ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮೆರಿಕದಲ್ಲಿ 26/11 ಮುಂಬೈ ದಾಳಿಯ ಸಂಚುಕೋರ ರಾಣಾ ಬಂಧನ

|
Google Oneindia Kannada News

ಲಾಸ್ ಎಂಜಲೀಸ್, ಜೂನ್ 20: ಮುಂಬೈನಲ್ಲಿ 2008ರಲ್ಲಿ ನಡೆದ ಉಗ್ರದಾಳಿಯ ಸಂಚುಕೋರ ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ ತಹವ್ವೂರ್ ರಾಣಾನನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ.

Recommended Video

ಕಳೆದ 2 ವಾರಗಳಲ್ಲಿ ಪೆಟ್ರೋಲ್ ಬೆಲೆಯಲ್ಲಿ 7 ₹ ಹೆಚ್ಚಳ | Petrol Price Hiked | Oneindia Kannada

ಜೂನ್ 11 ರಂದು ರಾಣಾ ಆರಂಭಿಕ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅಮೆರಿಕಾದ ಜಿಲ್ಲಾ ನ್ಯಾಯಾಧೀಶ ಜಾಕ್ವೆಲಿನ್ ಚೊಲ್ಜಿಯಾನ್ ಜೂನ್ 30ರಂದು ಕ್ಯಾಲಿಪೋರ್ನಿಯಾದ ಜಿಲ್ಲಾ ನ್ಯಾಯಾಲಯದಲ್ಲಿ ರಾಣಾನಾ ಜಾಮೀನು ಅರ್ಜಿ ವಿಚಾರಣೆಯನ್ನು ನಿಗದಿಪಡಿಸಿದ್ದಾರೆ.

26/11 ಮುಂಬೈ ದಾಳಿಯ ಉಗ್ರ ಕಸಬ್ ಗೂ ಬೆಂಗಳೂರಿಗೂ ನಂಟು!26/11 ಮುಂಬೈ ದಾಳಿಯ ಉಗ್ರ ಕಸಬ್ ಗೂ ಬೆಂಗಳೂರಿಗೂ ನಂಟು!

59 ವರ್ಷದ ರಾಣಾ, ತನಗೆ ಕೊವಿಡ್-19 ಸೋಂಕು ತಗುಲಿದ್ದು, ಕರುಣೆ ತೋರಿ ಬಿಡುಗಡೆ ಮಾಡಬೇಕೆಂದು ಅಮೆರಿಕಾ ನ್ಯಾಯಾಲಯಕ್ಕೆ ಮನವಿ ಮಾಡಿದ ಬಳಿಕ ಆತನನ್ನು ಇತ್ತೀಚಿಗೆ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಆದರೆ, ಭಾರತದ ಕೋರಿಕೆ ಮೇರೆಗೆ ಮರು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Pak-Origin Plotter Of 26/11 Attacks Arrested In US

ಈ ಸಂಬಂಧ ಜೂನ್ 22 ರೊಳಗೆ ಅರ್ಜಿ ಸಲ್ಲಿಸುವಂತೆ ರಾಣಾ ಪರ ವಕೀಲರಿಗೆ ತಿಳಿಸಲಾಗಿದೆ. ಜೂನ್ 26ರೊಳಗೆ ಫೆಡರಲ್ ಸರ್ಕಾರದ ಪ್ರತಿಕ್ರಿಯೆ ಬರಲಿದೆ.

2008ರ ನವೆಂಬರ್ ನಲ್ಲಿ ಪಾಕಿಸ್ತಾನ ಮೂಲದ ಇಸ್ಲಾಂ ಮೂಲಭೂತವಾದದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಸುಮಾರು 12 ಜನ ಉಗ್ರರು ತಂತ್ರಗಾರಿಕೆಯಿಂದ ಪಾಕಿಸ್ತಾನದಿಂದ ಭಾರತದ ಒಳ ನುಸುಳಿದ್ದು ಅಲ್ಲದೆ ಸತತ ಮೂರು ದಿನಗಳ ಕಾಲ ಮುಂಬಯಿ ನಗರವನ್ನು ಗುರಿಯಾಗಿಸಿಕೊಂಡು ಬಾಂಬ್ ಮತ್ತು ಗುಂಡಿನ ಮಳೆಗರೆದು ಸಾರ್ವಜನಿಕ ಜೀವನ ಹಾಗು ಅಪಾರ ಆಸ್ತಿ-ಪಾಸ್ತಿ ನಷ್ಟಗಳಿಗೆ ಕಾರಣರಾದರು.

ಮುಂಬೈ ಮಹಾನಗರ ಮೂರು ದಿನಗಳ ಕಾಲ ಭಯೋತ್ಪಾದಕರ ಕಪಿ ಮುಷ್ಟಿಯಲ್ಲಿ ಸಿಲುಕಿ ಅಕ್ಷರಶಃ ನರಕ ದರ್ಶನ ಮಾಡಿತು. ದಾಳಿ ಮುಗಿದು ಎಲ್ಲ ಉಗ್ರರನ್ನು ಭಾರತದ ಸೇನೆ ಹಾಗು ದೇಶದ ಆಂತರಿಕ ಪೋಲಿಸ್ ಪಡೆ ಹತ್ಯೆ ಮಾಡಿತು. ಅದರಲ್ಲಿ ಒಬ್ಬ ಉಗ್ರನನ್ನು ಜೀವಂತವಾಗಿ ಸೆರೆ ಹಿಡಿಯುವಲ್ಲಿ ಸಫಲವಾಯಿತು.

English summary
Pakistani-origin Canadian businessman Tahawwur Rana has been arrested in Los Angeles on an extradition request by India for his involvement in the 2008 Mumbai terror attacks, in which 166 people were killed, according to the US prosecutors.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X