ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಫ್ಘಾನ್‌ನಿಂದ ಸೇನಾ ವಾಪಸ್ ನಿರ್ಧಾರಕ್ಕೆ ಬದ್ಧನಾಗಿ ನಿಂತಿದ್ದೇನೆ; ಬೈಡನ್

By ಒನ್‌ಇಂಡಿಯಾ ಡೆಸ್ಕ್‌
|
Google Oneindia Kannada News

ವಾಷಿಂಗ್ಟನ್‌, ಆಗಸ್ಟ್‌ 17: ಅಫ್ಘಾನಿಸ್ತಾನದಲ್ಲಿ ಅಮೆರಿಕದ ಸಿಬ್ಬಂದಿ ಮೇಲೆ ದಾಳಿ ನಡೆದರೆ, ಅವರ ಕಾರ್ಯಾಚರಣೆಗೆ ಅಡ್ಡಿ ಮಾಡಿದರೆ ಅತ್ಯಂತ ಪ್ರಬಲ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ತಾಲಿಬಾನಿಗಳಿಗೆ ಎಚ್ಚರಿಕೆ ರವಾನಿಸಿದ್ದಾರೆ.

ಅಫ್ಘಾನಿಸ್ತಾನದಿಂದ ನಮ್ಮ ಸೇನೆಯನ್ನು ಶೀಘ್ರವೇ ಕರೆಸಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ನಮ್ಮ ಗಮನ ಕೇಂದ್ರೀಕರಿಸಲಾಗಿದೆ. ಆದಷ್ಟು ಬೇಗ ನಮ್ಮ ಜನರನ್ನು ಸುರಕ್ಷಿತವಾಗಿ ಇಲ್ಲಿಗೆ ಕರೆತರಲಾಗುತ್ತದೆ ಎಂದು ಬೈಡನ್ ಟ್ವೀಟ್ ಮಾಡಿದ್ದಾರೆ.

ಅಫ್ಘಾನಿಸ್ತಾನದಿಂದ ತಮ್ಮ ಸೇನೆಯನ್ನು ವಾಪಸ್ ಕರೆಸಿಕೊಳ್ಳುವ ತಮ್ಮ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಹೇಳಿರುವ ಬೈಡನ್, ತಾಲಿಬಾನಿಗಳಿಗೆ ಅಧಿಕಾರ ಬಿಟ್ಟುಕೊಟ್ಟಿರುವ ಅಫ್ಘನ್ ನಾಯಕತ್ವವನ್ನು ದೂಷಿಸಿದ್ದಾರೆ.

Stand Squarely Behind My Decision To Withdraw Our Forces Says Joe Biden

"ಸೇನಾ ಪಡೆಯನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆ ಕುರಿತು ತಾಲಿಬಾನಿಗಳಿಗೆ ಸ್ಪಷ್ಟ ಸಂದೇಶ ರವಾನಿಸಲಾಗಿದೆ. ಹೀಗಿದ್ದರೂ ನಮ್ಮ ಸಿಬ್ಬಂದಿ ಮೇಲೆ ದಾಳಿ ನಡೆಸಿದರೆ ಅಥವಾ ಕಾರ್ಯಾಚರಣೆಗೆ ಅಡ್ಡಿಪಡಿಸಿದರೆ ಅಮೆರಿಕ ತೀಕ್ಷ್ಣ ರೀತಿ ಪ್ರತಿಕ್ರಿಯೆ ನೀಡಲಿದೆ" ಎಂದು ಎಚ್ಚರಿಕೆ ಸಂದೇಶ ನೀಡಿದ್ದಾರೆ.

ಈ ಹಿಂದೆ ರೂಪಿಸಿದ ಯೋಜನೆಯಂತೆ ಅಮೆರಿಕ ತನ್ನ ಸೇನಾ ಪಡೆಯನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಳಿಸಲು ಬದ್ಧವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

20 ವರ್ಷಗಳ ನಂತರ ಅಫ್ಘಾನ್‌ನಿಂದ ಅಮೆರಿಕ ತನ್ನ ಸೇನಾ ಪಡೆಯನ್ನು ಹಿಂದಕ್ಕೆ ಕರೆಸಿಕೊಳ್ಳುತ್ತಿದ್ದಂತೆ ತಾಲಿಬಾನಿಗಳು ಆಕ್ರಮಣ ಮಾಡಿ ಅಫ್ಘಾನಿಸ್ತಾನನ್ನು ವಶಪಡಿಸಿಕೊಂಡಿದ್ದಾರೆ. ದೇಶದಿಂದ ಸಾವಿರಾರು ಮಂದಿ ಓಡಿಹೋಗಲು ಕಾಬೂಲ್ ವಿಮಾನದತ್ತ ನುಗ್ಗುತ್ತಿದ್ದಾರೆ.

'ದೊಡ್ಡಣ್ಣ' ಅಲ್ಲ 'ದಡ್ಡಣ್ಣ'! ಅಮೆರಿಕದ ತಲೆಯಲ್ಲಿ ಬುದ್ಧಿನೇ ಇಲ್ವಾ? 'ದೊಡ್ಡಣ್ಣ' ಅಲ್ಲ 'ದಡ್ಡಣ್ಣ'! ಅಮೆರಿಕದ ತಲೆಯಲ್ಲಿ ಬುದ್ಧಿನೇ ಇಲ್ವಾ?

ಅಫ್ಘಾನಿಸ್ತಾನದಲ್ಲಿ ಕಳೆದ ಕೆಲವು ತಿಂಗಳಿಂದ, ಅಂದರೆ ಅಮೆರಿಕ ಮಿಲಿಟರಿ ಹೊರ ಹೋಗಲು ತೀರ್ಮಾನಿಸಿದ ಬಳಿಕ, ತಾಲಿಬಾನ್ ಉಗ್ರರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ತಾಲಿಬಾನ್‌ನ ಸಶಸ್ತ್ರದಳ ಅನೇಕ ಪ್ರದೇಶಗಳಿಗೆ ನುಗ್ಗಿ ಹಿಂಸೆ ನಡೆಸುತ್ತಿದೆ. ಅಫ್ಘಾನಿಸ್ತಾನದ ಸೈನಿಕರು ಹಾಗೂ ಪೊಲೀಸರನ್ನ ಕಂಡರೆ ಸಾಕು ಅಲ್ಲೇ ಗುಂಡಿಕ್ಕಿ ಸಾಯಿಸುತ್ತಿದ್ದಾರೆ.

ಈಗಾಗಲೇ ಅಫ್ಘಾನಿಸ್ತಾನದ ಗಡಿ, ಬಹುತೇಕ ರಾಜ್ಯಗಳ ರಾಜಧಾನಿಗಳು ತಾಲಿಬಾನ್‌ನ ವಶಕ್ಕೆ ಸಿಕ್ಕಿದ್ದಾಗಿದೆ. ಅಫ್ಘಾನ್ ರಾಜಧಾನಿ ಕಾಬೂಲ್ ಮೇಲೆ ಉಗ್ರರ ಕೆಂಗಣ್ಣು ನೆಟ್ಟಿದೆ. ಲಕ್ಷಾಂತರ ಜನರು ಜೀವ ಉಳಿಸಿಕೊಳ್ಳಲು ಓಡಿ ಹೋಗುತ್ತಿದ್ದಾರೆ.

ಈ ಪರಿಸ್ಥಿತಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಿರ್ಧಾರವೇ ಕಾರಣ ಎಂದು ಅಮೆರಿಕ ಸೇರಿದಂತೆ ಹಲವು ದೇಶದ ಅಫ್ಘಾನ್ ನಾಗರಿಕರು ದೂರುತ್ತಿದ್ದಾರೆ.

Stand Squarely Behind My Decision To Withdraw Our Forces Says Joe Biden

ಅಮೆರಿಕರನ್ನುದ್ದೇಶಿಸಿ ಮಾತನಾಡಿರುವ ಬೈಡನ್, 'ಈ ಮಿಷನ್ ಪೂರ್ಣಗೊಳ್ಳುತ್ತಿದ್ದಂತೆ ನಮ್ಮ ಸೇನೆಯನ್ನು ವಾಪಸ್ ಕರೆಸಿಕೊಳ್ಳುವ ಪ್ರಕ್ರಿಯೆ ಮುಕ್ತಾಯವಾಗಲಿದೆ. 20 ವರ್ಷಗಳ ಬಳಿಕ ಈ ಅಧ್ಯಾಯವನ್ನು ಅಂತ್ಯಗೊಳಿಸುತ್ತಿದ್ದೇವೆ. ಎಷ್ಟೇ ದೊಡ್ಡ ಪ್ರಮಾಣದಲ್ಲಿ ಸೇನೆ ನಿಯೋಜಿಸಿದರೂ ಸುಭದ್ರ ಅಫ್ಘಾನಿಸ್ತಾನವನ್ನು ರಚಿಸುವುದು ಸಾಧ್ಯವಿಲ್ಲ ಎಂಬುದಕ್ಕೆ ಈಗ ಕಾಣುತ್ತಿರುವ ದೃಶ್ಯಗಳೇ ಸಾಕ್ಷಿ" ಎಂದು ಹೇಳಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಪ್ರಸ್ತುತ ಪರಿಸ್ಥಿತಿ ಕಂಡು ಸಂಕಟವಾಗುತ್ತಿದೆ. ಆದರೆ ನಮ್ಮ ಸೇನಾ ಪಡೆಯನ್ನು ಹಿಂಪಡೆಯುವ ನಿರ್ಧಾರದ ಕುರಿತು ಪಶ್ಚಾತ್ತಾಪವಿಲ್ಲ ಎಂದಿದ್ದಾರೆ ಬೈಡನ್.

