ಕಾಶ್ಮೀರ ವಿಚಾರದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ: ವಿಶ್ವಸಂಸ್ಥೆ

ವಾಷಿಂಗ್ಟನ್, ಸೆಪ್ಟೆಂಬರ್ 11: ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಮಸ್ಯೆಯನ್ನೂ ಅವರೇ ಬಗೆಹರಿಸಿಕೊಳ್ಳಬೇಕು ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಪರಿಚ್ಛೇದ 370 ರದ್ದುಗೊಳಿಸಿದ ಬೆನ್ನಲ್ಲೇ ಪಾಕಿಸ್ಥಾನ ಹಾಗೂ ಭಾರತದ ನಡುವೆ ಪರಿಸ್ಥಿತಿ ಉಲ್ಭಣಿಸಿದೆ. ಯಾವುದೇ ಕಾರಣಕ್ಕೆ ಎರಡೂ ದೇಶದ ನಡುವೆ ಮಧ್ಯ ಪ್ರವೇಶಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ, ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಫ್ರಾನ್ಸ್‌ನಲ್ಲಿ ನಡೆದ ಜಿ7 ಶೃಂಗ ಸಭೆಯಲ್ಲಿ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾಗಿ ಹೇಳಿದ್ದಾರೆ.

UN chief Says India Pakistan To Resolve Through Dialogue

ಗುಟೆರೆಸ್ ಅವರ ಸಂದೇಶ ಎಲ್ಲರಿಗೂ ಒಂದೇ ಆಗಿದೆ. ಸಾರ್ವಜನಿಕವಾಗಿ ಮತ್ತು ವೈಯಕ್ತಿಕವಾಗಿ ಕಾಶ್ಮೀರ ವಿಚಾರದಲ್ಲಿ ಎರಡೂ ದೇಶಗಳ ಮಧ್ಯೆ ಉಲ್ಭಣಗೊಳ್ಳಬಹುದಾದ ಪರಿಸ್ಥಿತಿಗಳ ಬಗ್ಗೆ ಅವರಿಗೆ ಆತಂಕವಿದೆ. ಎರಡೂ ದೇಶಗಳು ಪರಸ್ಪರ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಹೇಳುತ್ತಿದ್ದಾರೆ ಎಂದರು.

ಸೆಪ್ಟೆಂಬರ್ ಅಂತ್ಯದಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ನಡೆಯಲಿದ್ದು ಅದರಲ್ಲಿ ಕಾಶ್ಮೀರ ವಿಚಾರವಾಗಿ ಎರಡು ದೇಶಗಳ ಮಧ್ಯೆ ಗುಟೆರೆಸ್ ಮಧ್ಯ ಪ್ರವೇಶಿಸುತ್ತಾರೆಯೇ ಎಂದು ಕೇಳಲಾದ ಪ್ರಶ್ನೆಗೆ ವಕ್ತಾರರು ಈ ರೀತಿ ಉತ್ತರಿಸಿದ್ದಾರೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭಾಗವಹಿಸಲಿದ್ದಾರೆ.

ಕಾಶ್ಮೀರ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡಿ ಎಂದು ಮನವಿ ಮಾಡಿ ಕಳೆದ ಸೋಮವಾರ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಶಾಶ್ವತ ಪ್ರತಿನಿಧಿ ಮಲೀಹಾ ಲೊಧಿ ಗುಟೆರೆಸ್ ಅವರನ್ನು ಭೇಟಿ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+