ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

WHOಗೆ ಅರ್ಥಿಕ ನೆರವು ಸ್ಥಗಿತಗೊಳಿಸಿರುವ ಅಮೆರಿಕ ನಿರ್ಧಾರ ಸರಿಯಲ್ಲ: ವಿಶ್ವಸಂಸ್ಥೆ

|
Google Oneindia Kannada News

ವಾಷಿಂಗ್ಟನ್, ಏಪ್ರಿಲ್ 15: ವಿಶ್ವದಾದ್ಯಂತ ಕೊರೊನಾ ವೈರಸ್ ಮರಣಮೃದಂಗ ಮುಂದುವರೆದಿದೆ. ಈ ಸಂದರ್ಭದಲ್ಲಿ ವಿಶ್ವ ಆರೋಗ್ಯ ಸಂಸ್ಥೆಗೆ ನೀಡುತ್ತಿದ್ದ ಆರ್ಥಿಕ ನೆರವು ಅಮೆರಿಕ ಸ್ಥಗಿತಗೊಳಿಸಿರುವುದು ಸರಿಯಲ್ಲ ಎಂದು ವಿಶ್ವ ಸಂಸ್ಥೆ ಅಭಿಪ್ರಾಯಪಟ್ಟಿದೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ವಿಶ್ವಸಂಸ್ಥೆ ಅಧ್ಯಕ್ಷ ಅಂಟಾನಿಯೋ ಗುಟೆರೆಸ್ ಅವರು, ಇಡೀ ವಿಶ್ವವೇ ಮಾರಕ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿದೆ.

ಇಂತಹ ಸಂದರ್ಭದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಪಾತ್ರ ನಿರ್ಣಾಯಕವಾದದ್ದು, ಎಂತಹುದೇ ಪರಿಸ್ಥಿತಿಯಲ್ಲೂ ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕ್ಕೆ ಮತ್ತು ಯೋಜನೆಗಳಿಗೆ ಅಡೆತಡೆಯಾಗಬಾರದು.

UN Chief Says Not The Time To Reduce WHO Resources

ಮಾನವೀಯತೆ ಈ ಹೋರಾಟ ನಮ್ಮೆಲ್ಲರದ್ದು. ಹೀಗಾಗಿ ಅಮೆರಿಕ ನಿರ್ಧಾರ ಈ ಸಮಯಕ್ಕೆ ಸರಿಯಲ್ಲ ಎಂದು ಹೇಳಿದ್ದಾರೆ. ಕೊರೊನಾವೈರಸ್ ವಿರುದ್ಧ ವಿಶ್ವ ಆರೋಗ್ಯ ಸಂಸ್ಥೆ ಹೋರಾಡುತ್ತಿದ್ದು, ಆರೋಗ್ಯ ಕಾರ್ಯಕರ್ತರು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹೋರಾಡುತ್ತಿದ್ದಾರೆ.

ವೈರಸ್ ಮತ್ತಷ್ಟು ಜೀವ ಹಾನಿ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ನಾವು ಇಂತಹ ಕಠಿಣ ಸಂದರ್ಭದಲ್ಲಿ ನಾವು ಒಗ್ಗಟ್ಟು ಪ್ರದರ್ಶನ ಮಾಡಬೇಕು. WHO ಹೋರಾಟಕ್ಕೆ ಬೆಂಬಲವಾಗಿ ನಿಂತು ಸಾಂಘಿಕವಾಗಿ ವೈರಸ್ ತೊಲಗಿಸಬೇಕು ಎಂದು ಹೇಳಿದ್ದಾರೆ.

ವಿಶ್ವದಾದ್ಯಂತ ಕೊರೊನಾ ಹರಡಲು ಕಾರಣವಾದ ಚೀನಾದ ಮೇಲೆ ವಿಶ್ವ ಅರೋಗ್ಯ ಸಂಸ್ಥೆ ಮೃದು ಧೋರಣ ತೋರುತ್ತಿದೆ. ವೈರಸ್ ಮನುಷ್ಯನಿಂದ ಮನುಷ್ಯನಿಗೆ ಹರಡುವುದಿಲ್ಲ ಎಂದು ಆರೋಗ್ಯ ಸಂಸ್ಥೆ ಸುಳ್ಳು ಹೇಳಿತ್ತು ಎಂದ ಆರೋಪಿಸಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆಗೆ ನೀಡುತ್ತಿದ್ದ ಆರ್ಥಿಕ ನೆರವನ್ನು ತಡೆ ಹಿಡಿದಿದ್ದಾರೆ.

English summary
United Nations Secretary-General Antonio Guterres said on Tuesday it was “not the time” to reduce resources for the World Health Organization after President Donald Trump halted U.S. funding over the body’s handling of the coronavirus pandemic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X