ್‌ನಲ್ಲಿ ಡೊನಾಲ್ಡ್ ಟ್ರಂಪ್ ತಮಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂಬುದಾಗಿ ನ್ಯೂಯಾರ್ಕ್ ಮ್ಯಾಗಜೀನ್‌ನಲ್ಲಿ ಪ್ರಕಟಿಸಿರುವ ಪುಸ್ತಕದ ಅಧ್ಯಾಯವೊಂದರಲ್ಲಿ ಹೇಳಿರುವುದು ದಾಖಲಾಗಿದೆ.

magazine columnist assault allegation donald trump

ದಿ ವಾಷಿಂಗ್ಟನ್ ಪೋಸ್ಟ್ ಜತೆ ನಡೆದ ಸಂದರ್ಶನದಲ್ಲಿ ಕೂಡ ಜೀನ್ ಕಾರೊಲ್ ಅವರು ಈ ಆರೋಪವನ್ನು ಪುನರುಚ್ಚರಿಸಿದ್ದಾರೆ. 1995ರ ಕೊನೆ ಅಥವಾ 1996ರ ಆರಂಭದಲ್ಲಿ ಬರ್ಗ್ ಡೊರ್ಫ್ ಗುಡ್‌ಮ್ಯಾನ್‌ನಲ್ಲಿ ರಿಯಲ್ ಎಸ್ಟೇಟ್ ಡೆವಲಪರ್ ಆಗಿದ್ದ ಟ್ರಂಪ್ ಜತೆ ಮುಖಾಮುಖಿಯಾಗಿತ್ತು. ಡ್ರೆಸ್ಸಿಂಗ್ ರೂಮ್‌ನಲ್ಲಿ ಟ್ರಂಪ್ ತಮ್ಮ ಮೇಲೆ ದಾಳಿ ನಡೆಸಿದ್ದರು. ತಮ್ಮ ತಲೆಯನ್ನು ಗೋಡೆಗೆ ಚಚ್ಚಿದ್ದರು. ಲೈಂಗಿಕವಾಗಿ ಹಿಂಸಿಸಿದ್ದರು. ಅವರನ್ನು ತಳ್ಳಿ ಕೊನೆಗೆ ಓಡಿ ಹೋಗಿದ್ದಾಗಿ ಅವರು ಹೇಳಿದ್ದಾರೆ.

ಟ್ರಂಪ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಗಳ ಸುರಿಮಳೆಟ್ರಂಪ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಗಳ ಸುರಿಮಳೆ

'ತಮ್ಮ ಕಥೆಯನ್ನು ಹೇಳಿಕೊಳ್ಳುತ್ತಿರುವುದರಿಂದ ಇತರೆ ಅನ್ಯಾಯಕ್ಕೊಳಗಾದ ಮಹಿಳೆಯರು ಮುಂದೆ ಬಂದು ಹೇಳಿಕೊಳ್ಳಲು ಧೈರ್ಯ ಬರುತ್ತದೆ ಮತ್ತು ಅಂಜಿಕೊಳ್ಳುವುದಿಲ್ಲ ಎಂಬ ಭರವಸೆ ಇದೆ. ನಾನು ಇಷ್ಟು ದಿನ ಮೌನವಹಿಸಿದ್ದಕ್ಕೆ ನನ್ನನ್ನು ನಾನೇ ದೂಷಿಸಿಕೊಂಡಿದ್ದೇನೆ. ನನಗೆ ತಪ್ಪಿತಸ್ಥ ಮನೋಭಾವ ಕಾಡಿದೆ. ನನ್ನನ್ನು ನಾನೇ ಭಯಾನಕವಾಗಿ ಥಳಿಸಿಕೊಂಡಿದ್ದೇನೆ' ಎಂದು ಹೇಳಿದ್ದಾರೆ.

ನಮ್ಮನ್ನು ಎಲ್ಲರೂ ದರೋಡೆ ಮಾಡ್ತಿದ್ದಾರೆ: ಭಾರತದ ವಿರುದ್ಧ ಟ್ರಂಪ್ ಮತ್ತೆ ಕಿಡಿ ನಮ್ಮನ್ನು ಎಲ್ಲರೂ ದರೋಡೆ ಮಾಡ್ತಿದ್ದಾರೆ: ಭಾರತದ ವಿರುದ್ಧ ಟ್ರಂಪ್ ಮತ್ತೆ ಕಿಡಿ

ಈಗ 75 ವರ್ಷದ ಕಾರೊಲ್, ಆ ಸಂದರ್ಭದಲ್ಲಿ ಈ ಘಟನೆ ಕುರಿತು ತಮ್ಮ ಇಬ್ಬರು ಆಪ್ತರ ಬಳಿ ಹೇಳಿಕೊಂಡಿದ್ದರು.

ಈ ಆರೋಪವನ್ನು ಡೊನಾಲ್ಡ್ ಟ್ರಂಪ್ ನಿರಾಕರಿಸಿದ್ದಾರೆ. ಇದು ಸುಳ್ಳು ಸುದ್ದಿ ಎಂದು ಆರೋಪಿಸಿದ್ದಾರೆ. ಈ ಘಟನೆಯ ವಿಡಿಯೋ ದೃಶ್ಯ ಅಥವಾ ಸಾಕ್ಷಿ ಏಕಿಲ್ಲ ಎಂದು ಪ್ರಶ್ನಿಸಿದ್ದಾರೆ.

ಈ ವ್ಯಕ್ತಿಯನ್ನು ನನ್ನ ಜೀವನದಲ್ಲಿ ನಾನು ಭೇಟಿಯೇ ಮಾಡಿಲ್ಲ. ಅವರು ಹೊಸ ಪುಸ್ತಕವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ. ಅದೇ ಅವರ ಉದ್ದೇಶವನ್ನು ಸೂಚಿಸುತ್ತದೆ. ಅದನ್ನು ಫಿಕ್ಷನ್ ವಿಭಾಗದಲ್ಲಿ ಮಾರಾಟ ಮಾಡಬೇಕು ಎಂದು ಟ್ರಂಪ್ ಹೇಳಿದ್ದಾರೆ.

English summary
A magazine columnist accused America President Donald Trump of sexual assault more than two decades ago.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X