ಅಮೆರಿಕಾದಲ್ಲಿ ಕೊರೊನಾವೈರಸ್ ಸೋಂಕಿಗೆ 5 ಲಕ್ಷ ಜನರು ಸಾವು!

ವಾಶಿಂಗ್ಟನ್, ಫೆಬ್ರವರಿ.23: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ವಿಶ್ವದ ದೊಡ್ಡಣ್ಣ ಎನಿಸಿರುವ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ(USA) ನಲುಗಿ ಹೋಗಿದೆ. ಅಮೆರಿಕಾದಲ್ಲಿ ಕೊವಿಡ್-19 ಸೋಂಕಿನಿಂದಲೇ ಸಾವನ್ನಪ್ಪಿರುವವರ ಸಂಖ್ಯೆ 5 ಲಕ್ಷದ ಗಡಿ ದಾಟಿದೆ.
ಜಗತ್ತಿನಲ್ಲಿ ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಅಮೆರಿಕಾದಲ್ಲೇ ಪತ್ತೆಯಾಗಿವೆ. ಅಮೆರಿಕಾದಲ್ಲೇ ಅತಿಹೆಚ್ಚು ಜನರು ಮಹಾಮಾರಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ಇದೇ ಅಮೆರಿಕಾದಲ್ಲಿ ಪತ್ತೆಯಾಗಿವೆ.

ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ಒಂದೇ ದಿನ 1270 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 5,12,487ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 55,945 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2,88,22,995ಕ್ಕೆ ಏರಿಕೆಯಾಗಿದೆ. ಒಟ್ಟು ಪ್ರಕರಣಗಳ ಪೈಕಿ 1,91,11,359 ಸೋಂಕಿತರು ಗುಣಮುಖರಾಗಿದ್ದು, 91,99,149 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

More Than 5 Lakh People Death From Coronavirus At America

ಜಗತ್ತಿನಾದ್ಯಂತ ಕೊರೊನಾವೈರಸ್ ಅಂಕಿ-ಅಂಶ:
ಕಳೆದ 24 ಗಂಟೆಗಳಲ್ಲಿ ವಿಶ್ವದಲ್ಲಿ ಬರೋಬ್ಬರಿ 2,80,899 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದರಿಂದಾಗಿ ಜಗತ್ತಿನಾದ್ಯಂತ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 11,22,50,158ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ 6406 ಜನರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 24,84,711ಕ್ಕೆ ಏರಿಕೆಯಾಗಿದೆ. ಇದುವರೆಗೂ ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೊವಿಡ್-19 ಸೋಂಕಿಗೆ ನೀಡಿದ ಚಿಕಿತ್ಸೆಯಿಂದಾಗಿ ಒಟ್ಟು 8,77,71,852 ಸೋಂಕಿತರು ಗುಣಮುಖರಾಗಿದ್ದಾರೆ. ಈ ಪೈಕಿ 2,19,93,595 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+