ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Just in: ಅಮೆರಿಕದಲ್ಲಿ ಮತ್ತೆ ಶೂಟೌಟ್, ಹಲವು ಜನರು ಸಾವು

|
Google Oneindia Kannada News

ವಾಷಿಂಗ್ಟನ್, ಆ.02: ಅಮೆರಿಕಾದ ಈಶಾನ್ಯ ವಾಷಿಂಗ್ಟನ್‌ನಲ್ಲಿ ಸೋಮವಾರ ರಾತ್ರಿ ಅನೇಕ ಜನರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಫ್ ಸ್ಟ್ರೀಟ್ ನಾರ್ತ್ ಈಸ್ಟ್‌ನ 1500 ಬ್ಲಾಕ್‌ನಲ್ಲಿ ರಾತ್ರಿ ಶೂಟೌಟ್ ವರದಿಯಾಗಿದೆ ಎಂದು ಅಗ್ನಿಶಾಮಕ ಇಲಾಖೆಯ ವಕ್ತಾರ ವಿಟೊ ಮ್ಯಾಗಿಯೊಲೊ ಅವರನ್ನು ಉಲ್ಲೇಖಿಸಿ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.

ಮೆಟ್ರೋಪಾಲಿಟನ್ ಪೋಲೀಸ್ ಇಲಾಖೆಯ ಟ್ವೀಟ್ ಪ್ರಕಾರ, ಅನೇಕ ಮಂದಿ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಆದರೆ, ಪೊಲೀಸರು ಮೃತರ ಸಂಖ್ಯೆಗಳನ್ನು ಬಹಿರಂಗಪಡಿಸಲಿಲ್ಲ. ಇನ್ನು ಮೃತರ ಗುರುತು ಪತ್ತೆಯಾಗಿಲ್ಲ. ಘಟನೆಯಲ್ಲಿ ಯಾವುದೇ ಶಂಕಿತರ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ.

Shooting In US Multiple People Reported Dead

ದಿ ವಾಷಿಂಗ್ಟನ್ ಪೋಸ್ಟ್ ವರದಿ ಪ್ರಕಾರ, ಘಟನಾ ಸ್ಥಳದಲ್ಲಿ ಆಂಬ್ಯುಲೆನ್ಸ್‌ಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿವೆ. ಸ್ಥಳದಲ್ಲಿ ನೆರೆದಿದ್ದ ಸ್ಥಳೀಯರೊಬ್ಬರು ಕನಿಷ್ಠ 15 ಗುಂಡೇಟುಗಳನ್ನು ಕೇಳಿದ್ದಾಗಿ ತಿಳಿಸಿದ್ದಾರೆ.

ಯುನೈಟೆಡ್ ಸ್ಟೇಟ್ಸ್‌ನಲ್ಲಿ ಹೆಚ್ಚುತ್ತಿರುವ ಬಂದೂಕು ಹಿಂಸಾಚಾರದ ಘಟನೆಗಳ ಬಗ್ಗೆ ಆತಂಕ ಹೊರ ಹಾಕಿರುವ ಅಧ್ಯಕ್ಷ ಜೋ ಬಿಡೆನ್, ಮಕ್ಕಳನ್ನು ಮತ್ತು ಕುಟುಂಬಗಳನ್ನು ರಕ್ಷಿಸುವ ಸಲುವಾಗಿ US ಆಕ್ರಮಣಕಾರಿ ಶಸ್ತ್ರಾಸ್ತ್ರಗಳನ್ನು ನಿಷೇಧಿಸುವ ಅಗತ್ಯವಿದೆ. ಅವುಗಳನ್ನು ಹೊಂದು ವಯಸ್ಸನ್ನು 18 ರಿಂದ 21 ಕ್ಕೆ ಹೆಚ್ಚಿಸುವ ಅಗತ್ಯವಿದೆ' ಎಂದು ಹೇಳಿದ್ದಾರೆ.

ಇತ್ತೀಚಿನ ಘಟನೆಗಳಲ್ಲಿ, ಫ್ಲೋರಿಡಾದ ಒರ್ಲ್ಯಾಂಡೊದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯ ನಂತರ ಭಾನುವಾರ 7 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪರಿಚಿತ ದುಷ್ಕರ್ಮಿಯೊಬ್ಬ ಬಂದೂಕನ್ನು ಹೊರತೆಗೆದು ಗುಂಪಿನತ್ತ ಗುಂಡು ಹಾರಿಸಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಸಿಎನ್‌ಎನ್ ವರದಿ ಮಾಡಿದೆ.

Recommended Video

West Indies ವಿರುದ್ಧದ 2ನೇ ಟಿ20 ಪಂದ್ಯ ತಡವಾಗಿ ಆರಂಭವಾಗಲು ಇದೇ ಕಾರಣ | Sports | OneIndia Kannada

ಟೆಕ್ಸಾಸ್‌ನ ಹಾಲ್ಟೋಮ್ ನಗರದಲ್ಲಿ ಶನಿವಾರ ಇದೇ ರೀತಿಯ ಘಟನೆ ನಡೆದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಅಧಿಕಾರಿಗಳು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಒಬ್ಬ ಮಹಿಳೆ ಮನೆಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಮತ್ತೊಬ್ಬ ವ್ಯಕ್ತಿಯನ್ನು ಮನೆಯ ಡ್ರೈವೇನಲ್ಲಿ ಗುಂಡು ಹಾರಿಸಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

English summary
Multiple people have been killed in a mass shooting in America's Washington.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X