ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಡೆನ್ ಗೆಲುವಿಗೆ ಪಣತೊಟ್ಟ ಒಬಾಮಾ, ಇಂದಿನಿಂದ ಕ್ಯಾಂಪೇನ್ ಅಖಾಡಕ್ಕೆ ಎಂಟ್ರಿ

|
Google Oneindia Kannada News

ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ v/s ಮಾಜಿ ಅಧ್ಯಕ್ಷರ ಮಹಾಯುದ್ಧಕ್ಕೆ ಅಖಾಡ ಸಜ್ಜಾಗಿದ್ದು, ಇಂದಿನಿಂದ ಜೋ ಬಿಡೆನ್ ಪರ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಪ್ರಚಾರ ಆರಂಭಿಸಲಿದ್ದಾರೆ. ಡೊನಾಲ್ಡ್‌ ಟ್ರಂಪ್‌ಗೆ ಬಿಡೆನ್‌ಗಿಂತ ಒಬಾಮಾ ಬದ್ಧ ವಿರೋಧಿ. ಇಬ್ಬರ ನಡುವೆ ಆಗಾಗ ಬಹಿರಂಗ ಗುದ್ದಾಟ ನಡೆಯುತ್ತಲೇ ಇರುತ್ತದೆ. ಒಬಾಮಾ ಟ್ರಂಪ್ ವಿರುದ್ಧ ವಾಗ್ದಾಳಿ ನಡೆಸುವುದು, ಟ್ರಂಪ್ ಒಬಾಮಾ ವಿರುದ್ಧ ಹರಿಹಾಯುವುದು ಮಾಮೂಲು.

ಅಮೆರಿಕ ಅಧ್ಯಕ್ಷರ ಆಯ್ಕೆಗೆ ದಿನಗಣನೆ, 244 ವರ್ಷಗಳ ಮಹಾನ್ ಇತಿಹಾಸಅಮೆರಿಕ ಅಧ್ಯಕ್ಷರ ಆಯ್ಕೆಗೆ ದಿನಗಣನೆ, 244 ವರ್ಷಗಳ ಮಹಾನ್ ಇತಿಹಾಸ

ಆದರೆ ಈಗ ಅಧ್ಯಕ್ಷೀಯ ಚುನಾವಣೆ ಎದುರಾಗಿದ್ದು, ಬಿಡೆನ್ ಗೆಲುವಿಗಾಗಿ ಖುದ್ದು ಮಾಜಿ ಅಧ್ಯಕ್ಷರೇ ಅಖಾಡ ಪ್ರವೇಶ ಮಾಡಿದ್ದಾರೆ. ಇಂದಿನಿಂದ ಬಿಡೆನ್ ಪರ ಒಬಾಮಾ ಕ್ಯಾಂಪೇನ್ ಮಾಡಲಿದ್ದು, ಫಿಲಿಡೆಲ್ಫಿಯಾ ರಾಜ್ಯದಿಂದ ಪ್ರಚಾರ ಆರಂಭಿಸಲಿದ್ದಾರೆ. ಈ ಮೂಲಕ ಆಫ್ರಿಕನ್-ಅಮೆರಿಕನ್ ಮತಗಳನ್ನು ಬಿಡೆನ್ ಪರವಾಗಿ ಒಗ್ಗೂಡಿಸಲು ಒಬಾಮಾ ಮುಂದಾಗಿದ್ದಾರೆ.

ಜೋ ಬಿಡೆನ್, ಕಮಲಾ ಹ್ಯಾರಿಸ್ ಪರ ಬರಾಕ್ ಒಬಾಮಾ ಪ್ರಚಾರ ಜೋ ಬಿಡೆನ್, ಕಮಲಾ ಹ್ಯಾರಿಸ್ ಪರ ಬರಾಕ್ ಒಬಾಮಾ ಪ್ರಚಾರ

ಒಬಾಮಾ ಆಡಳಿತವನ್ನು ಮೆಚ್ಚಿದ್ದ ಮಂದಿ ಮಾಜಿ ಅಧ್ಯಕ್ಷರಿಗೆ ಸಾಥ್ ನೀಡಲಿದ್ದು, ಡೆಮಾಕ್ರಟಿಕ್ ಪಕ್ಷದ ನಾಯಕರು ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಹೀಗಾಗಿ ಅಮೆರಿಕ ಅಧ್ಯಕ್ಷೀಯ ಚುನಾವಣಾ ಅಖಾಡ ಮತ್ತಷ್ಟು ರಂಗೇರಿದೆ.

