ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿಂಸಾತ್ಮಕ ಪ್ರತಿಭಟನೆ: ಅಮೇರಿಕಾ ಪೊಲೀಸರ ಮೇಲೆ ಗುಂಡಿನ ದಾಳಿ.!

|
Google Oneindia Kannada News

ವಾಷಿಂಗ್ಟನ್, ಜೂನ್ 3: ಬ್ಲಾಕ್ ಮ್ಯಾನ್ ಜಾರ್ಜ್ ಫ್ಲಾಯ್ಡ್ ಹತ್ಯೆಯ ಬಳಿಕ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದಲ್ಲಿ ಜನಾಂಗೀಯ ತಾರತಮ್ಯದ ವಿರುದ್ಧದ ಹೋರಾಟ ಭುಗಿಲೆದ್ದಿದೆ.

Recommended Video

ಏಕದಿನದಲ್ಲಿ ವೇಗದ 10,000 ರನ್ ದಾಖಲೆ ಬರೆದ ಟಾಪ್ 5 ಬ್ಯಾಟ್ಸ್‌ಮನ್‌ಗಳು | virat kohli | Oneindia Kannada

ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಸಾವಿಗೆ ಕಾರಣವಾದ 'ಬಿಳಿ' ಪೊಲೀಸರ ಅಟ್ಟಹಾಸದ ವಿರುದ್ಧ ಮೊದಲು ಶಾಂತವಾಗಿ ಆರಂಭವಾದ ಪ್ರತಿಭಟನೆ ಬಳಿಕ ಹಿಂಸಾಚಾರದ ರೂಪ ಪಡೆದುಕೊಂಡಿತು.

ಅಮೇರಿಕಾದಲ್ಲಿ ಹಿಂಸಾತ್ಮಕ ಪ್ರತಿಭಟನೆ: ಧಗ ಧಗ ಹೊತ್ತಿಯುರಿದ ಭಾರತೀಯ ಹೋಟೆಲ್!ಅಮೇರಿಕಾದಲ್ಲಿ ಹಿಂಸಾತ್ಮಕ ಪ್ರತಿಭಟನೆ: ಧಗ ಧಗ ಹೊತ್ತಿಯುರಿದ ಭಾರತೀಯ ಹೋಟೆಲ್!

ಒಂದು ವಾರದಿಂದ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಯನ್ನು ನಿಯಂತ್ರಿಸಲು ನ್ಯಾಷನಲ್ ಗಾರ್ಡ್ ಗಳನ್ನು ನಿಯೋಜಿಸಲಾಗಿದೆ. ಹಲವು ನಗರಗಳಲ್ಲಿ ಕರ್ಫ್ಯೂ ಹೇರಲಾಗಿದೆ. ಸಾವಿರಾರು ಮಂದಿಯನ್ನು ಬಂಧಿಸಲಾಗಿದೆ. ಹೀಗಿದ್ದರೂ, ಅಮೇರಿಕಾದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿಲ್ಲ.

ಛೇ.. ಛೇ.. ಇದಕ್ಕೆ ಪ್ರತಿಭಟನೆ ಅಂತಾರಾ.? ಸಾವಿಗೆ ನ್ಯಾಯ ದೊರಕಿಸುವುದು ಹೀಗಾ.?ಛೇ.. ಛೇ.. ಇದಕ್ಕೆ ಪ್ರತಿಭಟನೆ ಅಂತಾರಾ.? ಸಾವಿಗೆ ನ್ಯಾಯ ದೊರಕಿಸುವುದು ಹೀಗಾ.?

ಸೋಮವಾರ ತಡರಾತ್ರಿ ಸೇಂಟ್ ಲೂಯಿಸ್ ನಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ. ಪರಿಣಾಮ, ನಾಲ್ಕು ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಅಧಿಕಾರಿಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪೊಲೀಸ್ ಅಧಿಕಾರಿಯ ಸ್ಥಿತಿ ಗಂಭೀರ

ಪೊಲೀಸ್ ಅಧಿಕಾರಿಯ ಸ್ಥಿತಿ ಗಂಭೀರ

ಲಾಸ್ ವೇಗಾಸ್ ನಲ್ಲಿ ಪ್ರತಿಭಟನೆ ನಡೆದ ವೇಳೆ ಪೊಲೀಸ್ ಅಧಿಕಾರಿಯೊಬ್ಬರಿಗೆ ಗುಂಡು ಹಾರಿಸಲಾಗಿದೆ. ಬ್ರಾಂಕ್ಸ್ ನಲ್ಲಿ ಪ್ರತಿಭಟನಾಕಾರರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಓರ್ವ ಪೊಲೀಸ್ ಅಧಿಕಾರಿಯ ಸ್ಥಿತಿ ಗಂಭೀರವಾಗಿದೆ ಅಂತ ಪೊಲೀಸರು ತಿಳಿಸಿದ್ದಾರೆ.

