Breaking; ಟೆಕ್ಸಾಸ್ ಶಾಲೆಯಲ್ಲಿ ಗುಂಡಿನ ದಾಳಿ; 18 ಮಕ್ಕಳು ಸಾವು

ವಾಷಿಂಗ್ಟನ್, ಮೇ 25; ಟೆಕ್ಸಾಸ್‌ನ ಉವಾಲ್ಡೆಯಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಈ ಘಟನೆಯಲ್ಲಿ 18 ಮಕ್ಕಳು ಮತ್ತು ಒಬ್ಬರು ಶಿಕ್ಷಕರು ಸಾವನ್ನಪ್ಪಿದ್ದಾರೆ.

ಟೆಕ್ಸಾಸ್ ಗೌವರ್ನರ್ ಜಾರ್ಜ್ ಅಬಾಟ್ ಘಟನೆ ಕುರಿತು ಮಾಹಿತಿ ನೀಡಿದ್ದು, "ಗುಂಡಿನ ದಾಳಿ ನಡೆಸಿದ 18 ವರ್ಷದ ವಿದ್ಯಾರ್ಥಿಯನ್ನು ಪೊಲೀಸರು ಹತ್ಯೆ ಮಾಡಿದ್ದಾರೆ" ಎಂದು ಹೇಳಿದ್ದಾರೆ.

"ಗುಂಡಿನ ದಾಳಿನ ನಡೆಸಿದ ವಿದ್ಯಾರ್ಥಿ ಉವಾಲ್ಡೆಯಲ್ಲಿರುವ ಪ್ರಾಥಮಿಕ ಶಾಲೆಯ ಹತ್ತಿರದಲ್ಲಿರುವ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ" ಎಂದು ಪೊಲೀಸ್ ಮಾಹಿತಿ ನೀಡಿದರು.

Shooting In Texas School Gunman Kills 18 Students And One Teacher

ಅಮೆರಿಕ ಅಧ್ಯಕ್ಷ ಜೋ ಬೈಡನ್ ಟೆಕ್ಸಾಸ್‌ ಗೌವರ್ನರ್‌ಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ಪಡೆದರು. ಅಗತ್ಯವಿರುವ ಎಲ್ಲಾ ರೀತಿಯ ನೆರವನ್ನು ನೀಡುವುದಾಗಿ ಭರವಸೆ ನೀಡಿದರು.

2012ರಲ್ಲಿ ಕನೆಕ್ಟಿಕಟ್‌ನ ನ್ಯೂಟೌನ್‌ನಲ್ಲಿರುವ ಸ್ಯಾಂಡಿ ಹುಕ್ ಎಲಿಮೆಂಟರಿಯಲ್ಲಿ ನಡೆದ ಗುಂಡಿನ ದಾಳಿ ಬಳಿಕ ನಡೆದ ಅತಿ ದೊಡ್ಡ ದುರಂತ ಇದು ಎಂದು ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ.

ಶಾಲೆಯಲ್ಲಿ ಮೃತಪಟ್ಟ ಮಕ್ಕಳಿಗೆ ಸಂತಾಪ ಸೂಚಿಸಲು ಶ್ವೇತ ಭವನ ಸೇರಿದಂತೆ ಇತರ ಸಾರ್ವಜನಿಕ ಸ್ಥಳದಲ್ಲಿ ರಾಷ್ಟ್ರಧ್ವಜವನ್ನು ಶನಿವಾರದ ತನಕ ಅರ್ಧಕ್ಕೆ ಹಾರಿಸಲು ಜೋ ಬೈಡನ್ ಸೂಚನೆ ನೀಡಿದ್ದಾರೆ.

ಗುಂಡಿನ ದಾಳಿಯಲ್ಲಿ 18 ವಿದ್ಯಾರ್ಥಿಗಳು, ಒಬ್ಬರು ಶಿಕ್ಷಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗುಂಡಿನ ದಾಳಿ ನಡೆಸುವುಕ್ಕೂ ಮೊದಲು ವಿದ್ಯಾರ್ಥಿ ಅಜ್ಜಿಯ ಜೊತೆ ಜಗಳವಾಡಿದ್ದ ಎಂಬ ಮಾಹಿತಿ ಸಿಕ್ಕಿದೆ.

ಶಾಲೆಯಲ್ಲಿ ಗುಂಡಿನ ದಾಳಿ ನಡೆಸಿದ ವಿದ್ಯಾರ್ಥಿಯ ಸಂಬಂಧಿ ಸಹ ಅದೇ ಶಾಲೆಯಲ್ಲಿ ಓದುತ್ತಿದ್ದು, ಅವರಿಗೂ ಗಾಯಗಳಾಗಿವೆ. ವಿದ್ಯಾರ್ಥಿ ಕೌಟುಂಬಿಕ ಹಿನ್ನಲೆ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಲ್ಲಿ 66 ವರ್ಷದ ವೃದ್ಧೆ ಮತ್ತು 10 ವರ್ಷದ ಬಾಲಕಿ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಎರಡು ಆಸ್ಪತ್ರೆಗಳಲ್ಲಿ 10ಕ್ಕೂ ಅಧಿಕ ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+