ಒಬಾಮಾ ಕೇರ್ v/s ಡೊನಾಲ್ಡ್ ಟ್ರಂಪ್

ಒಬಾಮಾ ಕೇರ್ v/s ಡೊನಾಲ್ಡ್ ಟ್ರಂಪ್

ಅಮೆರಿಕದ ಬಡವರಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಒಬಾಮಾ ತಮ್ಮ ಆಡಳಿತದಲ್ಲಿ 'ಒಬಾಮಾ ಕೇರ್' ಎಂಬ ಮಹತ್ವಾಕಾಂಕ್ಷಿ ಯೋಜನೆ ಆರಂಭಿಸಿದ್ದರು. ಆದರೆ ಇದು ಟ್ರಂಪ್‌ಗೆ ಬಿಲ್‌ಕುಲ್ ಇಷ್ಟವಿರಲಿಲ್ಲ. ಹೀಗಾಗಿಯೇ ಟ್ರಂಪ್ ಅಧಿಕಾರಕ್ಕೆ ಬರುತ್ತಿದ್ದಂತೆ 'ಒಬಾಮಾ ಕೇರ್' ಯೋಜನೆಗೆ ಬ್ರೇಕ್ ಹಾಕಿದ್ದರು. ಇದು ಟ್ರಂಪ್ ಮತ್ತು ಒಬಾಮಾ ಮಧ್ಯೆ ವಾಗ್ದಾಳಿಗೆ ದಾರಿಮಾಡಿಕೊಟ್ಟಿತ್ತು.

'ಕೊರೊನಾ' ಸೋಂಕಿನಿಂದ ಅಮೆರಿಕದಲ್ಲಿ ಲಕ್ಷಾಂತರ ಜನರು ಮೃತಪಟ್ಟಿರುವುದು ಟ್ರಂಪ್ ಕೈಗೊಂಡ ಈ ನಿರ್ಧಾರದಿಂದ ಎಂಬ ಆರೋಪವಿದೆ. 'ಒಬಾಮಾ ಕೇರ್'ಗೆ ಬ್ರೇಕ್ ಹಾಕಿದ್ದರಿಂದ ಬಡವರಿಗೆ ಚಿಕಿತ್ಸೆ ಸಿಗಲಿಲ್ಲ, ಹೀಗಾಗಿಯೇ ಅಮೆರಿಕದಲ್ಲಿ ಅತಿಹೆಚ್ಚು ಜನ ಕೊರೊನಾಗೆ ಬಲಿಯಾದರು ಎಂಬುದು ವಿಪಕ್ಷ ನಾಯಕರ ಆರೋಪ.

‘ಅಮೆರಿಕ ಹೆಸರು ಹಾಳುಮಾಡಿದ ಟ್ರಂಪ್’

‘ಅಮೆರಿಕ ಹೆಸರು ಹಾಳುಮಾಡಿದ ಟ್ರಂಪ್’

ಕೆಲದಿನಗಳ ಹಿಂದೆ ಖಾಸಗಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಒಬಾಮಾ ಟ್ರಂಪ್ ವಿರುದ್ಧ ಒಂದು ಗಂಭೀರ ಆರೋಪ ಮಾಡಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಮೆರಿಕ ಹೆಸರು ಕೆಡಲು ಟ್ರಂಪ್ ಕಾರಣ ಎಂದಿದ್ದರು. ಅಲ್ಲದೆ ಇದುವರೆಗೂ ಜಗತ್ತಿಗೆ ತೊಂದರೆ ಆದರೆ ವಾಷಿಂಗ್ಟನ್ ಕಡೆಗೆ ಮುಖ ಮಾಡಿ ನಿಲ್ಲುತ್ತಿದ್ರು. ಅವರಿಗೆ ಮಾಸ್ಕೋ ಬೇಕಿರಲಿಲ್ಲ. ಆದರೆ ಟ್ರಂಪ್ ಎಲ್ಲವನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಈಗ ಟ್ರಂಪ್ ವಿರುದ್ಧ ಪ್ರಚಾರ ಕಣದಲ್ಲಿ ಅಬ್ಬರಿಸಲು ಒಬಾಮಾ ಮುಂದಾಗಿದ್ದಾರೆ.

ಡೊನಾಲ್ಡ್ ಟ್ರಂಪ್ ಒಬ್ಬ ನಾಲಾಯಕ್ ಅಧ್ಯಕ್ಷ: ಬರಾಕ್ ಒಬಾಮಾಡೊನಾಲ್ಡ್ ಟ್ರಂಪ್ ಒಬ್ಬ ನಾಲಾಯಕ್ ಅಧ್ಯಕ್ಷ: ಬರಾಕ್ ಒಬಾಮಾ

ಅಮೆರಿಕ ವಿರೋಧಿಗಳಿಗೆ ನಾವು ಸೋಲಬೇಕಿದೆ..!

ಅಮೆರಿಕ ವಿರೋಧಿಗಳಿಗೆ ನಾವು ಸೋಲಬೇಕಿದೆ..!

