ನಾನು ಬಾಲ್ಯದಲ್ಲಿ ರಾಮಾಯಣ, ಮಹಾಭಾರತ ಕಥೆ ಕೇಳುತ್ತಿದ್ದೆ: ಒಬಾಮ
ವಾಷಿಂಗ್ಟನ್, ನವೆಂಬರ್ 17: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಬಾಲ್ಯದಲ್ಲಿ ರಾಮಾಯಣ, ಮಹಾಭಾರತ ಕಥೆಗಳನ್ನು ಕೇಳುತ್ತಿದ್ದರಂತೆ.
ಬರಾಕ್ ಒಬಾಮ ಇತ್ತೀಚೆಗೆ ಬರೆದಿರುವ ಎ ಪ್ರಾಮಿಸ್ಡ್ ಲ್ಯಾಂಡ್ ಕೃತಿಯಲ್ಲಿ ಭಾರತದ ಬಗ್ಗೆ ತಮಗಿರುವ ಪ್ರೀತಿಯನ್ನು ವಿವರಿಸಿದ್ದಾರೆ.
ಮೊದಲಿನಿಂದಲೂ ರಾಮಾಯಣ, ಮಹಾಭಾರತ ಕಥೆಗಳನ್ನು ಕೇಳಿದ್ದರಿಂದಲೋ ಅಥವಾ ನನಗೆ ಪೂರ್ವ ರಾಷ್ಟ್ರಗಳ ಧರ್ಮಗಳ ಬಗೆಗಿದ್ದ ಆಸಕ್ತಿಯೋ ಅಥವಾ ಭಾರತದ ಖಾದ್ಯಗಳ ದಾಲ್ ಮತ್ತು ಕೀಮಾ ತಿನಿಸುಗಳನ್ನು ತಯಾರಿಕೆ ಕಲಿಕೆಯ ಜತೆ ಜತೆಗೆ ಭಾರತದ ಬಗ್ಗೆ ವಿಶೇಷ ಪ್ರೀತಿ ಮೂಡಿದೆ.

ಒಬಾಮಾ ಅವರು ಎ ಪ್ರಾಮಿಸ್ಡ್ ಲ್ಯಾಂಡ್ ಕೃತಿಯಲ್ಲಿ 2008ರ ಅಧ್ಯಕ್ಷೀಯ ಪ್ರಚಾರದಿಂದ ಅವಧಿ ಪೂರ್ಣಗೊಳ್ಳುವವರೆಗಿನ ಘಟನೆಗಳನ್ನು ಉಲ್ಲೇಖಿಸಿದ್ದಾರೆ. ಇತ್ತೀಚೆಗಷ್ಟೇ ಅದೇ ಕೃತಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಗೇಲಿ ಮಾಡಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
'ನಾನು ಅಮೆರಿಕದ ಅಧ್ಯಕ್ಷರಾಗುವ ಮೊದಲು ಭಾರತಕ್ಕೆ ಭೇಟಿ ನೀಡಿರಲಿಲ್ಲ, ಆದರೆ ಆ ದೇಶ ನನ್ನ ಕಲ್ಪನೆಯಲ್ಲಿ ಯಾವಾಗಲೂ ವಿಶೇಷ ಸ್ಥಾನವನ್ನು ಪಡೆದಿತ್ತು' ಎಂದು ವಿವರಿಸಿದ್ದಾರೆ.
ಭಾರತದ ಬಗ್ಗೆ ವರ್ಣಿಸುತ್ತಾ ಜಗತ್ತಿನ ಆರನೇ ಒಂದು ಭಾಗದಷ್ಟು ಜನಸಂಖ್ಯೆ ಹೊಂದಿರುವ, ಎರಡು ಸಾವಿರ ವಿಭಿನ್ನ ಜನಾಂಗಗಳು, 700ಕ್ಕೂ ಹೆಚ್ಚು ಭಾಷೆಗಳನ್ನು ಮಾತನಾಡುವ ಆ ದೇಶ ತನ್ನ ವೈವಿಧ್ಯತೆಯಿಂದಲೇ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದೆ ಎಂದಿದ್ದಾರೆ.












Click it and Unblock the Notifications