ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾರ್ವಜನಿಕವಾಗಿ ಕೊರೊನಾ ಲಸಿಕೆ ಪಡೆಯಲು ಒಬಾಮಾ, ಬುಷ್, ಕ್ಲಿಂಟನ್ ಸಮ್ಮತಿ!

|
Google Oneindia Kannada News

ವಾಶಿಂಗ್ಟನ್, ಡಿಸೆಂಬರ್.04: ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ಕೊರೊನಾವೈರಸ್ ಲಸಿಕೆಯ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ, ಜಾರ್ಜ್ ಡಬ್ಲ್ಯು ಬುಷ್ ಮತ್ತು ಬಿಲ್ ಕ್ಲಿಂಟನ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ಅಮೆರಿಕಾದ ಆಹಾರ ಮತ್ತು ಔಷಧೀಯ ಪ್ರಾಧಿಕಾರವು ಒಮ್ಮೆ ಕೊವಿಡ್-19 ಲಸಿಕೆಗೆ ಅನುಮೋದನೆ ನೀಡಿದರೆ ಸಾಕು. ಸಾರ್ವಜನಿಕವಾಗಿ ಲಸಿಕೆಯನ್ನು ಪಡೆದುಕೊಳ್ಳುವುದಕ್ಕೆ ಅಮೆರಿಕಾದ ಮೂವರು ಮಾಜಿ ಅಧ್ಯಕ್ಷರು ಸಮ್ಮತಿ ಸೂಚಿಸಿದ್ದಾರೆ.

ಅಮೆರಿಕದಲ್ಲಿ ಒಂದೇ ದಿನ ಬರೋಬ್ಬರಿ 2800 ಮಂದಿ ಕೊರೊನಾ ಸೋಂಕಿಗೆ ಬಲಿಅಮೆರಿಕದಲ್ಲಿ ಒಂದೇ ದಿನ ಬರೋಬ್ಬರಿ 2800 ಮಂದಿ ಕೊರೊನಾ ಸೋಂಕಿಗೆ ಬಲಿ

ಕೊವಿಡ್-19 ಲಸಿಕೆ ಸುರಕ್ಷಿತ, ಪರಿಣಾಮಕಾರಿ ಮತ್ತು ಯಾವುದೇ ಅಡ್ಡ ಪರಿಣಾಮಗಳಿಲ್ಲ ಎನ್ನುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಿದೆ. ಈ ನಿಟ್ಟಿನಲ್ಲಿ ಬರಾಕ್ ಒಬಾಮಾ, ಜಾರ್ಜ್ ಬುಷ್ ಹಾಗೂ ಬಿಲ್ ಕ್ಲಿಂಟನ್ ಅವರು ಸಾರ್ವಜನಿಕವಾಗಿ ಲಸಿಕೆ ಪಡೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

Obama, Bush, Clinton: These Former US Presidents Want To Get Coronavirus Vaccine Publicly

ಅಮೆರಿಕಾದಲ್ಲಿ ಕೊವಿಡ್-19 ಲಸಿಕೆ ಬಗ್ಗೆ ಜನಜಾಗೃತಿ:

ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ಸಂಶೋಧಿಸಲ್ಪಟ್ಟ ಕೊವಿಡ್-19 ಲಸಿಕೆ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸಬೇಕಿದೆ. ದೇಶದ ಪ್ರಜೆಗಳು ನಿರಾತಂಕವಾಗಿ ಕೊರೊನಾವೈರಸ್ ಲಸಿಕೆ ಪಡೆದುಕೊಳ್ಳಲು ಮನಸ್ಸು ಮಾಡಬೇಕಿದೆ. ಜನಜಾಗೃತಿ ಮೂಡಿಸುವ ಅಗತ್ಯತೆ ಸರ್ಕಾರದ ಎದುರಿಗಿದ್ದು, ಈ ನಿಟ್ಟಿನಲ್ಲಿ ಸಹಕಾರ ನೀಡಲು ಮೂವರು ಮಾಜಿ ಅಧ್ಯಕ್ಷರು ಮುಂದಾಗಿದ್ದಾರೆ.

24 ಗಂಟೆಗಳಲ್ಲಿ ಕೊರೊನಾಗೆ 2800 ಮಂದಿ ಸಾವು:

ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ಒಂದೇ ದಿನ 2800 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ 1,00,226 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,45,35,195ಕ್ಕೆ ಏರಿಕೆಯಾಗಿದೆ.

English summary
Obama, Bush, Clinton: These Former US Presidents Want To Get Coronavirus Vaccine Publicly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X