ಅಮೆರಿಕ ವಿರೋಧಿಗಳು ಹೇಗೆ ಕಾರ್ಯನಿರ್ವಹಿಸುತ್ತಿದ್ದಾರೆ, ಅಮೆರಿಕದ ಹೆಸರು ಕೆಡಿಸಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಲಾಬಿ ಬಗ್ಗೆಯೂ ಇದೇ ಕಾರ್ಯಕ್ರಮದಲ್ಲಿ ಒಬಾಮಾ ಪ್ರಸ್ತಾಪಿಸಿದ್ದರು. ಅಮೆರಿಕ ಶಕ್ತಿ ಕುಗ್ಗಿಸಲು ಕುತಂತ್ರಗಳು ನಡೆಯುತ್ತಿವೆ, ಟ್ರಂಪ್ ಆಡಳಿತದಲ್ಲಿ ಇದಕ್ಕೆ ತಕ್ಕಂತಹ ಬೆಳವಣಿಗೆ ನಡೆದಿದೆ. ಇದು ಮುಂದುವರಿದರೆ ಭವಿಷ್ಯದಲ್ಲಿ ಅಮೆರಿಕ ದೊಡ್ಡ ಅಪಾಯ ಎದುರಿಸಲಿದೆ ಎಂದು ಒಬಾಮಾ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಅಲ್ಲದೆ ಟ್ರಂಪ್ ಮಾಡಿಕೊಂಡಿರುವ ಎಡವಟ್ಟುಗಳನ್ನೂ ಒಬಾಮಾ ತಿಳಿಸಿದ್ದರು.

ಭವಿಷ್ಯವಾಣಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಯಾರಿಗೆ ಕಿರೀಟ?ಭವಿಷ್ಯವಾಣಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಯಾರಿಗೆ ಕಿರೀಟ?

ಟ್ರಂಪ್ ನಾಲಾಯಕ್ ಅಧ್ಯಕ್ಷ..!

ಟ್ರಂಪ್ ನಾಲಾಯಕ್ ಅಧ್ಯಕ್ಷ..!

ಒಬಾಮಾ ಹೀಗೆ ಟ್ರಂಪ್ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದು ಇದೇ ಮೊದಲಲ್ಲ. ಕಳೆದ ತಿಂಗಳು ಇದೇ ರೀತಿ ಟ್ರಂಪ್‌ಗೆ ಬೆವರಿಳಿಸಿದ್ದರು. ಡೆಮಾಕ್ರಟಿಕ್ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ್ದ ಅಮೆರಿಕದ ಮಾಜಿ ಅಧ್ಯಕ್ಷ ಒಬಾಮಾ, ಟ್ರಂಪ್ ತಾವು ಕುಳಿತ ಕಚೇರಿಗೆ ಒಂದಿಷ್ಟೂ ಯೋಗ್ಯರಲ್ಲ ಎಂದಿದ್ದಾರೆ.

ಅಲ್ಲದೆ ಅಧ್ಯಕ್ಷ ಸ್ಥಾನ ನಿಭಾಯಿಸಲು ಟ್ರಂಪ್ ಅದಕ್ಷ ಎಂದು ಯಾವುದೇ ಮುಲಾಜು ನೋಡದೆ ಟ್ರಂಪ್‌ ಆಡಳಿತ ವೈಖರಿ ಜರಿದಿದ್ರು. ಟ್ರಂಪ್ ಕೆಲಸ ಮಾಡಲು ಆಸಕ್ತಿ ತೋರುತ್ತಿಲ್ಲ. ಟ್ರಂಪ್ ತಮಗೆ ಮತ್ತು ಅವರ ಸ್ನೇಹಿತರನ್ನ ಹೊರತುಪಡಿಸಿ ಯಾರಿಗಾದರೂ ಸಹಾಯ ಮಾಡಲು ಕಚೇರಿ ನೀಡಿರುವ ಅಧಿಕಾರ ಬಳಸಿಕೊಳ್ಳಲು ಆಸಕ್ತಿ ತೋರುತ್ತಿಲ್ಲ ಎಂದು ಆರೋಪಿಸಿದ್ದರು. ಡೆಮಾಕ್ರಟಿಕ್ ರಾಷ್ಟ್ರೀಯ ಸಮಾವೇಶದ ಬಳಿಕ ಒಬಾಮಾ ಇದೀಗ ಮತ್ತೆ ಟ್ರಂಪ್ ವಿರುದ್ಧ ಚುನಾವಣಾ ಅಖಾಡ ಪ್ರವೇಶಿಸಿದ್ದಾರೆ.

ಟ್ರಂಪ್ ಸೋತರೆ ಗಂಡಾಂತರ: ಜೈಲು ಸೇರಬಹುದು ಇಲ್ಲ ದೇಶ ಬಿಡಬಹುದು..!?ಟ್ರಂಪ್ ಸೋತರೆ ಗಂಡಾಂತರ: ಜೈಲು ಸೇರಬಹುದು ಇಲ್ಲ ದೇಶ ಬಿಡಬಹುದು..!?

English summary
Obama is campaigning for Biden in the US presidential election. Former US President Barack Obama will begin a campaign for Biden from the state of Philadelphia.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X