• search
  • Live TV
ವಾಷಿಂಗ್ಟನ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಟ್ರಂಪ್ ಶ್ವೇತಭವನದಲ್ಲಿರುವಾಗಲೇ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದರು:ಸಲಹೆಗಾರ

|

ವಾಷಿಂಗ್ಟನ್,ಮಾರ್ಚ್ 2: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನದಲ್ಲಿರುವಾಗಲೇ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದರು ಎಂದು ಅವರ ಸಲಹೆಗಾರರೊಬ್ಬರು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಡೊನಾಲ್ಡ್ ಟ್ರಂಪ್ ಕೊರೊನಾ ಸೋಂಕಿಗೆ ಒಳಗಾಗಿದ್ದರು,ಹಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ನರ ರಾಕ್ಷಸರ ಜೊತೆ ಮತ್ತೆ ಸಂಧಾನ..! ವರ್ಕೌಟ್ ಆಗುತ್ತಾ ಅಮೆರಿಕದ ತಂತ್ರ..?

ಡೊನಾಲ್ಡ್ ಟ್ರಂಪ್ ಮತ್ತವರ ಪತ್ನಿ ಮೆಲಾನಿಯಾ ಜನವರಿಯಲ್ಲಿಯೇ ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಲಸಿಕೆ ಹಾಕಿಸಿಕೊಂಡಿದ್ದರು ಎನ್ನುವ ವಿಷಯವನ್ನು ಬಹಿರಂಗಗೊಳಿಸಲಾಗಿದೆ.

ಜನವರಿಯಲ್ಲಿ ಟ್ರಂಪ್ ಹಾಗೂ ಮೆಲಾನಿಯಾ ಲಸಿಕೆ ಹಾಕಿಸಿಕೊಂಡಿದ್ದರು, ಜನವರಿ 20 ರಂದು ಜೋ ಬೈಡನ್ ಅವರು ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.

ಅದಕ್ಕೂ ಮೊದಲು ಡಿಸೆಂಬರ್ 21 ರಂದು ಅವರು ಸಾರ್ವಜನಿಕವಾಗಿ ಕೊರೊನಾ ಲಸಿಕೆ ಹಾಕಿಸಿಕೊಂಡರು. ಆದರೆ ಟ್ರಂಪ್ ಕೊರೊನಾ ಲಸಿಕೆ ಹಾಕಿಸಿಕೊಂಡಿರುವ ವಿಷಯ ಬಹಿರಂಗವಾಗಿರಲಿಲ್ಲ.

ಶ್ವೇತಭವನದಿಂದ ಹೊರನಡೆದ ಬಳಿಕ ಮೊದಲ ಬಾರಿಗೆ ಭಾನುವಾರ ಸಾರ್ವಜನಿಕವಾಗಿ ಕಾಣಿಸಿಕೊಂಡು ಮಾತನಾಡಿದ ಟ್ರಂಪ್, ಅಮೆರಿಕದಲ್ಲಿ 5,00,000ಕ್ಕೂ ಹೆಚ್ಚು ಜನರನ್ನು ಸಾವಿಗೆ ತಳ್ಳಿರುವ ಕೊರೊನಾ ವಿರುದ್ಧ ಹೋರಾಟಕ್ಕೆ ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ತಿಳಿಸಿದರು. ಜತೆಗೆ ಜೋ ಬೈಡನ್ ಆಡಳಿತವನ್ನು ದೂಷಿಸಿದರು.

English summary
Donald Trump and his wife, Melania, were vaccinated against the coronavirus in January before leaving the White House, an advisor to the former president.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X