ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪಾಕ್ ಭರವಸೆ : ಅಮೆರಿಕ

ವಾಷಿಂಗ್ಟನ್, ಮಾರ್ಚ್ 12: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಆತ್ಮಾಹುತಿ ದಾಳಿಗೆ ಸಂಬಂಧಿಸಿದಂತೆ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪಾಕ್ ಭರವಸೆ ನೀಡಿದೆ ಎಂದು ಅಮೆರಿಕ ತಿಳಿಸಿದೆ.

ಈ ಕುರಿತು ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬಫಲ್ಟನ್ ಅವರು ಟ್ವೀಟ್ ಮಾಡಿದ್ದಾರೆ. ಅದರಲ್ಲಿ ''ಎಲ್ಲ ಉಗ್ರರ ವಿರುದ್ಧ ಕಠಿಣವಾಗಿ ನಡೆದುಕೊಳ್ಳಲಾಗುತ್ತದೆ ಹಾಗೂ ಭಾರತದೊಂದಿಗಿನ ಆತಂಕದ ವಾತಾವರಣ ಶಮನಗೊಳಿಸಲು ಸೂಕ್ತ ಕ್ರಮವಹಿಸಲಾಗುತ್ತದೆ ಎಂದು ಪಾಕಿಸ್ತಾನ ಭರವಸೆ ನೀಡಿದೆ'' ಎಂದು ಹೇಳಿದ್ದಾರೆ.

ಪಾಕಿಸ್ತಾನದ ವಿದೇಶಾಂಗ ಸಚಿವ ಖುರೇಶಿ ಅವರೊಂದಿಗೆ ಮಾತನಾಡಿದ್ದು, ಪಾಕಿಸ್ತಾನದಿಂದ ಕಾರ್ಯಾಚರಿಸುತ್ತಿರುವ ಜೈಷ್ ಎ ಮೊಹಮ್ಮದ್ ಹಾಗೂ ಇತರೆ ಉಗ್ರ ಸಂಘಟನೆಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಸ್ತಾಪಿಸಿದ್ದೇವೆ. ಎಲ್ಲ ಉಗ್ರರ ವಿರುದ್ಧ ದೃಢವಾದ ಕ್ರಮ ತೆಗೆದುಕೊಳ್ಳುವಂತೆ ವಿದೇಶಾಂಗ ಸಚಿವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Pakistan assures US to deal firmly with terrorists

ಭಾರತದ ವಿದೇಶಾಂಗ ಕಾರ್ಯದರ್ಶಿ ವಿಜಯ್‌ ಗೋಖಲೆ ಅಮೆರಿಕ ಭೇಟಿಯಲ್ಲಿರುವ ಸಂದರ್ಭದಲ್ಲಿಯೇ ಬೋಲ್ಟನ್‌ ಖುರೇಷಿ ಅವರನ್ನು ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಅಂತೆಯೇ ವಿಜಯ್‌ ಗೋಖಲೆ ಅಮೆರಿಕ ಪ್ರವಾಸದ ಮೊದಲ ದಿನ, ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್‌ ಪಾಂಪಿಯೊ ಅವರನ್ನೂ ಭೇಟಿ ಮಾಡಿ ಚರ್ಚಿಸಿದ್ದಾರೆ.

ಉಗ್ರರ ವಿರುದ್ಧ ಹೋರಾಟದಲ್ಲಿ ಭಾರತ ಸರ್ಕಾರ ಮತ್ತು ಜನರೊಂದಿಗೆ ಅಮೆರಿಕ ನಿಲ್ಲುತ್ತದೆ ಎಂದು ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಪಾಂಪಿಯೋ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+