Just in: ಅಮೆರಿಕದಲ್ಲಿ ಮತ್ತೆ ಶೂಟೌಟ್, ಹಲವು ಜನರು ಸಾವು
ವಾಷಿಂಗ್ಟನ್, ಆ.02: ಅಮೆರಿಕಾದ ಈಶಾನ್ಯ ವಾಷಿಂಗ್ಟನ್‌ನಲ್ಲಿ ಸೋಮವಾರ ರಾತ್ರಿ ಅನೇಕ ಜನರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಫ್ ಸ್ಟ್ರೀಟ್ ನಾರ್ತ್ ಈಸ್ಟ್‌ನ 1500 ಬ್ಲಾಕ್‌ನಲ್ಲಿ ರಾತ್ರಿ ಶೂಟೌಟ್ ವರದಿಯಾಗಿದೆ ಎಂದು ಅಗ್ನಿಶಾಮಕ ಇಲಾಖೆಯ ವಕ್ತಾರ ವಿಟೊ ಮ್ಯಾಗಿಯೊಲೊ ಅವರನ್ನು ಉಲ್ಲೇಖಿಸಿ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.
ಮೆಟ್ರೋಪಾಲಿಟನ್ ಪೋಲೀಸ್ ಇಲಾಖೆಯ ಟ್ವೀಟ್ ಪ್ರಕಾರ, ಅನೇಕ ಮಂದಿ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಆದರೆ, ಪೊಲೀಸರು ಮೃತರ ಸಂಖ್ಯೆಗಳನ್ನು ಬಹಿರಂಗಪಡಿಸಲಿಲ್ಲ. ಇನ್ನು ಮೃತರ ಗುರುತು ಪತ್ತೆಯಾಗಿಲ್ಲ. ಘಟನೆಯಲ್ಲಿ ಯಾವುದೇ ಶಂಕಿತರ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ.

ದಿ ವಾಷಿಂಗ್ಟನ್ ಪೋಸ್ಟ್ ವರದಿ ಪ್ರಕಾರ, ಘಟನಾ ಸ್ಥಳದಲ್ಲಿ ಆಂಬ್ಯುಲೆನ್ಸ್‌ಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿವೆ. ಸ್ಥಳದಲ್ಲಿ ನೆರೆದಿದ್ದ ಸ್ಥಳೀಯರೊಬ್ಬರು ಕನಿಷ್ಠ 15 ಗುಂಡೇಟುಗಳನ್ನು ಕೇಳಿದ್ದಾಗಿ ತಿಳಿಸಿದ್ದಾರೆ.
ಯುನೈಟೆಡ್ ಸ್ಟೇಟ್ಸ್‌ನಲ್ಲಿ ಹೆಚ್ಚುತ್ತಿರುವ ಬಂದೂಕು ಹಿಂಸಾಚಾರದ ಘಟನೆಗಳ ಬಗ್ಗೆ ಆತಂಕ ಹೊರ ಹಾಕಿರುವ ಅಧ್ಯಕ್ಷ ಜೋ ಬಿಡೆನ್, ಮಕ್ಕಳನ್ನು ಮತ್ತು ಕುಟುಂಬಗಳನ್ನು ರಕ್ಷಿಸುವ ಸಲುವಾಗಿ US ಆಕ್ರಮಣಕಾರಿ ಶಸ್ತ್ರಾಸ್ತ್ರಗಳನ್ನು ನಿಷೇಧಿಸುವ ಅಗತ್ಯವಿದೆ. ಅವುಗಳನ್ನು ಹೊಂದು ವಯಸ್ಸನ್ನು 18 ರಿಂದ 21 ಕ್ಕೆ ಹೆಚ್ಚಿಸುವ ಅಗತ್ಯವಿದೆ' ಎಂದು ಹೇಳಿದ್ದಾರೆ.
ಇತ್ತೀಚಿನ ಘಟನೆಗಳಲ್ಲಿ, ಫ್ಲೋರಿಡಾದ ಒರ್ಲ್ಯಾಂಡೊದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯ ನಂತರ ಭಾನುವಾರ 7 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪರಿಚಿತ ದುಷ್ಕರ್ಮಿಯೊಬ್ಬ ಬಂದೂಕನ್ನು ಹೊರತೆಗೆದು ಗುಂಪಿನತ್ತ ಗುಂಡು ಹಾರಿಸಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಸಿಎನ್‌ಎನ್ ವರದಿ ಮಾಡಿದೆ.
Recommended Video
ಟೆಕ್ಸಾಸ್‌ನ ಹಾಲ್ಟೋಮ್ ನಗರದಲ್ಲಿ ಶನಿವಾರ ಇದೇ ರೀತಿಯ ಘಟನೆ ನಡೆದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಅಧಿಕಾರಿಗಳು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಒಬ್ಬ ಮಹಿಳೆ ಮನೆಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಮತ್ತೊಬ್ಬ ವ್ಯಕ್ತಿಯನ್ನು ಮನೆಯ ಡ್ರೈವೇನಲ್ಲಿ ಗುಂಡು ಹಾರಿಸಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications