ಟ್ರಂಪ್‌ಗೆ ಸಣ್ಣ ವಿಷಯವೂ ಅರ್ಥವಾಗಲ್ಲ, ಆದರೆ ಕೋಪ ಚೆನ್ನಾಗಿ ಬರುತ್ತೆ: ಒಬಾಮಾ
ಅಮೆರಿಕ ಅಧ್ಯಕ್ಷರ ಸ್ಥಾನದಲ್ಲಿ ಹಿಂದೆಂದೂ ಟ್ರಂಪ್ ರೀತಿಯ ವ್ಯಕ್ತಿಯನ್ನು ನಾವು ನೋಡಿಲ್ಲ ಎನ್ನುವ ಮೂಲಕ ಬರಾಕ್ ಒಬಾಮಾ ಅಧ್ಯಕ್ಷೀಯ ಚುನಾವಣೆಗೆ ಕಿಚ್ಚು ಹಚ್ಚಿದ್ದಾರೆ. ಟ್ರಂಪ್‌ಗೆ ಸಣ್ಣ ಸಣ್ಣ ವಿಚಾರಗಳು ಕೂಡ ಅರ್ಥವಾಗಲ್ಲ, ಆದರೆ ಕೋಪ ಮಾತ್ರ ದಿಢೀರ್ ಎಂದು ಬಂದುಬಿಡುತ್ತೆ. ಮಾಧ್ಯಮ ಪ್ರತಿನಿಧಿಗಳು ಕೇಳುವ ಪ್ರಶ್ನೆಗಳಿಗೆ ಸುಖಾಸುಮ್ಮನೆ ಟ್ರಂಪ್ ಕೋಪ ಮಾಡಿಕೊಳ್ಳುತ್ತಾರೆ. ಟ್ರಂಪ್ ನಡೆಗೆ ಅರ್ಥ ಇದೆಯಾ ಎನ್ನುತ್ತಾ ಪ್ರಚಾರ ಸಭೆಯಲ್ಲಿ ಕಾಲೆಳೆದಿದ್ದಾರೆ.
ಮಿಯಾಮಿ ನಗರದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಡೆನ್ ಪರ ಒಬಾಮಾ ಮತಯಾಚನೆ ಮಾಡಿದರು. ಆದರೆ ಕ್ಯಾಂಪೇನ್ ಭಾಷಣದಲ್ಲಿ ಬಿಡೆನ್ ಪರ ಮತ ಕೇಳುವುದಕ್ಕಿಂತಲೂ ಹೆಚ್ಚಾಗಿ, ಟ್ರಂಪ್ ಮಾಡುತ್ತಿರುವ ಎಡವಟ್ಟುಗಳನ್ನು ವಿವರಿಸುವುದಕ್ಕೆ ಒಬಾಮಾ ಹೆಚ್ಚಿನ ಸಮಯ ತೆಗೆದುಕೊಂಡರು. ಕೆಲ ದಿನಗಳ ಹಿಂದಷ್ಟೇ ಟ್ರಂಪ್ ಅಮೆರಿಕದ ಪ್ರತಿಷ್ಠಿತ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಸಂದರ್ಶನದಲ್ಲಿ ಪತ್ರಕರ್ತ ಕೇಳಿದ ಪ್ರಶ್ನೆಗೆ ಕೋಪಗೊಂಡಿದ್ದರು.
ಇದನ್ನು ಕೂಡ ತಮ್ಮದೇ ಶೈಲಿಯಲ್ಲಿ ಹಾಸ್ಯಭರಿತವಾಗಿ ವಿವರಿಸಿದ ಒಬಾಮಾ, ಒಂದು ಕಾರ್ಯಕ್ರಮ ಅಂದರೆ ಹೇಗೆ ಇರಲಿದೆ ಎಂಬ ಬಗ್ಗೆ ಟ್ರಂಪ್‌ಗೆ ಕಲ್ಪನೆ ಇಲ್ಲ. ಮುಂದಿನ ಅವಧಿಯಲ್ಲಿ ಏನೆಲ್ಲಾ ಅಭಿವೃದ್ಧಿ ಮಾಡುತ್ತೀರಿ ಎಂದು ಪತ್ರಕರ್ತರು ಪ್ರಶ್ನೆ ಕೇಳಿದರೆ, ಕೋಪಿಸಿಕೊಂಡು ಹೊರಗೆ ಬರ್ತಾರೆ. ಹೀಗಾದರೆ ಹೇಗೆ ಎಂದು ಟ್ರಂಪ್‌ರನ್ನು ಛೇಡಿಸಿದರು.

ಒಬಾಮಾ ಕೇರ್ v/s ಡೊನಾಲ್ಡ್ ಟ್ರಂಪ್
ಅಮೆರಿಕದಲ್ಲಿ ಒಬಾಮಾ ಹಾಗೂ ಟ್ರಂಪ್ ನಡುವಿನ ವಾಗ್ದಾಳಿ ಇಂದು ನಿನ್ನೆಯದಲ್ಲ. ಅದಕ್ಕೆ ಬರೋಬ್ಬರಿ 4 ವರ್ಷಗಳ ಇತಿಹಾಸವಿದೆ. ಇಬ್ಬರ ನಡುವೆ ಬೆಂಕಿಯುಂಡೆಯಂತಹ ಪದಬಳಕೆಗೆ ಬಲವಾದ ಕಾರಣವಿದೆ. ಅಮೆರಿಕದ ಬಡವರಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಒಬಾಮಾ ತಮ್ಮ ಆಡಳಿತದಲ್ಲಿ 'ಒಬಾಮಾ ಕೇರ್' ಎಂಬ ಮಹತ್ವಾಕಾಂಕ್ಷಿ ಯೋಜನೆ ಆರಂಭಿಸಿದ್ದರು. ಆದರೆ ಇದು ಟ್ರಂಪ್‌ಗೆ ಬಿಲ್‌ಕುಲ್ ಇಷ್ಟವಿರಲಿಲ್ಲ. ಹೀಗಾಗಿಯೇ ಟ್ರಂಪ್ ಅಧಿಕಾರಕ್ಕೆ ಬರುತ್ತಿದ್ದಂತೆ 'ಒಬಾಮಾ ಕೇರ್' ಯೋಜನೆಗೆ ಬ್ರೇಕ್ ಹಾಕಿದ್ದರು. ಇದು ಟ್ರಂಪ್ ಮತ್ತು ಒಬಾಮಾ ಮಧ್ಯೆ ವಾಗ್ದಾಳಿಗೆ ದಾರಿಮಾಡಿಕೊಟ್ಟಿತ್ತು. 'ಕೊರೊನಾ' ಸೋಂಕಿನಿಂದ ಅಮೆರಿಕದಲ್ಲಿ ಲಕ್ಷಾಂತರ ಜನರು ಮೃತಪಟ್ಟಿರುವುದು ಟ್ರಂಪ್ ಕೈಗೊಂಡ ಈ ನಿರ್ಧಾರದಿಂದ ಎಂಬ ಆರೋಪವಿದೆ. 'ಒಬಾಮಾ ಕೇರ್'ಗೆ ಬ್ರೇಕ್ ಹಾಕಿದ್ದರಿಂದ ಬಡವರಿಗೆ ಚಿಕಿತ್ಸೆ ಸಿಗಲಿಲ್ಲ, ಹೀಗಾಗಿಯೇ ಅಮೆರಿಕದಲ್ಲಿ ಅತಿಹೆಚ್ಚು ಜನ ಕೊರೊನಾಗೆ ಬಲಿಯಾದರು ಎಂಬುದು ವಿಪಕ್ಷ ನಾಯಕರ ಆರೋಪ.

‘ಅಮೆರಿಕ ಹೆಸರು ಹಾಳುಮಾಡಿದ ಟ್ರಂಪ್’
ಕೆಲದಿನಗಳ ಹಿಂದೆ ಖಾಸಗಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಒಬಾಮಾ ಟ್ರಂಪ್ ವಿರುದ್ಧ ಒಂದು ಗಂಭೀರ ಆರೋಪ ಮಾಡಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಮೆರಿಕ ಹೆಸರು ಕೆಡಲು ಟ್ರಂಪ್ ಕಾರಣ ಎಂದಿದ್ದರು. ಅಲ್ಲದೆ ಇದುವರೆಗೂ ಜಗತ್ತಿಗೆ ತೊಂದರೆ ಆದರೆ ವಾಷಿಂಗ್ಟನ್ ಕಡೆಗೆ ಮುಖ ಮಾಡಿ ನಿಲ್ಲುತ್ತಿದ್ರು. ಅವರಿಗೆ ಮಾಸ್ಕೋ ಬೇಕಿರಲಿಲ್ಲ. ಆದರೆ ಟ್ರಂಪ್ ಎಲ್ಲವನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಈಗ ಟ್ರಂಪ್ ವಿರುದ್ಧ ಪ್ರಚಾರ ಕಣದಲ್ಲಿ ಅಬ್ಬರಿಸಲು ಒಬಾಮಾ ಮುಂದಾಗಿದ್ದಾರೆ.