''ಪೊಲೀಸ್ ಅಧಿಕಾರಿಗಳ ಮೇಲೆ ಕಲ್ಲು ತೂರಲಾಗಿದೆ. ಪಟಾಕಿ ಹಾರಿಸಲಾಗಿದೆ. ಇಲ್ಲಿ ಏನು ನಡೆಯುತ್ತಿದೆ.? ಇದೆಲ್ಲ ಹೇಗೆ ಸಾಧ್ಯ.? ಎಂಬುದೇ ಗೊತ್ತಾಗುತ್ತಿಲ್ಲ. ಜಾರ್ಜ್ ಫ್ಲಾಯ್ಡ್ ಎಲ್ಲೋ ಹತ್ಯೆಗೀಡಾರೆ, ಅಮೇರಿಕಾದಾದ್ಯಂತ ಹಿಂಸಾಚಾರ ನಡೆಯುತ್ತಿದೆ'' ಎಂದು ಪೊಲೀಸ್ ಅಧಿಕಾರಿಯೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ಅಂಗಡಿಗಳು ಲೂಟಿ

ಅಂಗಡಿಗಳು ಲೂಟಿ

ನ್ಯೂಯಾರ್ಕ್ ಸಿಟಿಯಲ್ಲಿ ಪ್ರತಿಭಟನಾಕಾರರು ಕಿಟಕಿ, ಗಾಜಿನ ಬಾಗಿಲುಗಳನ್ನು ಒಡೆದು ದುಬಾರಿ ವಸ್ತುಗಳಿರುವ ಅಂಗಡಿಗಳನ್ನು ಲೂಟಿ ಹೊಡೆದಿದ್ದಾರೆ. ಲಾಸ್ ಏಂಜಲೀಸ್ ನಲ್ಲಿರುವ ಮಾಲ್ ಬೆಂಕಿಗೆ ಆಹುತಿಯಾಗಿದೆ.

ಅಮೇರಿಕಾದಲ್ಲಿ ಅಮಾನವೀಯ ಘಟನೆ: ಬಿಳಿ ಪೊಲೀಸರ ಅಟ್ಟಹಾಸಕ್ಕೆ ಬಲಿಯಾದ ಕಪ್ಪು ವರ್ಣೀಯಅಮೇರಿಕಾದಲ್ಲಿ ಅಮಾನವೀಯ ಘಟನೆ: ಬಿಳಿ ಪೊಲೀಸರ ಅಟ್ಟಹಾಸಕ್ಕೆ ಬಲಿಯಾದ ಕಪ್ಪು ವರ್ಣೀಯ

''ಲೂಟಿ ಮಾಡುವವರಿಗೆ, ಕೊಲೆಗಡುಕರಿಗೆ ನ್ಯೂಯಾರ್ಕ್ ಸಿಟಿ ಬಲಿಯಾಗಿದೆ. ನ್ಯಾಷನಲ್ ಗಾರ್ಡ್ ಗಳನ್ನು ನಿಯೋಜಿಸಲು ನನ್ನ ಪ್ರಸ್ತಾಪವನ್ನು ಅಲ್ಲಿನ ಗವರ್ನರ್ ತಿರಸ್ಕರಿಸಿದ್ದರು. ಈಗ ನ್ಯೂಯಾರ್ಕ್ ನಗರದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ'' ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದಾರೆ.

29 ಸ್ಟೇಟ್ ಗಳಲ್ಲಿ 18 ಸಾವಿರ ನ್ಯಾಷನಲ್ ಗಾರ್ಡ್ ನಿಯೋಜನೆ

29 ಸ್ಟೇಟ್ ಗಳಲ್ಲಿ 18 ಸಾವಿರ ನ್ಯಾಷನಲ್ ಗಾರ್ಡ್ ನಿಯೋಜನೆ

''ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದಾದ್ಯಂತ ಹಿಂಸಾಚಾರ ಕಡಿಮೆಯಾಗಿದೆ. ಪ್ರತಿಭಟನಾ ಚಟುವಟಿಕೆ ನಿರಂತರವಾಗಿದ್ದರೂ, ಹೆಚ್ಚಾಗುತ್ತಿಲ್ಲ. ಪ್ರತಿಭಟನೆಯಿಂದ ನ್ಯಾಷನಲ್ ಗಾರ್ಡ್ಸ್ ಗಾಯಗೊಂಡಿಲ್ಲ'' ಎಂದು ನ್ಯಾಷನಲ್ ಗಾರ್ಡ್ ನ ಮುಖ್ಯಸ್ಥ ಜೆನರಲ್ ಜೋಸೆಫ್ ಲೆಂಗ್ಯೆಲ್ ತಿಳಿಸಿದ್ದಾರೆ.

ಸದ್ಯ ಅಮೇರಿಕಾ 29 ಸ್ಟೇಟ್ ಗಳಲ್ಲಿ 18 ಸಾವಿರ ನ್ಯಾಷನಲ್ ಗಾರ್ಡ್ ಗಳನ್ನು ನಿಯೋಜಿಸಲಾಗಿದೆ.

ಹತ್ಯೆ ಖಂಡಿಸಿದ್ದ ಡೊನಾಲ್ಡ್ ಟ್ರಂಪ್

ಹತ್ಯೆ ಖಂಡಿಸಿದ್ದ ಡೊನಾಲ್ಡ್ ಟ್ರಂಪ್

ಬರುವ ನವೆಂಬರ್ ನಲ್ಲಿ ಅಮೇರಿಕಾದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಹತ್ಯೆಯನ್ನು ಡೊನಾಲ್ಡ್ ಟ್ರಂಪ್ ಖಂಡಿಸಿದ್ದಾರೆ. ಜೊತೆಗೆ ಜಾರ್ಜ್ ಫ್ಲಾಯ್ಡ್ ಸಾವಿಗೆ ನ್ಯಾಯ ದೊರಕಿಸುವ ಭರವಸೆ ನೀಡಿದ್ದಾರೆ.

ಅಮೇರಿಕಾದಲ್ಲಿ ಇರುವ ಜನಾಂಗೀಯ ತಾರತಮ್ಯವನ್ನು ಸರಿಪಡಿಸಲು ಪ್ರಯತ್ನಿಸುವುದಾಗಿ ಅತ್ತ ಡೆಮಾಕ್ರೆಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಜೋ ಬಿಡೆನ್ ಪ್ರತಿಭಟನಾಕಾರರ ಮುಂದೆ ಪ್ರತಿಜ್ಞೆ ಮಾಡಿದ್ದಾರೆ.

ಜಾರ್ಜ್ ಫ್ಲಾಯ್ಡ್ ಸತ್ತಿದ್ದು ಹೇಗೆ.?

ಜಾರ್ಜ್ ಫ್ಲಾಯ್ಡ್ ಸತ್ತಿದ್ದು ಹೇಗೆ.?

ಮೇ 27 ರಂದು ರಾತ್ರಿ 8 ಗಂಟೆ ಸುಮಾರಿಗೆ 46 ವರ್ಷ ವಯಸ್ಸಿನ ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಮೇಲೆ 'ಬಿಳಿ' ಪೊಲೀಸರು ಅಟ್ಟಹಾಸ ಮೆರೆದಿದ್ದರು. ರಸ್ತೆ ಮೇಲೆ ಬಿದ್ದ 'ಬ್ಲಾಕ್' ಜಾರ್ಜ್ ಫ್ಲಾಯ್ಡ್ ಕುತ್ತಿಗೆಯ ಮೇಲೆ 'ಬಿಳಿ' ಪೊಲೀಸ್ ಹಲವು ನಿಮಿಷಗಳ ಕಾಲ ಬಲವಾಗಿ ಮಂಡಿಯೂರಿದ್ದ ಪರಿಣಾಮ, ಜಾರ್ಜ್ ಫ್ಲಾಯ್ಡ್ ಸಾವನ್ನಪ್ಪಿದ್ದರು.

''ಉಸಿರಾಡಲು ಸಾಧ್ಯವಾಗುತ್ತಿಲ್ಲ'', ''ನನ್ನನ್ನು ಕೊಲ್ಲಬೇಡಿ'' ಎಂದು ಪದೇ ಪದೇ ಜಾರ್ಜ್ ಫ್ಲಾಯ್ಡ್ ಹೇಳುತ್ತಿದ್ದರೂ, ಆತನ ಕುತ್ತಿಗೆಯ ಮೇಲಿಂದ 'ವೈಟ್' ಪೊಲೀಸ್ ಕಾಲು ತೆಗೆಯಲಿಲ್ಲ.

ಜಾರ್ಜ್ ಫ್ಲಾಯ್ಡ್ ಮೇಲೆ ಪೊಲೀಸರು ತೋರಿದ ಮೃಗೀಯ ವರ್ತನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ವಿಡಿಯೋ ನೋಡಿದ ಜನತೆ ಬಿಳಿ ಪೊಲೀಸರ ಅಟ್ಟಹಾಸವನ್ನು ಖಂಡಿಸಿ ಪ್ರತಿಭಟನೆ ಆರಂಭಿಸಿದರು.

ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಕುತ್ತಿಗೆ ಮೇಲೆ ಬಲವಾಗಿ ಮಂಡಿಯೂರಿ ಕ್ರೌರ್ಯ ಮೆರೆದಿದ್ದ 'ಬಿಳಿ' ಪೊಲೀಸ್ ಡೆರೆಕ್ ಚೌವಿನ್ ವಿರುದ್ಧ ಮರ್ಡರ್ ಕೇಸ್ ಹಾಕಿ ಬಂಧಿಸಲಾಗಿದೆ. ಹಾಗೇ, ಆತನನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

English summary
Protest Against George Floyd Death: Police officers were shot and wounded in St Louis and Las Vegas.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X