ಕೊರೊನಾ ಸೋಂಕು ಹೆಚ್ಚಳ: ನ್ಯೂಯಾರ್ಕ್ ಶಾಲೆಗಳಿಗೆ ಮತ್ತೆ ಬೀಗ

ನ್ಯೂಯಾರ್ಕ್, ನವೆಂಬರ್ 19: ಕೊರೊನಾ ಸೋಂಕು ವಿಪರೀತ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನ್ಯೂಯಾರ್ಕ್ ಶಾಲೆಗಳನ್ನು ಮತ್ತೆ ಮುಚ್ಚುವಂತಹ ಪರಿಸ್ಥಿತಿ ಎದುರಾಗಿದೆ.

ನಗರದಲ್ಲಿ ಏಳು ದಿನಗಳ ಕಾಲ ಶೇ.3ರಷ್ಟು ಕೊರೊನಾ ಸೋಂಕಿತರು ಹೆಚ್ಚಳಗೊಂಡರೆ ಶಾಲೆಗಳನ್ನು ಮುಚ್ಚಲಾಗುವುದು ಎಂದು ಈ ಮೊದಲೇ ತೀರ್ಮಾನ ತೆಗೆದುಕೊಳ್ಳಲಾಗಿತ್ತು.

ನಗರದ 1800 ಶಾಲೆಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ. ಇಂದಿನಿಂದ ಆನ್‌ಲೈನ್ ತರಗತಿಗಳು ಆರಂಭವಾಗಲಿದೆ. ಸೆಪ್ಟೆಂಬರ್ 29 ರಿಂದ ಶಾಲೆ ಮತ್ತು ಅಕ್ಟೋಬರ್ 1 ರಿಂದ ಪ್ರೌಢಶಾಲೆಗಳು ಆರಂಭಗೊಂಡಿದ್ದವು.

New York City Schools To Close Again As City Fights Coronavirus

ನಗರದಲ್ಲಿ ಲಾಕ್‌ಡೌನ್ ಜಾರಿಗೊಳಿಸುವ ಸಾಧ್ಯತೆಯೂ ಇದೆ. ಅದಕ್ಕೆ ಸಿದ್ಧತೆ ಮಾಡಿಕೊಳ್ಳಿ ಎಂದು ನ್ಯೂಯಾರ್ಕ್ ಮೇಯರ್ ಬಿಎಲ್‌ ಡಿ ಬ್ಲಾಸಿಯೊ ತಿಳಿಸಿದ್ದಾರೆ.

ಅಕ್ಟೋಬರ್ ತಿಂಗಳಲ್ಲಿ ಶೇ.25ರಷ್ಟು ವಿದ್ಯಾರ್ಥಿಗಳು ಮಾತ್ರ ಹಾಜರಾಗಿದ್ದರು. ನಿರೀಕ್ಷೆಗಿಂತ ಕಡಿಮೆ ಮಕ್ಕಳು ಹಾಜರಾಗಿದ್ದರು, ಅಮೆರಿಕದಲ್ಲಿ ನಿತ್ಯ ಒಂದು ಲಕ್ಷಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗುತ್ತಿವೆ.

Recommended Video

      Corona ನಿಯಂತ್ರಿಸಲು ಸರ್ಕಾರ ತೆಗೆದುಕೊಂಡ ಕಠಿಣ ನಿರ್ಧಾರ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+