ಅಮೇರಿಕದಲ್ಲಿ ಹಿಂಸಾತ್ಮಕ ಪ್ರತಿಭಟನೆ: 40 ಸಿಟಿಗಳಲ್ಲಿ ಕರ್ಫ್ಯೂ ಜಾರಿ.!

ವಾಷಿಂಗ್ಟನ್, ಜೂನ್ 1: ಬ್ಲಾಕ್ ಮ್ಯಾನ್ ಜಾರ್ಜ್ ಫ್ಲಾಯ್ಡ್ ಸಾವಿನ ಬಳಿಕ ಮಿನ್ನಿಯಾಪೊಲಿಸ್ ನಗರವೂ ಸೇರಿದಂತೆ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ ಹಲವು ನಗರಗಳಲ್ಲಿ ಪ್ರತಿಭಟನೆಯ ಕಾವು ಏರಿದೆ.

Recommended Video

      ಎಲ್ಲಾ ಕ್ರಿಕೆಟ್ ಪಂದ್ಯಗಳು ಮೊದಲೇ ಫಿಕ್ಸ್ ಆಗಿರುತ್ತವೆಯೇ ? | Oneindia Kannada

      ಕಳೆದ ಆರು ದಿನಗಳಿಂದಲೂ ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿದ್ದು, ಹೋಟೆಲ್, ವಾಣಿಜ್ಯ ಮಳಿಗೆಗಳು ಬೆಂಕಿಗೆ ಆಹುತಿ ಆಗಿವೆ. ಪ್ರತಿಭಟನೆ ಹೆಸರಿನಲ್ಲಿ ಕೆಲವರು ದುಬಾರಿ ವಸ್ತುಗಳ ಅಂಗಡಿಗಳನ್ನು ಲೂಟಿ ಹೊಡೆಯುತ್ತಿದ್ದಾರೆ.

      ಹಲವು ಕಡೆ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ಉಂಟಾಗಿದ್ದು, ಪರಿಸ್ಥಿತಿ ಕೈ ಮೀರುತ್ತಿರುವ ಕಾರಣ ವಾಷಿಂಗ್ಟನ್ ಡಿ.ಸಿ ಸೇರಿದಂತೆ 40 ಸಿಟಿಗಳಲ್ಲಿ ಕರ್ಫ್ಯೂ ಹೇರಲಾಗಿದೆ.

      ವಾಷಿಂಗ್ಟನ್ ಡಿ.ಸಿ ಸೇರಿದಂತೆ 15 ಸ್ಟೇಟ್ ಗಳಲ್ಲಿ ಶಾಂತಿ ಸ್ಥಾಪಿಸಲು 5,000 ನ್ಯಾಷನಲ್ ಗಾರ್ಡ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

      1400 ಕ್ಕೂ ಅಧಿಕ ಮಂದಿ ಬಂಧನ

      1400 ಕ್ಕೂ ಅಧಿಕ ಮಂದಿ ಬಂಧನ

      ಪ್ರತಿಭಟನೆ ಸಂಬಂಧ ಈವರೆಗೂಅಮೇರಿಕಾದಲ್ಲಿ 1400 ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ. ಹಿಂಸಾತ್ಮಕ ಪ್ರತಿಭಟನೆಯಿಂದಾಗಿ 20 ಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

      ಬೆಂಕಿಗೆ ಆಹುತಿಯಾದ ಪೊಲೀಸ್ ಕಾರುಗಳು

      ಬೆಂಕಿಗೆ ಆಹುತಿಯಾದ ಪೊಲೀಸ್ ಕಾರುಗಳು

      ಹಲವು ಪೊಲೀಸ್ ಅಧಿಕಾರಿಗಳ ಮೇಲೆ ಪ್ರತಿಭಟನಾಕಾರರು ಬಾಟಲ್ ಗಳನ್ನು ತೂರಿದ್ದಾರೆ. ಪೊಲೀಸ್ ಕಾರ್ ಗಳು ಬೆಂಕಿಗೆ ಆಹುತಿಯಾಗಿವೆ.

      ಸ್ಯಾಂಟಾ ಮೊನಿಕಾ, ಕ್ಯಾಲಿಫೋರ್ನಿಯಾದಲ್ಲಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ರಬ್ಬರ್ ಬುಲೆಟ್, ಅಶ್ರುವಾಯು ಪ್ರಯೋಗಿಸಿದರು.

      ಪ್ರತಿಭಟನಾ ಸಮಯದಲ್ಲಿ ಬಂಕರ್ ನಲ್ಲಿದ್ದ ಡೊನಾಲ್ಡ್ ಟ್ರಂಪ್

      ಪ್ರತಿಭಟನಾ ಸಮಯದಲ್ಲಿ ಬಂಕರ್ ನಲ್ಲಿದ್ದ ಡೊನಾಲ್ಡ್ ಟ್ರಂಪ್

      ಭಾನುವಾರ ವೈಟ್ ಹೌಸ್ ಮುಂದೆಯೂ ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿತು. ಪರಿಣಾಮ, 11 ಮೆಟ್ರೋಪಾಲಿಟನ್ ಪೊಲೀಸ್ ಡಿಪಾರ್ಟ್ಮೆಂಟ್ ಅಧಿಕಾರಿಗಳೂ ಸೇರಿದಂತೆ 60 ಸೀಕ್ರೆಟ್ ಸರ್ವೀಸ್ ಸಿಬ್ಬಂದಿ ಗಾಯಗೊಂಡರು.