"ಅಫ್ಘಾನಿಸ್ತಾನದ ಪರಿಸ್ಥಿತಿ ಮೇಲೆ ನಿಗಾ ವಹಿಸಿರುವ ನಾಲ್ಕನೇ ಅಧ್ಯಕ್ಷ ನಾನು. ಇದೇ ಹೊಣೆಯನ್ನು ಮುಂದಿನ ಅಧ್ಯಕ್ಷರಿಗೂ ಮುಂದುವರಿಸಲು ಸಾಧ್ಯವಿಲ್ಲ. ಜೀವವನ್ನೇ ಪಣಕ್ಕಿಟ್ಟು ಮತ್ತೊಂದು ದೇಶದ ನಾಗರಿಕ ಯುದ್ಧದಲ್ಲಿ ನಿರಂತರವಾಗಿ ಹೋರಾಡುವಂತೆ ನಮ್ಮ ಪಡೆಗಳಿಗೆ ಸೂಚಿಸಲು ಸಾಧ್ಯವಿಲ್ಲ. ಇದು ಅಮೆರಿಕದ ಜನತೆಗೆ ಬೇಕಿಲ್ಲ" ಎಂದು ಹೇಳಿದ್ದಾರೆ.

"ನಾನು ಅಧಿಕಾರಕ್ಕೆ ಏರಿದ ಸಂದರ್ಭದಲ್ಲಿ ನನ್ನ ಎದುರಿಗೆ ಎರಡು ಆಯ್ಕೆಗಳಿದ್ದವು. ಒಂದು, ನಮ್ಮ ಒಪ್ಪಂದವನ್ನು ಮುಂದುವರಿಸಬೇಕಿತ್ತು. ಮಿತ್ರರಾಷ್ಟ್ರದೊಂದಿಗಿನ ನಮ್ಮ ಸೇನಾ ಪಡೆಯನ್ನು ಸುರಕ್ಷಿತವಾಗಿ ವಾಪಸ್ ಕರೆಸಿಕೊಳ್ಳುವುದು ಅಥವಾ ಅಲ್ಲಿ ನಮ್ಮ ಉಪಸ್ಥಿತಿಯನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಅಮೆರಿಕದಿಂದ ಹೆಚ್ಚು ಸೇನೆಯನ್ನು ರವಾನಿಸಿ ಬಿಕ್ಕಟ್ಟು ನಿವಾರಣೆಗಾಗಿ ಹೋರಾಟ ನಡೆಸಬೇಕಿತ್ತು," ಎಂದು ಎರಡು ದಿನಗಳ ಹಿಂದೆ ಜೋ ಬೈಡನ್ ಹೇಳಿದ್ದರು.

Recommended Video

ಹೆಲಿಕಾಪ್ಟರ್ ತುಂಬಾ ಹಣ ತುಂಬಿಕೊಂಡು ಅಫ್ಘಾನಿಸ್ತಾನದಿಂದ ಓಡಿಹೋದ ಅಶ್ರಫ್ ಘನಿ! | Oneindia Kannada

ಇದೇ ಆಗಸ್ಟ್ 31ರೊಳಗೆ ಅಫ್ಘಾನಿಸ್ತಾನದಿಂದ ಸುಮಾರು 30,000 ಜನರನ್ನು ಸ್ಥಳಾಂತರಿಸುವ ಪ್ರಕ್ರಿಯೆ ನಡೆಸುವುದಕ್ಕೆ ಅಧ್ಯಕ್ಷ ಜೋ ಬೈಡನ್ ಗಡುವು ನೀಡಿದ್ದರು ಎಂದು ಪೆಂಟಗಾನ್ ಅಂದಾಜಿಸಿದೆ.

English summary
America President Joe Biden defended the US pullout of Afghanistan Monday, saying he stood by the policy and that it was time to leave after 20 years of conflict
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X