• search
  • Live TV
ವಾಷಿಂಗ್ಟನ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನ್ಯೂಯಾರ್ಕ್‌ನಲ್ಲಿ ಗುಂಡಿನ ದಾಳಿ: 2 ಸಾವು, 16 ಮಂದಿಗೆ ಗಾಯ

|

ನ್ಯೂಯಾರ್ಕ್, ಸೆಪ್ಟೆಂಬರ್ 19: ಅಮೆರಿಕದ ನ್ಯೂಯಾರ್ಕ್‌ನಲ್ಲಿ ಶುಕ್ರವಾರ ಮಧ್ಯರಾತ್ರಿ ಸಾಮೂಹಿಕ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಈ ದುಷ್ಕೃತ್ಯದಲ್ಲಿ ಕನಿಷ್ಠ 16 ಮಂದಿ ಗುಂಡೇಟಿನಿಂದ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮತ್ತು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.'

ಶನಿವಾರ ರಾತ್ರಿ 12.30ರ ವೇಳೆಗೆ ಈ ಗುಂಡಿನ ದಾಳಿ ನಡೆದಿದೆ. ಗುಡ್‌ಮ್ಯಾನ್ ಸ್ಟ್ರೀಟ್ ಮತ್ತು ಪೆನ್ಸಿಲ್ವೇನಿಯಾ ಅವೆನ್ಯೂ ಪ್ರದೇಶಗಳಿಂದ ಅಲ್ಲಿನ 911 ತುರ್ತು ಸೇವಾ ಸಂಖ್ಯೆಗೆ ಕರೆಗಳು ಬಂದಿವೆ. ಈ ಪ್ರದೇಶದಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದರು.

ಕೊರೊನಾ ಒಳ್ಳೆಯದು ಎಂದಿದ್ದರಂತೆ ಟ್ರಂಪ್, ಯಾಕೆ ಗೊತ್ತಾ..?

ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ. ಕನಿಷ್ಠ 8-12 ಮಂದಿ ಗಾಯಗೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿದ್ದವು. ಆದರೆ ಬಲಿಯಾದವರು ಮತ್ತು ಗಾಯಗೊಂಡವರ ಖಚಿತ ಸಂಖ್ಯೆಯನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ. ಗಾಯಾಳುಗಳನ್ನು ಎರಡು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

ರೋಚೆಸ್ಟರ್‌ನಲ್ಲಿ ಪಾರ್ಟಿಯೊಂದು ನಡೆಯುತ್ತಿದ್ದಾಗ ಏಕಾಏಕಿ ಈ ಗುಂಡಿನ ದಾಳಿ ನಡೆದಿದೆ. ಯಾರು ಯಾವ ಕಾರಣಕ್ಕಾಗಿ ದಾಳಿ ನಡೆದಿದ್ದಾರೆ ಎನ್ನುವುದು ಗೊತ್ತಾಗಿಲ್ಲ. ಘಟನೆ ಸಂಬಂಧ ಯಾರನ್ನೂ ವಶಕ್ಕೆ ಪಡೆದಿಲ್ಲ. ಈ ಪಾರ್ಟಿ ಆಯೋಜನೆ ಮಾಡಿದ್ದು ತಮಗೆ ತಿಳಿದಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

English summary
New York mass shooting: Atleast 16 people phot in Rochester; 2 dead. The incindent was happened at Saturday 12.30 am.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X