      ವೈಟ್ ಹೌಸ್ ಮುಂದೆ ಪ್ರತಿಭಟನೆ ನಡೆದ ಸಂದರ್ಭದಲ್ಲಿ, ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸ್ವಲ್ಪ ಸಮಯದವರೆಗೆ ವೈಟ್ ಹೌಸ್ ನ ಅಂಡರ್ ಗ್ರೌಂಡ್ ಬಂಕರ್ ನಲ್ಲಿ ಇರಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

      ಗುಡುಗಿದ ಡೊನಾಲ್ಡ್ ಟ್ರಂಪ್

      ''ನ್ಯಾಷನಲ್ ಗಾರ್ಡ್ ಗಳಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ'' ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದಾರೆ.

      ಜೊತೆಗೆ Antifa (Anti-Fascists) ಅನ್ನು ಭಯೋತ್ಪಾದಕ ಸಂಘಟನೆಯಾಗಿ ಡೆಸಿಗ್ನೇಟ್ ಮಾಡುವುದಾಗಿ ಡೊನಾಲ್ಡ್ ಟ್ರಂಪ್ ಟ್ವೀಟಿಸಿದ್ದಾರೆ.

      ಕೆಲಸದಿಂದ ವಜಾಗೊಂಡ ಪೊಲೀಸ್

      ಕೆಲಸದಿಂದ ವಜಾಗೊಂಡ ಪೊಲೀಸ್

      ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಕುತ್ತಿಗೆ ಮೇಲೆ ಬಲವಾಗಿ ಮಂಡಿಯೂರಿ ಕ್ರೌರ್ಯ ಮೆರೆದಿದ್ದ 'ಬಿಳಿ' ಪೊಲೀಸ್ ಡೆರೆಕ್ ಚೌವಿನ್ ವಿರುದ್ಧ ಮರ್ಡರ್ ಕೇಸ್ ಹಾಕಲಾಗಿದ್ದು, ಬಂಧಿಸಲಾಗಿದೆ. ಹಾಗೇ, ಅವರನ್ನ ಕೆಲಸದಿಂದ ವಜಾಗೊಳಿಸಲಾಗಿದೆ.

      ಜಾರ್ಜ್ ಫ್ಲಾಯ್ಡ್ ಸತ್ತಿದ್ದು ಹೇಗೆ.?

      ಜಾರ್ಜ್ ಫ್ಲಾಯ್ಡ್ ಸತ್ತಿದ್ದು ಹೇಗೆ.?

      ಕಳೆದ ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ 46 ವರ್ಷ ವಯಸ್ಸಿನ ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಮೇಲೆ 'ಬಿಳಿ' ಪೊಲೀಸರು ಅಟ್ಟಹಾಸ ಮೆರೆದಿದ್ದರು. ರಸ್ತೆ ಮೇಲೆ ಬಿದ್ದ 'ಬ್ಲಾಕ್' ಜಾರ್ಜ್ ಫ್ಲಾಯ್ಡ್ ಕುತ್ತಿಗೆಯ ಮೇಲೆ 'ಬಿಳಿ' ಪೊಲೀಸ್ ಹಲವು ನಿಮಿಷಗಳ ಕಾಲ ಬಲವಾಗಿ ಮಂಡಿಯೂರಿದ್ದ ಪರಿಣಾಮ, ಜಾರ್ಜ್ ಫ್ಲಾಯ್ಡ್ ಸಾವನ್ನಪ್ಪಿದ್ದರು.

      ''ಉಸಿರಾಡಲು ಸಾಧ್ಯವಾಗುತ್ತಿಲ್ಲ'', ''ನನ್ನನ್ನು ಕೊಲ್ಲಬೇಡಿ'' ಎಂದು ಪದೇ ಪದೇ ಜಾರ್ಜ್ ಫ್ಲಾಯ್ಡ್ ಹೇಳುತ್ತಿದ್ದರೂ, ಆತನ ಕುತ್ತಿಗೆಯ ಮೇಲಿಂದ 'ವೈಟ್' ಪೊಲೀಸ್ ಕಾಲು ತೆಗೆಯಲಿಲ್ಲ.

      ಜಾರ್ಜ್ ಫ್ಲಾಯ್ಡ್ ಮೇಲೆ ಪೊಲೀಸರು ತೋರಿದ ಮೃಗೀಯ ವರ್ತನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

      ವಿಡಿಯೋ ನೋಡಿದ ಜನತೆ ಬಿಳಿ ಪೊಲೀಸರ ಅಟ್ಟಹಾಸವನ್ನು ಖಂಡಿಸಿ ಪ್ರತಿಭಟನೆ ಆರಂಭಿಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+