ಅಮೆರಿಕ ವಿರೋಧಿಗಳಿಗೆ ನಾವು ಸೋಲಬೇಕಿದೆ..!
ಅಮೆರಿಕ ವಿರೋಧಿಗಳು ಹೇಗೆ ಕಾರ್ಯನಿರ್ವಹಿಸುತ್ತಿದ್ದಾರೆ, ಅಮೆರಿಕದ ಹೆಸರು ಕೆಡಿಸಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಲಾಬಿ ಬಗ್ಗೆಯೂ ಇದೇ ಕಾರ್ಯಕ್ರಮದಲ್ಲಿ ಒಬಾಮಾ ಪ್ರಸ್ತಾಪಿಸಿದ್ದರು. ಅಮೆರಿಕ ಶಕ್ತಿ ಕುಗ್ಗಿಸಲು ಕುತಂತ್ರಗಳು ನಡೆಯುತ್ತಿವೆ, ಟ್ರಂಪ್ ಆಡಳಿತದಲ್ಲಿ ಇದಕ್ಕೆ ತಕ್ಕಂತಹ ಬೆಳವಣಿಗೆ ನಡೆದಿದೆ. ಇದು ಮುಂದುವರಿದರೆ ಭವಿಷ್ಯದಲ್ಲಿ ಅಮೆರಿಕ ದೊಡ್ಡ ಅಪಾಯ ಎದುರಿಸಲಿದೆ ಎಂದು ಒಬಾಮಾ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಅಲ್ಲದೆ ಟ್ರಂಪ್ ಮಾಡಿಕೊಂಡಿರುವ ಎಡವಟ್ಟುಗಳನ್ನೂ ಒಬಾಮಾ ತಿಳಿಸಿದ್ದರು.
Recommended Video

ಟ್ರಂಪ್ ನಾಲಾಯಕ್ ಅಧ್ಯಕ್ಷ..!
ಒಬಾಮಾ ಹೀಗೆ ಟ್ರಂಪ್ ವಿರುದ್ಧ ವಾಗ್ದಾಳಿ ನಡೆಸುತ್ತಿರುವುದು ಇದೇ ಮೊದಲಲ್ಲ. ಕಳೆದ ತಿಂಗಳು ಇದೇ ರೀತಿ ಟ್ರಂಪ್‌ಗೆ ಬೆವರಿಳಿಸಿದ್ದರು. ಡೆಮಾಕ್ರಟಿಕ್ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದ್ದ ಅಮೆರಿಕದ ಮಾಜಿ ಅಧ್ಯಕ್ಷ ಒಬಾಮಾ, ಟ್ರಂಪ್ ತಾವು ಕುಳಿತ ಕಚೇರಿಗೆ ಒಂದಿಷ್ಟೂ ಯೋಗ್ಯರಲ್ಲ ಎಂದಿದ್ದಾರೆ. ಅಲ್ಲದೆ ಅಧ್ಯಕ್ಷ ಸ್ಥಾನ ನಿಭಾಯಿಸಲು ಟ್ರಂಪ್ ಅದಕ್ಷ ಎಂದು ಯಾವುದೇ ಮುಲಾಜು ನೋಡದೆ ಟ್ರಂಪ್ ಆಡಳಿತ ವೈಖರಿ ಜರಿದಿದ್ರು. ಟ್ರಂಪ್ ಕೆಲಸ ಮಾಡಲು ಆಸಕ್ತಿ ತೋರುತ್ತಿಲ್ಲ. ಟ್ರಂಪ್ ತಮಗೆ ಮತ್ತು ಅವರ ಸ್ನೇಹಿತರನ್ನ ಹೊರತುಪಡಿಸಿ ಯಾರಿಗಾದರೂ ಸಹಾಯ ಮಾಡಲು ಕಚೇರಿ ನೀಡಿರುವ ಅಧಿಕಾರ ಬಳಸಿಕೊಳ್ಳಲು ಆಸಕ್ತಿ ತೋರುತ್ತಿಲ್ಲ ಎಂದು ಆರೋಪಿಸಿದ್ದರು. ಡೆಮಾಕ್ರಟಿಕ್ ರಾಷ್ಟ್ರೀಯ ಸಮಾವೇಶದ ಬಳಿಕ ಒಬಾಮಾ ಇದೀಗ ಮತ್ತೆ ಟ್ರಂಪ್ ವಿರುದ್ಧ ಚುನಾವಣಾ ಅಖಾಡ ಪ್ರವೇಶಿಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications