ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಟೆಕ್ಸಾಸ್ ಶಾಲೆಯಲ್ಲಿ ಗುಂಡಿನ ದಾಳಿ; 18 ಮಕ್ಕಳು ಸಾವು

|
Google Oneindia Kannada News

ವಾಷಿಂಗ್ಟನ್, ಮೇ 25; ಟೆಕ್ಸಾಸ್‌ನ ಉವಾಲ್ಡೆಯಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಈ ಘಟನೆಯಲ್ಲಿ 18 ಮಕ್ಕಳು ಮತ್ತು ಒಬ್ಬರು ಶಿಕ್ಷಕರು ಸಾವನ್ನಪ್ಪಿದ್ದಾರೆ.

ಟೆಕ್ಸಾಸ್ ಗೌವರ್ನರ್ ಜಾರ್ಜ್ ಅಬಾಟ್ ಘಟನೆ ಕುರಿತು ಮಾಹಿತಿ ನೀಡಿದ್ದು, "ಗುಂಡಿನ ದಾಳಿ ನಡೆಸಿದ 18 ವರ್ಷದ ವಿದ್ಯಾರ್ಥಿಯನ್ನು ಪೊಲೀಸರು ಹತ್ಯೆ ಮಾಡಿದ್ದಾರೆ" ಎಂದು ಹೇಳಿದ್ದಾರೆ.

Breaking news: ದಕ್ಷಿಣ ಕ್ಯಾಲಿಫೋರ್ನಿಯಾದ ಚರ್ಚ್‌ನಲ್ಲಿ ಗುಂಡಿನ ದಾಳಿ, ಓರ್ವ ಸಾವುBreaking news: ದಕ್ಷಿಣ ಕ್ಯಾಲಿಫೋರ್ನಿಯಾದ ಚರ್ಚ್‌ನಲ್ಲಿ ಗುಂಡಿನ ದಾಳಿ, ಓರ್ವ ಸಾವು

"ಗುಂಡಿನ ದಾಳಿನ ನಡೆಸಿದ ವಿದ್ಯಾರ್ಥಿ ಉವಾಲ್ಡೆಯಲ್ಲಿರುವ ಪ್ರಾಥಮಿಕ ಶಾಲೆಯ ಹತ್ತಿರದಲ್ಲಿರುವ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ" ಎಂದು ಪೊಲೀಸ್ ಮಾಹಿತಿ ನೀಡಿದರು.

ಬೆಂಗಳೂರು ಆಸಿಡ್ ದಾಳಿ ಪ್ರಕರಣ: ಆರೋಪಿ ನಾಗೇಶ್ ಆಸಿಡ್ ಖರೀದಿಸಿದ್ದು ಹೇಗೆ..? ಬೆಂಗಳೂರು ಆಸಿಡ್ ದಾಳಿ ಪ್ರಕರಣ: ಆರೋಪಿ ನಾಗೇಶ್ ಆಸಿಡ್ ಖರೀದಿಸಿದ್ದು ಹೇಗೆ..?

Shooting In Texas School Gunman Kills 18 Students And One Teacher

ಅಮೆರಿಕ ಅಧ್ಯಕ್ಷ ಜೋ ಬೈಡನ್ ಟೆಕ್ಸಾಸ್‌ ಗೌವರ್ನರ್‌ಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ಪಡೆದರು. ಅಗತ್ಯವಿರುವ ಎಲ್ಲಾ ರೀತಿಯ ನೆರವನ್ನು ನೀಡುವುದಾಗಿ ಭರವಸೆ ನೀಡಿದರು.

ರಷ್ಯನ್ ಯುದ್ಧೋಪಕರಣ ಖರೀದಿ ಭಾರತಕ್ಕೆ ಒಳಿತಲ್ಲ: ಅಮೆರಿಕ ಸಲಹೆ ರಷ್ಯನ್ ಯುದ್ಧೋಪಕರಣ ಖರೀದಿ ಭಾರತಕ್ಕೆ ಒಳಿತಲ್ಲ: ಅಮೆರಿಕ ಸಲಹೆ

2012ರಲ್ಲಿ ಕನೆಕ್ಟಿಕಟ್‌ನ ನ್ಯೂಟೌನ್‌ನಲ್ಲಿರುವ ಸ್ಯಾಂಡಿ ಹುಕ್ ಎಲಿಮೆಂಟರಿಯಲ್ಲಿ ನಡೆದ ಗುಂಡಿನ ದಾಳಿ ಬಳಿಕ ನಡೆದ ಅತಿ ದೊಡ್ಡ ದುರಂತ ಇದು ಎಂದು ಅಮೆರಿಕದ ಮಾಧ್ಯಮಗಳು ವರದಿ ಮಾಡಿವೆ.

ಶಾಲೆಯಲ್ಲಿ ಮೃತಪಟ್ಟ ಮಕ್ಕಳಿಗೆ ಸಂತಾಪ ಸೂಚಿಸಲು ಶ್ವೇತ ಭವನ ಸೇರಿದಂತೆ ಇತರ ಸಾರ್ವಜನಿಕ ಸ್ಥಳದಲ್ಲಿ ರಾಷ್ಟ್ರಧ್ವಜವನ್ನು ಶನಿವಾರದ ತನಕ ಅರ್ಧಕ್ಕೆ ಹಾರಿಸಲು ಜೋ ಬೈಡನ್ ಸೂಚನೆ ನೀಡಿದ್ದಾರೆ.

ಗುಂಡಿನ ದಾಳಿಯಲ್ಲಿ 18 ವಿದ್ಯಾರ್ಥಿಗಳು, ಒಬ್ಬರು ಶಿಕ್ಷಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗುಂಡಿನ ದಾಳಿ ನಡೆಸುವುಕ್ಕೂ ಮೊದಲು ವಿದ್ಯಾರ್ಥಿ ಅಜ್ಜಿಯ ಜೊತೆ ಜಗಳವಾಡಿದ್ದ ಎಂಬ ಮಾಹಿತಿ ಸಿಕ್ಕಿದೆ.

ಶಾಲೆಯಲ್ಲಿ ಗುಂಡಿನ ದಾಳಿ ನಡೆಸಿದ ವಿದ್ಯಾರ್ಥಿಯ ಸಂಬಂಧಿ ಸಹ ಅದೇ ಶಾಲೆಯಲ್ಲಿ ಓದುತ್ತಿದ್ದು, ಅವರಿಗೂ ಗಾಯಗಳಾಗಿವೆ. ವಿದ್ಯಾರ್ಥಿ ಕೌಟುಂಬಿಕ ಹಿನ್ನಲೆ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಲ್ಲಿ 66 ವರ್ಷದ ವೃದ್ಧೆ ಮತ್ತು 10 ವರ್ಷದ ಬಾಲಕಿ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಎರಡು ಆಸ್ಪತ್ರೆಗಳಲ್ಲಿ 10ಕ್ಕೂ ಅಧಿಕ ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

English summary
18 year old man opened fire at an elementary school in Uvalde, Texas. 18 children and a teacher killed in shooting. Police killed gunman.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X