ನ್ಯೂಯಾರ್ಕ್: 24 ಗಂಟೆಯಲ್ಲಿ ಕೊರೊನಾದಿಂದ 731 ಸಾವು

ವಾಷಿಂಗ್ಟನ್, ಏಪ್ರಿಲ್ 7: ನ್ಯೂಯಾರ್ಕ್‌ನಲ್ಲಿ ಕಳೆದ 24 ಗಂಟೆಗಳಲ್ಲಿ 731 ಮಂದಿ ಕೊರೊನಾ ವೈರಸ್‌ನಿಂದ ಮೃತಪಟ್ಟಿದ್ದಾರೆ.

ಗವರ್ನರ್ ಆಂಡ್ರ್ಯೂ ಕುವೋಮೊ ಲಾಕ್‌ಡೌನ್‌ ಏಪ್ರಿಲ್ ಅಂತ್ಯದವರೆಗೆ ವಿಸ್ತರಿಸಿದ್ದಾರೆ. ಏಪ್ರಿಲ್ 6 ರಿಂದ ಏಪ್ರಿಲ್ 7ರವರೆಗೆ 731 ಮಂದಿ ಸಾವನ್ನಪ್ಪಿದ್ದಾರೆ.

ಒಟ್ಟು ಸಾವಿಗೀಡಾದವರ ಸಂಖ್ಯೆ 5489ಕ್ಕೆ ಏರಿಕೆಯಾಗಿದೆ. ಶುಕ್ರವಾರ 630 ಮಂದಿ ಮೃತಪಟ್ಟಿದ್ದರು. ಆದರೆ ಸೋಮವಾರ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟಿದ್ದಾರೆ.

New York Reports Record 731 Coronavirus Deaths In One Day

ಅಮೆರಿಕದ ಕೊರೊನಾ ಕೇಂದ್ರ ಬಿಂದು ನ್ಯೂಯಾರ್ಕ್ ಆಗಿದೆ. ಅಲ್ಲೇ ಅತಿ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಅಮೆರಿಕದಲ್ಲಿ ಕೊರೊನಾ ವೈರಸ್‌ಗೆ 11 ಸಾವಿರಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ.

ಯಾವುದೇ ಕಾರಣಕ್ಕೂ ಸಹಜ ಸ್ಥಿತಿಗೆ ಬರುವ ಮುನ್ನ ಯಾರೂ ಕೂಡ ಮನೆಯಿಂದ ಹೊರಬರಬೇಡಿ ಎಂದು ತಿಳಿಸಲಾಗಿದೆ.

ಕಳೆದ ಎರಡು ದಿನಗಳ ಕಾಲ ಕೋವಿಡ್ ಸೋಂಕು ಪೀಡಿತರ ಸಂಖ್ಯೆ ಇಳಿಕೆಯಾಗಿತ್ತು. ಅಲ್ಲದೇ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕೂಡಾ ಇಳಿಮುಖವಾಗಿತ್ತು ಎಂದು ಗವರ್ನರ್ ತಿಳಿಸಿದ್ದಾರೆ.

ಕಳೆದ 24ಗಂಟೆಯಲ್ಲಿ ಕೋವಿಡ್ 19 ಸೋಂಕಿಗೆ ಒಳಗಾದ ರೋಗಿಗಳು ತುರ್ತು ನಿಗಾ ಘಟಕಕ್ಕೆ ದಾಖಲಾಗುವವರ ಸಂಖ್ಯೆ 100ಕ್ಕಿಂತ ಕಡಿಮೆ ಇದ್ದು, ಇದು ಕಳೆದ ಮಾರ್ಚ್ 21ರಿಂದ ಕಡಿಮೆ ಪ್ರಮಾಣದ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+