ಎಚ್1 ವೀಸಾ ಹೊಂದಿರುವವರಿಗೆ ಶುಭ ಸುದ್ದಿ ಕೊಟ್ಟ ಟ್ರಂಪ್
ವಾಷಿಂಗ್ಟನ್, ಜನವರಿ 11: ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಎಚ್ 1 ಬಿ ವೀಸಾದಾರರಿಗೆ ಶುಭ ಸುದ್ದಿ ಕೊಟ್ಟಿದ್ದಾರೆ. ಬಹುತೇಕ ಭಾರತದ ಐಟಿ ವೃತ್ತಿಪರರು ಅರ್ಜಿ ಹಾಕುವ ಈ ಬೇಡಿಕೆಯ ವೀಸಾ ನಿಯಮದಲ್ಲಿ ಭಾರಿ ಬದಲಾವಣೆ ತರುವ ಸುಳಿವನ್ನು ಟ್ರಂಪ್ ಸರ್ಕಾರ ನೀಡಿದೆ.
ಅಮೆರಿಕದಲ್ಲಿ ಗ್ರೀನ್ ಕಾರ್ಡ್ ಅಥವಾ ಶಾಶ್ವತ ನೆಲೆ ಕಂಡುಕೊಳ್ಳಲು ಯೋಜನೆ ಹಾಕಿಕೊಂಡಿರುವ ವೃತ್ತಿಪರರಿಗೆ ಇದು ರಹದಾರಿ ನೀಡಲಿದೆ. ಸಾಮಾನ್ಯವಾಗಿ 3 ರಿಂದ 6 ವರ್ಷಗಳ ಅವಧಿಗೆ ವಿದೇಶಿ ವೃತ್ತಿಪರರಿಗೆ ಅಮೆರಿಕದಲ್ಲಿ ಕಾರ್ಯ ನಿರ್ವಹಿಸಲು ಅವಕಾಶವಿರುತ್ತದೆ. ಆದರೆ, ವೃತ್ತಿ ಸಂಬಂಧಿ ವೀಸಾ ನವೀಕರಣ ಮಾಡುವುದು ಹೆಚ್ಚಾಗಿದೆ. ಕಡಿಮೆ ದರದಲ್ಲಿ ಕೌಶಲ್ಯಪೂರ್ಣ ಮಾನವ ಸಂಪನ್ಮೂಲವನ್ನು ಭಾರತ ಹಾಗೂ ಚೀನಾ ಒದಗಿಸುತ್ತಿದೆ.

ಆದರೆ, ಟ್ರಂಪ್ ಅಧಿಕಾರಕ್ಕೆ ಬಂದ ನಂತರ ಎಚ್-1ಬಿ ವೀಸಾ ಸಂಖ್ಯೆಗಳ ಮೇಲೆ ನಿಯಂತ್ರಣ ಹೇರಿದ್ದರು. ವೀಸಾ ನೀತಿಯ ದೆಸೆಯಿಂದ ಸುಮಾರು 150 ಬಿಲಿಯನ್ ಡಾಲರ್ ಮೌಲ್ಯದ ಭಾರತದ ಐಟಿ ಕ್ಷೇತ್ರ ಆತಂಕದಲ್ಲಿದೆ. ವೀಸಾ ನೀತಿಯಲ್ಲಿ ಮಾರ್ಪಾಟು ಹಾಗೂ ಎಚ್ 1 ಬಿ ವೀಸಾ ಪಡೆಯುವ ಪ್ರತಿಭಾವಂತರ ಬಗ್ಗೆ ಮೋದಿ ಅವರು ಕಾಳಜಿ ವಹಿಸಿ ಯುಎಸ್ ಪ್ರತಿನಿಧಿಗಳ ಜತೆ ಈ ಬಗ್ಗೆ ಮಾತುಕತೆ ನಡೆಸಿದ್ದರು.
H1-B holders in the United States can rest assured that changes are soon coming which will bring both simplicity and certainty to your stay, including a potential path to citizenship. We want to encourage talented and highly skilled people to pursue career options in the U.S.
— Donald J. Trump (@realDonaldTrump) January 11, 2019
ಅಮೆರಿಕದ ಸಂಸತ್ತಿನಲ್ಲಿ (ಯುಎಸ್ ಹೌಸ್ ಆಫ್ ರೆಪ್ರಸೆಂಟೇಟಿವ್ಸ್) ಎಚ್-1ಬಿ ವೀಸಾದಾರರಿಗೆ ಕನಿಷ್ಠ ವೇತನವನ್ನು ದುಪ್ಪಟ್ಟಿಗಿಂತಲೂ ಹೆಚ್ಚು ಅಂದರೆ 60,000 ಡಾಲರ್ನಿಂದ 1,30,000 ಡಾಲರ್ಗಳಿಗೆ ಏರಿಸಲು ಕರೆ ನೀಡಿದ ಎಚ್-1ಬಿ ವೀಸಾ ಸುಧಾರಣಾ ಮಸೂದೆ ಮಂಡನೆಯಾಗಿದೆ. ಅಮೆರಿಕದ ಸಂಸತ್ತಿನಲ್ಲಿ ಎಚ್ 1 ಬಿ ವೀಸಾದಾರರ ಕನಿಷ್ಠ ವೇತನವನ್ನು ದುಪ್ಪಟ್ಟುಗೊಳಿಸುವ ಮಸೂದೆ ಅಂಗೀಕೃತವಾದರೆ ಈ ವೇತನ ಮೊತ್ತ ಭಾರತೀಯ ಐಟಿ ರಂಗದ ರಫ್ತು ಆದಾಯದ ಶೇಕಡಾ 60ರಷ್ಟು ಆಗುತ್ತದೆ .












Click it and Unblock the Notifications